ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ಪತ್ರೆಗೆ ಬೆಂಕಿ ಹೊತ್ತಿಕೊಂಡರೂ ಶಸ್ತ್ರಚಿಕಿತ್ಸೆ ಮಾಡಿ ಜೀವ ಉಳಿಸಿದ ವೈದ್ಯರು

|
Google Oneindia Kannada News

ರಷ್ಯಾ, ಏಪ್ರಿಲ್ 3: ರಷ್ಯಾದ ಆಸ್ಪತ್ರೆಯೊಂದರಲ್ಲಿ ಶನಿವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಆ ಆತಂಕದ ನಡುವೆಯೂ ವೈದ್ಯರ ತಂಡ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿ ಜೀವ ಉಳಿಸಿದ್ದಾರೆ.

ರಷ್ಯಾದ ಬ್ಲಾಗೊವೇಶಂಕ್ಸ್‌ನ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಆಸ್ಪತ್ರೆಯಲ್ಲಿದ್ದ 120ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಹೊರಗೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹೋರಾಡುತ್ತಿದ್ದರೆ, ಒಳಗೆ ವೈದ್ಯರು ಜೀವ ಉಳಿಸಲು ಹೋರಾಡಿದ್ದಾರೆ.

ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ, ಇಬ್ಬರು ಸಜೀವ ದಹನಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ, ಇಬ್ಬರು ಸಜೀವ ದಹನ

ಶಸ್ತ್ರಚಿಕಿತ್ಸೆ ಸಮಯದಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಶಸ್ತ್ರಚಿಕಿತ್ಸಾ ಘಟಕವಿದ್ದು, ಫ್ಯಾನ್‌ ಮೂಲಕ ಹೊಗೆ ಆಚೆ ಹೋಗುವಂತೆ ವ್ಯವಸ್ಥೆ ಮಾಡಿ ವಿದ್ಯುತ್ ಕಡಿತಗೊಳ್ಳುವ ಮುನ್ನ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ರೋಗಿಯನ್ನು ಸ್ಥಳಾಂತರಿಸಲಾಗಿದೆ.

Surgeons Perform Heart Surgery Inbetween Blaze In Russia Hospital

"ಶಸ್ತ್ರಚಿಕಿತ್ಸೆ ಮುಗಿಸುವ ಅನಿವಾರ್ಯತೆಯಿತ್ತು. ಆ ವ್ಯಕ್ತಿಯನ್ನು ರಕ್ಷಿಸಲು ನಾವು ಎಲ್ಲಾ ಪ್ರಯತ್ನವನ್ನು ಮಾಡಿದೆವು. ಎಂಟು ವೈದ್ಯರು ಹಾಗೂ ನರ್ಸ್‌ಗಳು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆವು" ಎಂದು ಹೇಳಿದ್ದಾರೆ.

ಆಸ್ಪತ್ರೆಯನ್ನು 1907ರಲ್ಲಿ ಕಟ್ಟಲಾಗಿತ್ತು. ಮರದ ಸೀಲಿಂಗ್ ‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸಕ್ಯೂರ್ಟ್ ಕಾರಣ ಎಂದು ತಿಳಿದುಬಂದಿದೆ.

English summary
Surgeons at Russian hospital successfully completed open-heart surgery on a patient while firefighters battled to contain a serious blaze engulfing the old building's roof,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X