ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನಿಸ್ತಾನದಲ್ಲಿ ಕೆಲಸ ಕಳೆದುಕೊಂಡ ಪತ್ರಕರ್ತರೆಷ್ಟು ಗೊತ್ತೇ?

|
Google Oneindia Kannada News

ಕಾಬೂಲ್, ಡಿಸೆಂಬರ್ 24: ಅಫ್ಘಾನಿಸ್ತಾನದಲ್ಲಿ ಬರೋಬ್ಬರಿ 6,400ಕ್ಕೂ ಹೆಚ್ಚು ಮಂದಿ ಪತ್ರಕರ್ತರು ಕೆಲಸ ಕಳೆದುಕೊಂಡಿದ್ದಾರೆ. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಅಲ್ಲಿನ ವ್ಯವಸ್ಥೆಯೇ ಸಂಪೂರ್ಣ ಬದಲಾಗಿದೆ. ಈವರೆಗೆ 6,400ಕ್ಕೂ ಹೆಚ್ಚು ಪತ್ರಕರ್ತರು ತಮ್ಮ ಕೆಲಸವನ್ನು ಕಳೆದುಕೊಂಡಿದ್ದರೆ, 231 ಸಂಸ್ಥೆಗಳು ಬಾಗಿಲು ಮುಚ್ಚಿವೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್, ಆಫ್ಘಾನ್ ಸ್ವತಂತ್ರ ಪತ್ರಕರ್ತರ ಸಂಘ (AIJA) ಈ ಸಮೀಕ್ಷೆ ನಡೆಸಿದೆ. ದೇಶದಲ್ಲಿ ತಾಲಿಬಾನಿಗಳು ಅಧಿಕಾರಕ್ಕೆ ಬಂದ ನಂತರ ಆಫ್ಘನ್ ಮಾಧ್ಯಮ ಲೋಕದಲ್ಲಿ ಆಮೂಲಾಗ್ರ ಬದಲಾವಣೆಯಾಗಿದೆ ಎಂದು ಅದು ಗುರುತಿಸಿದೆ.

ಅಫ್ಘಾನ್ ಬಿಕ್ಕಟ್ಟು; ತುರ್ತಾಗಿ ಒಪ್ಪಂದಕ್ಕೆ ಬರಲೇಬೇಕಿದೆ ಎಂದ ಯುಎನ್ ನಿರಾಶ್ರಿತ ಸಂಸ್ಥೆಅಫ್ಘಾನ್ ಬಿಕ್ಕಟ್ಟು; ತುರ್ತಾಗಿ ಒಪ್ಪಂದಕ್ಕೆ ಬರಲೇಬೇಕಿದೆ ಎಂದ ಯುಎನ್ ನಿರಾಶ್ರಿತ ಸಂಸ್ಥೆ

ಅಪ್ಘನ್​ನ ಪರ್ವಾನ್ ಉತ್ತರ ಪ್ರಾಂತ್ಯದಲ್ಲಿ 10 ಮಾಧ್ಯಮಗಳಿದ್ದವು. ಆದರೆ, ಈಗ ಕೇವಲ 3 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಪಶ್ಚಿಮ ನಗರದ ಹೆರಾತ್ ಮತ್ತು ಸುತ್ತಲಿನ ಪ್ರಾಂತ್ಯದಲ್ಲಿದ್ದ 51 ಮಾಧ್ಯಮಗಳಲ್ಲಿ 18 ಮಾತ್ರ ಈಗ ಉಳಿದುಕೊಂಡಿವೆ.

Survey: Over 6,400 Journalists In Afghanistan Lost Jobs Since Taliban Takeover

ಆಗಸ್ಟ್‌ನಲ್ಲಿ ತಾಲಿಬಾನ್​ ದೇಶವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡ ಬಳಿಕ ಮಹಿಳಾ ಹಕ್ಕುಗಳು, ಮಾಧ್ಯಮ ಸ್ವಾತಂತ್ರ್ಯ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಕ್ಷಮಾದಾನದ ಭರವಸೆ ನೀಡಿತ್ತು. ತರುವಾಯ ಸರ್ಕಾರಿ ನೌಕರರು ಮತ್ತು ಪತ್ರಕರ್ತರ ಮೇಲೆ ಪ್ರತೀಕಾರ ತೀರಿಸಿಕೊಳ್ಳುತ್ತಲೇ ಇದೆ.

ತಾಲಿಬಾನಿಗಳ ವಿರುದ್ಧ ಜನರು ನಡೆಸುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತರ ಮೇಲೆಯೂ ದೌರ್ಜನ್ಯ ನಡೆಸುತ್ತಿರುವುದು ದಾಖಲಾಗಿದೆ.

ಅಫ್ಘಾನಿಸ್ತಾನದ ಮಾಧ್ಯಮಗಳು ತಾಲಿಬಾನ್ ಹಿಡಿತಕ್ಕೆ ಎಷ್ಟು ನಲುಗಿವೆ ಎಂದರೆ, ಪ್ರತಿ 10 ಮಾಧ್ಯಮ ಸಂಸ್ಥೆಗಳಲ್ಲಿ 4 ಕಣ್ಮರೆಯಾಗಿವೆ. ಶೇ.60ರಷ್ಟು ಉದ್ಯೋಗಿಗಳು ನಿರ್ಭೀತಿಯಿಂದ ಕೆಲಸ ಮಾಡಲಾಗದೇ ಕೆಲಸ ತೊರೆದಿದ್ದಾರೆ. ಇದರಲ್ಲಿ ಶೇ.80ರಷ್ಟು ಮಹಿಳೆಯರೇ ಇದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ದೇಶದಲ್ಲಿ ಒಟ್ಟು 543 ಮಾಧ್ಯಮಗಳು ಅಸ್ತಿತ್ವದಲ್ಲಿದ್ದವು. ತಾಲಿಬಾನಿಗಳ ಆಡಳಿತಕ್ಕೆ ಒಳಗಾದ ಮೂರೇ ತಿಂಗಳಲ್ಲಿ ಅವುಗಳ ಸಂಖ್ಯೆ 312ಕ್ಕೆ ಇಳಿದಿದೆ. ಇದು ಶೇ.43ರಷ್ಟು ಆಗಿದೆ.

ಇದಿಷ್ಟೇ ಅಲ್ಲದೆ ಕೇವಲ 4 ತಿಂಗಳ ಹಿಂದಷ್ಟೇ ದೇಶದ ಹಲವು ಪ್ರಾಂತ್ಯಗಳಲ್ಲಿ ಖಾಸಗಿ ಒಡೆತನದ ಹಲವಾರು ವಾಹಿನಿಗಳು ಕೆಲಸ ಮಾಡುತ್ತಿದ್ದವು. ಇದೀಗ ಬೆರಳೆಣಿಕೆಯಷ್ಟು ಕೂಡ ಕಾಣ ಸಿಗುತ್ತಿಲ್ಲ ಎಂದು ವರದಿ ಹೇಳಿದೆ.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಎಂಥ ಪರಿಸ್ಥಿತಿ ಅಂದರೆ, ಹತಾಶ ಕುಟುಂಬಗಳು ರಸ್ತೆ ಪಕ್ಕದಲ್ಲಿ ತಮ್ಮ ಮನೆಯ ಪೀಠೋಪಕರಣಗಳನ್ನು ಆಹಾರಕ್ಕೆ ಬದಲಿಯಾಗಿ ನೀಡುತ್ತಿದ್ದಾರೆ.

ಇತರ ಪ್ರಮುಖ ನಗರಗಳಲ್ಲಿ ಸರ್ಕಾರದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಔಷಧಗಳನ್ನು ಖರೀದಿ ಮಾಡುವುದಕ್ಕೆ ಹಣ ಇಲ್ಲ. ಅಷ್ಟೇ ಅಲ್ಲ, ವೈದ್ಯರು, ನರ್ಸ್​ಗಳಿಗೆ ಹಣ ಪಾವತಿಸುವುದಕ್ಕೂ ಆಗುತ್ತಿಲ್ಲ.

ವೈದ್ಯಕೀಯ ಸಿಬ್ಬಂದಿ ಪೈಕಿ ಕೆಲವರು ಈಗಾಗಲೇ ಕೆಲಸ ಬಿಟ್ಟಿದ್ದಾರೆ. ಆರ್ಥಿಕ ನಿರಾಶ್ರಿತರು ಇರಾನ್, ಪಾಕಿಸ್ತಾನದ ಗಡಿಯ ಕಡೆಗೆ ಸಾಗುತ್ತಕೇ ಇದ್ದಾರೆ. ಅಂತರರಾಷ್ಟ್ರೀಯ ಸಮುದಾಯಗಳಿಗೆ ಅಫ್ಘಾನಿಸ್ತಾನದ ಜನರ ಬಗ್ಗೆ ಅಪಾರ ಕಾಳಜಿ ಇರುವುದು ಹೌದು. ಆದರೆ ಹಣವನ್ನು ತಾಲಿಬಾನ್​ಗಳ ಕೈಗೆ ಇಡುವುದು ಹೇಗೆ ಎಂಬುದು ಆತಂಕಕ್ಕೆ ಕಾರಣವಾಗಿದೆ.

ಅಫ್ಘಾನಿಸ್ತಾನ ಮತ್ತು ನೆರೆಯ ದೇಶಗಳಲ್ಲಿ ಇರುವ ಅಫ್ಘನ್ ನಿರಾಶ್ರಿತರಿಗೆ 129 ಕೋಟಿ ಅಮೆರಿಕನ್ ಡಾಲರ್ ಒದಗಿಸುವುದಾಗಿ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟವು ಭರವಸೆ ನೀಡಿವೆ.

ಈ ನೆರವಿನಿಂದ ತುಂಮ ದೊಡ್ಡ ಮಟ್ಟದ ಅನುಕೂಲ ಏನೂ ಆಗಲ್ಲ ಎನ್ನುತ್ತಾರೆ ಆರ್ಥಿಕತಜ್ಞರು ಮತ್ತು ಎನ್​ಜಿಒಗಳು. "ಒಂದು ವೇಳೆ ಇಲ್ಲಿನ ವ್ಯವಸ್ಥೆಯನ್ನು ಮುಂದಿನ ಕೆಲ ತಿಂಗಳಲ್ಲಿ ಕಳೆದುಕೊಂಡು ಬಿಟ್ಟರೆ, ದೇಶಕ್ಕೆ ಅಗತ್ಯ ಇರುವುದನ್ನು ಪೂರೈಕೆ ಮಾಡುವುದಕ್ಕೆ ಬೇಕಾದದ್ದನ್ನು ಪುನರ್​ನಿರ್ಮಿಸುವುದು ಕಷ್ಟ.

ಹಿಂತಿರುಗುವುದಕ್ಕೆ ಸಾಧ್ಯವಿಲ್ಲದ ಮಟ್ಟಿಗೆ ವೇಗವಾಗಿ ಕುಸಿತದತ್ತ ನಾವು ಸಾಗುತ್ತಿದ್ದೇವೆ. ಯಾವುದೇ ಮಾನವೀಯ ಬಿಕ್ಕಟ್ಟು ಮಾನವೀಯ ಬೆಂಬಲಿದಿಂದ ಮಾತ್ರ ನಿರ್ವಹಿಸುವುದಕ್ಕೆ ಸಾಧ್ಯ," ಎನ್ನುತ್ತಾರೆ ಯುಎನ್​ಡಿಪಿ ಪ್ರತಿನಿಧಿ ಅಬ್ದಲ್ಲಾ ಅಲ್​ ದರ್ದಾರಿ.

ಈ ಹಿಂದಿನ ಸರ್ಕಾರದ ಅಧಿಯಲ್ಲಿ ದೇಶದ ಜಿಡಿಪಿಯ ಶೇ 45ರಷ್ಟು ವಿದೇಶೀ ನೆರವಿನಿಂದ ಬರುತ್ತಿತ್ತು. ಅದು ಸರ್ಕಾರದ ಬಜೆಟ್​ನ ಶೇ 75ರಷ್ಟು ಆಗುತ್ತಿತ್ತು. ಅದರಲ್ಲೇ ಆರೋಗ್ಯ, ಶೈಕ್ಷಣಿಕ ಸೇವೆಯೂ ಒಳಗೊಂಡಿತ್ತು.

ಆದರೆ ಯಾವಾಗ ತಾಲಿಬಾನ್ ಆಡಳಿತ ಬಂತೋ ಅಮೆರಿಕದಲ್ಲಿನ ಬೈಡನ್ ಆಡಳಿತವು ಅಫ್ಘಾನಿಸ್ತಾನದ ವಿದೇಶೀ ಮೀಸಲು ಮೊತ್ತವಾದ 950 ಕೋಟಿ ಡಾಲರ್ ಸ್ಥಗಿತಗೊಳಿಸಿತು.

English summary
More than 6,400 journalists in Afghanistan have lost their jobs since the Taliban takeover of the country, according to a recent survey.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X