ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಕಾರಿನಲ್ಲಿ ಅಫ್ಘಾನ್ ಧ್ವಜ ಹಾಕಿಕೊಂಡಿದ್ದಕ್ಕೆ ವ್ಯಕ್ತಿಯನ್ನು ಥಳಿಸಿದ ತಾಲಿಬಾನ್!

|
Google Oneindia Kannada News

ಕಾಬೂಲ್, ಆಗಸ್ಟ್ 20: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡ ನಂತರ ದೇಶದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲಿಬಾನಿಗಳ ಉಗ್ರ ಸ್ವರೂಪವನ್ನು ಪ್ರತಿಬಿಂಬಿಸುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಅದೇ ಸಾಲಿಗೆ ಮತ್ತೊಂದು ವಿಡಿಯೋ ಸೇರ್ಪಡೆಯಾಗಿದೆ.

ಅಫ್ಘಾನಿಸ್ತಾನದ ರಾಷ್ಟ್ರೀಯ ಬಾವುಟವನ್ನು ತನ್ನ ಕಾರಿನ ಮುಂದೆ ಹಾಕಿಕೊಂಡ ವ್ಯಕ್ತಿಯನ್ನು ಧಳಿಸಿದ ತಾಲಿಬಾನ್ ಉಗ್ರರು ಆತನನ್ನು ವಶಕ್ಕೆ ಪಡೆದುಕೊಳ್ಳುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ಕುರಿತು ದೇಶದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Fact Check: ಭಾರತಕ್ಕೆ ಬೆದರಿಕೆ ಹಾಕಿದರಾ ತಾಲಿಬಾನ್ ಉಗ್ರರು!? Fact Check: ಭಾರತಕ್ಕೆ ಬೆದರಿಕೆ ಹಾಕಿದರಾ ತಾಲಿಬಾನ್ ಉಗ್ರರು!?

ಜಗತ್ತಿನ ಎದುರಿಗೆ ನೀಡಿದ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಪ್ರತಿ ಹೆಜ್ಜೆ ಹೆಜ್ಜೆಯಲ್ಲೂ ಸಾಬೀತಾಗುತ್ತಿದೆ. ಶಾಂತಿಯುತ ಆಡಳಿತ ನೀಡುವ ಅಭಿಲಾಷೆ ಹೊಂದಿದ್ದೇವೆ ಎಂದ ತಾಲಿಬಾನ್ ತನ್ನ ಕ್ರೌರ್ಯದ ಮತ್ತೊಂದು ಮುಖವನ್ನು ಪ್ರಜೆಗಳ ಎದುರು ತೆರೆದಿಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಆಗುತ್ತಿರುವ ಒಂದೊಂದು ವಿಡಿಯೋಗಳು, ಒಂದೊಂದು ಕಥೆಯನ್ನು ಹೇಳುತ್ತಿವೆ. ಜಗತ್ತಿನ ಎದುರು ತಾಲಿಬಾನಿಗಳ ರೌದ್ರತೆಯನ್ನು ಬಿಚ್ಚಿಡುತ್ತಿವೆ.

ಕಾರಿನಲ್ಲಿ ರಾಷ್ಟ್ರ ಧ್ವಜ ಇಟ್ಟುಕೊಂಡಿದ್ದಕ್ಕೆ ಹಲ್ಲೆ

"ತನ್ನ ಕಾರಿನಲ್ಲಿ ಅಫ್ಘಾನಿಸ್ತಾನದ ರಾಷ್ಟ್ರೀಯ ಧ್ವಜವನ್ನು ಹಾಕಿಕೊಂಡ ವ್ಯಕ್ತಿಯನ್ನು ತಾಲಿಬಾನಿಗಳ ರೀತಿಯಲ್ಲಿ ಬಟ್ಟೆ ಧರಿಸಿಕೊಂಡ ಕೆಲವರು ಅಡ್ಡ ಹಾಕುತ್ತಾರೆ. ಕಾರಿನಿಂದ ಆತನನ್ನ ಕೆಳಗಿಳಿಸಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಾರೆ, ಇನ್ನೊಂದು ಗುಂಪು ಬಾವುಟವನ್ನು ತೆಗೆದು ಹಾಕುತ್ತದೆ. ಇದಾದ ತಕ್ಷಣ ಮತ್ತೊಂದು ವಾಹನಗದಲ್ಲಿ ವ್ಯಕ್ತಿಯನ್ನು ಕರೆದುಕೊಂಡು ಹೋಗಿರುವುದು ವಿಡಿಯೋದಲ್ಲಿ ಗೊತ್ತಾಗುತ್ತದೆ." ಈ ಘಟನೆಯು ಅಫ್ಘಾನಿಸ್ತಾನದ ಯಾವ ಪ್ರದೇಶದಲ್ಲಿ ನಡೆದಿದೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಪ್ರತಿಭಟನೆ ನಡೆಸಿದವರ ಮೇಲೆ ಗುಂಡಿನ ದಾಳಿ

ಪ್ರತಿಭಟನೆ ನಡೆಸಿದವರ ಮೇಲೆ ಗುಂಡಿನ ದಾಳಿ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರ ಸಂಘಟನೆಯು ಆಡಳಿತ ಶುರುವಿಟ್ಟುಕೊಳ್ಳುತ್ತೆ ಎಂಬುದು ಗೊತ್ತಾಗುತ್ತಿದ್ದಂತೆ ಸ್ವತಃ ಸಾರ್ವಜನಿಕರೇ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲಿಬಾನ್ ವಿರುದ್ಧ ದೇಶದ ಹಲವು ಪ್ರದೇಶಗಳಲ್ಲಿ ಜನರು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸುತ್ತಿದ್ದಾರೆ. ಅದೇ ರೀತಿ ನಂಗರ್ಖಹರ್ ಮತ್ತು ಖೋಸ್ಟ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ತಾಲಿಬಾನ್ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ. ಕುಪಿತಗೊಂಡ ತಾಲಿಬಾನಿಗಳು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಜಲಾಲಬಾದ್ ಪ್ರದೇಶದಲ್ಲಿ ಮೂವರು ಪ್ರತಿಭಟನಾಕಾರರನ್ನು ತಾಲಿಬಾನ್ ಕೊಂದು ಹಾಕಿರುವುದು ಗೊತ್ತಾಗಿದೆ.

ಮನೆ ಮನೆ ನುಗ್ಗಿ ತಾಲಿಬಾನ್ ಉಗ್ರರ ಕ್ರೌರ್ಯ ಪ್ರದರ್ಶನ

ಮನೆ ಮನೆ ನುಗ್ಗಿ ತಾಲಿಬಾನ್ ಉಗ್ರರ ಕ್ರೌರ್ಯ ಪ್ರದರ್ಶನ

ಅಫ್ಘಾನಿಸ್ತಾನದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿರುವ ತಾಲಿಬಾನ್ ಉಗ್ರರು ಕಾಬೂಲ್ ನಗರದಲ್ಲಿ ಅಟ್ಟಹಾಸ ತೋರುತ್ತಿದ್ದಾರೆ. ಪ್ರತಿಯೊಂದು ಮನೆ ಮನೆಗಳಿಗೆ ನುಗ್ಗಿ ದಾಖಲೆಗಳನ್ನು ದಾಖಲೆಗಳನ್ನು ಹುಡುಕಾಡುತ್ತಿದ್ದಾರೆ. ರಾಷ್ಟ್ರೀಯ ಭದ್ರತಾ ಮಂಡಳಿ ಮತ್ತು ರಾಜ್ಯ ಗುಪ್ತಚರ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವರನ್ನು ಗುರುತು ಹಾಕಿಕೊಳ್ಳುತ್ತಿದ್ದಾರೆ. ವಿಶ್ವಸಂಸ್ಥೆ ಮತ್ತು ನ್ಯಾಟೋ ಪಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಪತ್ತೆ ಮಾಡುವುದಕ್ಕಾಗಿಯೇ ತಾಲಿಬಾನ್ ಉಗ್ರರು ಪ್ರತಿಯೊಂದು ಮನೆಗಳಿಗೂ ನುಗ್ಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಮೂಲಗಳಿಂದ ತಿಳಿದು ಬಂದಿದೆ.

ತಾಲಿಬಾನ್ ಉಗ್ರರ ವಶವಾಗಿದ್ದು ಹೇಗೆ ಅಫ್ಘಾನಿಸ್ತಾನ?

ತಾಲಿಬಾನ್ ಉಗ್ರರ ವಶವಾಗಿದ್ದು ಹೇಗೆ ಅಫ್ಘಾನಿಸ್ತಾನ?

ಎರಡು ದಶಕಗಳ ಕಾಲ ಯುನೈಟೆಡ್ ಸ್ಟೇಟ್ಸ್ ಸೇನೆ ಭದ್ರತೆ ನಡುವೆ ಸುಭದ್ರವಾಗಿದ್ದ ಅಫ್ಘಾನಿಸ್ತಾನವನ್ನು ತಾಲಿಬಾನ್ ಕೇವಲ 10 ದಿನಗಳಲ್ಲೇ ಸಂಪೂರ್ಣ ಕೈವಶ ಮಾಡಿಕೊಂಡಿದೆ. ಯುಎಸ್ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಾಗಿ ಘೋಷಿಸುತ್ತಿದ್ದಂತೆ ತಾಲಿಬಾನ್ ಉಗ್ರ ಸಂಘಟನೆ ಅಲರ್ಟ್ ಆಗಿದೆ. ಮೊದಲಿಗೆ ದೇಶದ ಒಂದೊಂದೇ ಪ್ರದೇಶಗಳನ್ನು ಸ್ವಾಧೀನಪಡಿಸಿಕೊಂಡ ತಾಲಿಬಾನ್ ಉಗ್ರರು ಕಳೆದ ಆಗಸ್ಟ್ 15ರಂದು ರಾಜಧಾನಿ ಕಾಬೂಲ್‌ಗೆ ಲಗ್ಗೆ ಇಡುವ ಮೂಲಕ ಇಡೀ ದೇಶವನ್ನು ಹಿಡಿತಕ್ಕೆ ತೆಗೆದುಕೊಂಡಿದೆ.

ಅಫ್ಘಾನ್ ಮೇಲೆ ಅಮೆರಿಕಾ ಹಿಡಿತ ಸಾಧಿಸಿದ ಕಾಲ:

ಕಳೆದ 1996 ರಿಂದ 2001ರವರೆಗೂ ಅಫ್ಘಾನಿಸ್ತಾನದಲ್ಲಿ ಇದೇ ತಾಲಿಬಾನ್ ಉಗ್ರ ಸಂಘಟನೆಯ ಹಿಡಿತದಲ್ಲಿತ್ತು. 2001ರ ಸಪ್ಟೆಂಬರ್ 11ರಂದು ಯುನೈಟೆಡ್ ಸ್ಟೇಟ್ಸ್ ಮೇಲೆ ಅಲ್ ಖೈದಾ ಉಗ್ರರು ದಾಳಿ ನಡೆಸಿದ್ದರು. ಅಲ್ ಖೈದಾ ಜೊತೆ ಆತ್ಮೀಯವಾಗಿ ಗುರುತಿಸಿಕೊಂಡಿದ್ದ ಕಾರಣಕ್ಕಾಗಿ ತಾಲಿಬಾನ್ ಮೇಲೂ ಯುಎಸ್ ಸೇನಾಪಡೆಗಳು ಕಾರ್ಯಾಚರಣೆಗೆ ಇಳಿದವು. ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಅಫ್ಘಾನ್ ಮೇಲೆ ದಾಳಿ ನಡೆಸಿದ ಯುಎಸ್ ಸೇನೆಯು ಅಫ್ಘಾನಿಸ್ತಾನವನ್ನು 2001ರಲ್ಲಿ ತಾಲಿಬಾನ್ ಹಿಡಿತದಿಂದ ಬಿಡುಗಡೆಗೊಳಿಸಿತು. ಅದರ ಪರಿಣಾಮವಾಗಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ಕಳೆದುಕೊಂಡಿತು. ಯುಎಸ್ ಬೆಂಬಲಿತ ಸರ್ಕಾರವು ಅಸ್ತಿತ್ವಕ್ಕೆ ಬಂದಿತ್ತು.

Recommended Video

ತಾಲಿಬಾನಿಗಳಿಗೆ ಹೆದರಿ ನಾವೇನು ಓಡಿ ಹೋಗಲ್ಲ ಅಂದ್ರು ಜೋ ಬೈಡನ್ | Oneindia Kannada

English summary
Taliban attacked on a Man and arrest him For Carrying National Flag on Car in Afghanistan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X