ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನ್‌ನಲ್ಲಿ ವಿದೇಶಿ ನೆರವಿಲ್ಲದೆ ಬಜೆಟ್ ಮಂಡಿಸಲು ತಾಲಿಬಾನ್ ಸಜ್ಜು

|
Google Oneindia Kannada News

ಕಾಬೂಲ್, ಡಿಸೆಂಬರ್ 18: ವಿದೇಶಿ ನೆರವಿಲ್ಲದೆ ಹೊಸ ಬಜೆಟ್ ಮಂಡಿಸಲು ತಾಲಿಬಾನ್ ಸಿದ್ಧತೆ ನಡೆಸಿದೆ.

ಎರಡು ದಶಕಗಳಲ್ಲಿ ಮೊದಲ ಬಾರಿಗೆ ವಿದೇಶಿ ನೆರವಿಲ್ಲದೆ ಅಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರದ ಹಣಕಾಸು ಸಚಿವಾಲಯವು ಕರಡು ರಾಷ್ಟ್ರೀಯ ಬಜೆಟ್ ಅನ್ನು ಸಿದ್ಧಪಡಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಹಣಕಾಸು ಸಚಿವಾಲಯದ ವಕ್ತಾರ ಅಹ್ಮದ್ ವಾಲಿ ಹಕ್ಮಲ್ ಅವರು ಡಿಸೆಂಬರ್ 2022ರವರೆಗೆ ನಡೆಯುವ ಕರಡು ಬಜೆಟ್‌ನ ಗಾತ್ರವನ್ನು ಬಹಿರಂಗಪಡಿಸಲಿಲ್ಲ. ಆದರೆ ಅದನ್ನು ಪ್ರಕಟಿಸುವ ಮೊದಲು ಕ್ಯಾಬಿನೆಟ್ ಅನುಮೋದನೆಗೆ ಹೋಗುವುದಾಗಿ AFP ಗೆ ತಿಳಿಸಿದರು.

ದೇಶವು ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ ಮತ್ತು 'ಹಸಿವಿನ ಹಿಮಪಾತ' ಇದೊಂದು ಮಾನವೀಯ ದುರಂತ ಎಂದು ವಿಶ್ವಸಂಸ್ಥೆಯು ಕರೆದಿದ್ದು ಇದರ ನಡುವೆ ತಾಲಿಬಾನ್ ಸರ್ಕಾರ ಹೊಸ ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿದೆ.

ಆಗಸ್ಟ್‌ನಲ್ಲಿ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ನಂತರ ಜಾಗತಿಕ ದಾನಿಗಳು ಹಣಕಾಸಿನ ನೆರವನ್ನು ಸ್ಥಗಿತಗೊಳಿಸಿದರು. ಪಾಶ್ಚಿಮಾತ್ಯ ಶಕ್ತಿಗಳು ವಿದೇಶದಲ್ಲಿರುವ ಶತಕೋಟಿ ಡಾಲರ್‌ಗಳ ಆಸ್ತಿಗಳ ಪ್ರವೇಶವನ್ನು ಸ್ಥಗಿತಗೊಳಿಸಿದವು.

Taliban

ನಮ್ಮ ದೇಶೀಯ ಆದಾಯದಿಂದ ಬಜೆಟ್ ಗೆ ಹಣಕಾಸು ಒದಗಿಸಲು ಪ್ರಯತ್ನಿಸುತ್ತಿದ್ದು, ನಾವು ಮಾಡಬಹುದು ಎಂದು ನಾವು ನಂಬುತ್ತೇವೆ ಎಂದು ಅವರು ಈ ಹಿಂದೆ ಟ್ವೀಟ್ ಮಾಡಿದ್ದರು.
ಅಫ್ಘಾನಿಸ್ತಾನದ ಆರ್ಥಿಕತೆ ಬಹುತೇಕ ಪತನದತ್ತ ಸಾಗಿದೆ. ಹಳ್ಳಿಗಾಡುಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯೇ ಇಲ್ಲದಂತಾಗಿದೆ. ನೂರಾರು ಮೈಲಿ ದೂರಕ್ಕೆ ಒಂದರಂತೆ ಇರುವ ಬ್ಯಾಂಕ್​ನಲ್ಲಿ ಸಿಕ್ಕಾಪಟ್ಟೆ ಜನಜಂಗುಳಿ.

ಗಂಭೀರ ಸ್ವರೂಪದ ಕಾಯಿಲೆಗಳಿಂದ ಬಳಲುತ್ತಿದ್ದು, ನಿರ್ದಿಷ್ಟ ಅವಧಿಗೆ ಚಿಕಿತ್ಸೆ ಪಡೆಯುತ್ತಿರುವವರ ಪಾಡಂತೂ ಶತ್ರುಗಳಿಗೂ ಬೇಡ ಎಂಬಂತಾಗಿದೆ. ಏಕೆಂದರೆ, ಹೀಗೆ ನೂರಾರು ಮೈಲಿ ಆಚೆಗೆ ಒಂದರಂತೆ ಇರುವ ಬ್ಯಾಂಕ್​ಗಳಲ್ಲಿ ಕೂಡ ಎಲ್ಲ ಗ್ರಾಹಕರಿಗೂ ನಗದು ಸಿಗುತ್ತಾ ಇಲ್ಲ.

ಆಗಸ್ಟ್ 15ರಂದು ತಾಲಿಬಾನ್​ ಅಫ್ಘಾನಿಸ್ತಾನದಲ್ಲಿ ಆಡಳಿತವನ್ನು ತನ್ನ ಕೈಗೆ ತೆಗೆದುಕೊಂಡಾಗಿಂದ ಅಲ್ಲಿನ ಆರ್ಥಿಕತೆ ಬಹುತೇಕ ಕುಸಿದುಹೋಗಿದೆ. ಜಗತ್ತಿನಲ್ಲೇ ಅತ್ಯಂತ ಭೀಕರ ಮಾನವೀಯ ಬಿಕ್ಕಟ್ಟು ತಲೆದೋರಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಇದ್ದ ಮಿಲಿಯನ್​ಗಟ್ಟಲೆ ಡಾಲರ್ ಅನುದಾನ ಮಾಯವಾಗಿದೆ. ಸರ್ಕಾರಕ್ಕೆ ಸೇರಿದ ಬಿಲಿಯನ್​ಗಟ್ಟಲೆ ಡಾಲರ್ ಆಸ್ತಿಗೆ ತಡೆ ಬಿದ್ದಿದೆ. ಇನ್ನು ಆರ್ಥಿಕ ನಿರ್ಬಂಧದ ಕಾರಣಕ್ಕೆ ಹಾಗತಿಕ ಮಟ್ಟದ ಬ್ಯಾಂಕಿಂಗ್​ ವ್ಯವಸ್ಥೆಯ ನೆರವು ಈಗಿನ ಸರ್ಕಾರಕ್ಕೆ ಸಿಗುತ್ತಿಲ್ಲ.

ಬ್ಯಾಂಕ್​, ಉದ್ಯಮಗಳಿಗೆ ಹಣಕಾಸಿನ ಕೊರತೆ ಎದುರಾಗಿದ್ದು, ಆಹಾರ ಮತ್ತು ತೈಲ ಬೆಲೆಗಳು ತಾರಾಮಾರಾ ಏರಿಕೆ ಆಗಿವೆ. ಈ ವರ್ಷದ ಅಂತ್ಯದ ಹೊತ್ತಿಗೆ ಅಫ್ಘಾನಿಸ್ತಾನದಲ್ಲಿ 32 ಲಕ್ಷ ಮಕ್ಕಳು ಗಂಭೀರ ಸ್ವರೂಪದ ಅಪೌಷ್ಟಿಕತೆಯಿಂದ ನರಳುವಂತಾಗಬಹುದು, ಆ ಪೈಕಿ 10 ಲಕ್ಷ ಮಕ್ಕಳು ತಾಪಮಾನ ಇಳಿಕೆಯಿಂದ ಸಾವಿಗೀಡಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.

ಆಹಾರಕ್ಕೆ ಬದಲಾಗಿ ಪೀಠೋಪಕರಣಗಳ ವಿನಿಮಯ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಎಂಥ ಪರಿಸ್ಥಿತಿ ಅಂದರೆ, ಹತಾಶ ಕುಟುಂಬಗಳು ರಸ್ತೆ ಪಕ್ಕದಲ್ಲಿ ತಮ್ಮ ಮನೆಯ ಪೀಠೋಪಕರಣಗಳನ್ನು ಆಹಾರಕ್ಕೆ ಬದಲಿಯಾಗಿ ನೀಡುತ್ತಿದ್ದಾರೆ.

ಇತರ ಪ್ರಮುಖ ನಗರಗಳಲ್ಲಿ ಸರ್ಕಾರದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಔಷಧಗಳನ್ನು ಖರೀದಿ ಮಾಡುವುದಕ್ಕೆ ಹಣ ಇಲ್ಲ. ಅಷ್ಟೇ ಅಲ್ಲ, ವೈದ್ಯರು, ನರ್ಸ್​ಗಳಿಗೆ ಹಣ ಪಾವತಿಸುವುದಕ್ಕೂ ಆಗುತ್ತಿಲ್ಲ. ವೈದ್ಯಕೀಯ ಸಿಬ್ಬಂದಿ ಪೈಕಿ ಕೆಲವರು ಈಗಾಗಲೇ ಕೆಲಸ ಬಿಟ್ಟಿದ್ದಾರೆ.

ಆರ್ಥಿಕ ನಿರಾಶ್ರಿತರು ಇರಾನ್, ಪಾಕಿಸ್ತಾನದ ಗಡಿಯ ಕಡೆಗೆ ಸಾಗುತ್ತಕೇ ಇದ್ದಾರೆ. ಅಂತರರಾಷ್ಟ್ರೀಯ ಸಮುದಾಯಗಳಿಗೆ ಅಫ್ಘಾನಿಸ್ತಾನದ ಜನರ ಬಗ್ಗೆ ಅಪಾರ ಕಾಳಜಿ ಇರುವುದು ಹೌದು. ಆದರೆ ಹಣವನ್ನು ತಾಲಿಬಾನ್​ಗಳ ಕೈಗೆ ಇಡುವುದು ಹೇಗೆ ಎಂಬುದು ಆತಂಕಕ್ಕೆ ಕಾರಣವಾಗಿದೆ.

ಅಫ್ಘಾನಿಸ್ತಾನ ಮತ್ತು ನೆರೆಯ ದೇಶಗಳಲ್ಲಿ ಇರುವ ಆಫ್ಘನ್ ನಿರಾಶ್ರಿತರಿಗೆ 129 ಕೋಟಿ ಅಮೆರಿಕನ್ ಡಾಲರ್ ಒದಗಿಸುವುದಾಗಿ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟವು ಭರವಸೆ ನೀಡಿವೆ. ಈ ನೆರವಿನಿಂದ ತುಂಮ ದೊಡ್ಡ ಮಟ್ಟದ ಅನುಕೂಲ ಏನೂ ಆಗಲ್ಲ ಎನ್ನುತ್ತಾರೆ ಆರ್ಥಿಕತಜ್ಞರು ಮತ್ತು ಎನ್​ಜಿಒಗಳು.

"ಒಂದು ವೇಳೆ ಇಲ್ಲಿನ ವ್ಯವಸ್ಥೆಯನ್ನು ಮುಂದಿನ ಕೆಲ ತಿಂಗಳಲ್ಲಿ ಕಳೆದುಕೊಂಡು ಬಿಟ್ಟರೆ, ದೇಶಕ್ಕೆ ಅಗತ್ಯ ಇರುವುದನ್ನು ಪೂರೈಕೆ ಮಾಡುವುದಕ್ಕೆ ಬೇಕಾದದ್ದನ್ನು ಪುನರ್​ನಿರ್ಮಿಸುವುದು ಕಷ್ಟ.

ಈ ಹಿಂದಿನ ಸರ್ಕಾರದ ಅಧಿಯಲ್ಲಿ ದೇಶದ ಜಿಡಿಪಿಯ ಶೇ 45ರಷ್ಟು ವಿದೇಶೀ ನೆರವಿನಿಂದ ಬರುತ್ತಿತ್ತು. ಅದು ಸರ್ಕಾರದ ಬಜೆಟ್​ನ ಶೇ 75ರಷ್ಟು ಆಗುತ್ತಿತ್ತು. ಅದರಲ್ಲೇ ಆರೋಗ್ಯ, ಶೈಕ್ಷಣಿಕ ಸೇವೆಯೂ ಒಳಗೊಂಡಿತ್ತು. ಆದರೆ ಯಾವಾಗ ತಾಲಿಬಾನ್ ಆಡಳಿತ ಬಂತೋ ಅಮೆರಿಕದಲ್ಲಿನ ಬೈಡನ್ ಆಡಳಿತವು ಅಫ್ಘಾನಿಸ್ತಾನದ ವಿದೇಶೀ ಮೀಸಲು ಮೊತ್ತವಾದ 950 ಕೋಟಿ ಡಾಲರ್ ಸ್ಥಗಿತಗೊಳಿಸಿತು. ಅಫ್ಘಾನಿಸ್ತಾನದ ಕೇಂದ್ರ ಬ್ಯಾಂಕ್ ಅವಲಂಬಿತ ಆಗಿದ್ದ ಯುಎಸ್​ ಡಾಲರ್​ ಒಳಗೊಂಡ ರವಾನೆಯನ್ನು ನಿಲ್ಲಿಸಿತು.

ಅಫ್ಘಾನಿಸ್ತಾನವು ಮೂಲಭೂತ ಆಹಾರಗಳು, ಇಂಧನ ಮತ್ತು ಉತ್ಪಾದನೆ ಸರಕುಗಳಿಗಾಗಿ ಆಮದುಗಳ ಮೇಲೆ ದೀರ್ಘಕಾಲದಿಂದ ಅವಲಂಬಿತವಾಗಿದೆ. ಇದು ಅಲ್ಲಿನ ಜೀವಸೆಲೆಯಾಗಿದ್ದು, ಈ ಬೇಸಿಗೆಯಲ್ಲಿ ತಾಲಿಬಾನ್‌ನ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ನೆರೆಯ ದೇಶಗಳು ತಮ್ಮ ಗಡಿಗಳನ್ನು ಮುಚ್ಚಿದ ನಂತರ ವ್ಯಾಪಾರದ ಅಡೆತಡೆಗಳು ಔಷಧದಂತಹ ಮುಖ್ಯ ಸರಕುಗಳ ಕೊರತೆ ಉಂಟುಮಾಡಿದೆ. ಆದರೆ ಹಣಕಾಸಿನ ಸೇವೆಗಳ ಕುಸಿತವು ಅಮೆರಿಕನ್ ಡಾಲರ್‌ಗಳು ಮತ್ತು ಆಮದುಗಳಿಗಾಗಿ ಬ್ಯಾಂಕ್ ಸಾಲಗಳನ್ನು ಅವಲಂಬಿಸಿರುವ ವ್ಯಾಪಾರಿಗಳ ಕತ್ತು ಹಿಸುಕಿದೆ.

ಐತಿಹಾಸಿಕವಾಗಿಯೇ ಯಾವುದೇ ದೇಶ ಇಷ್ಟು ವೇಗವಾಗಿ ಇಷ್ಟು ದೊಡ್ಡ ಪ್ರಮಾಣದ ಆರ್ಥಿಕ ಪತನ ಕಂಡಿರಲಿಲ್ಲ ಎನ್ನುತ್ತಾರೆ ಆರ್ಥಿಕ ತಜ್ಞರು. ಅಂತರರಾಷ್ಟ್ರೀ ಹಣಕಾಸು ನಿಧಿಯಿಂದ ಕಳೆದ ತಿಂಗಳು ಎಚ್ಚರಿಸಿದಂತೆ, ಈ ವರ್ಷ ಶೇ 30ರಷ್ಟು ಆರ್ಥಿಕತೆ ಕುಸಿಯಬಹುದು.

ವೈದ್ಯರನ್ನೂ ಒಳಗೊಂಡಂತೆ ಶಿಕ್ಷಕರು ಮತ್ತಿತರ ಸರ್ಕಾರಿ ನೌಕರರಿಗೆ ತಿಂಗಳುಗಳಿಂದ ವೇತನ ಬಂದಿಲ್ಲ. ಯುಎನ್​ಡಿಪಿ ಅಂದಾಜು ಮಾಡುವಂತೆ, ಮುಂದಿ ವರ್ಷದ ಮಧ್ಯ ಭಾಗದ ಹೊತ್ತಿಗೆ ಅಫ್ಘನ್ ಜನಸಂಖ್ಯೆಯ ಶೇ 97ರಷ್ಟು ಮಂದಿ ಬಡತನ ರೇಖೆಗಿಂತ ಕೆಳಗಿರುತ್ತಾರೆ.

ಇನ್ನು ಈಗಾಗಲೇ ಅಂದಿನದು ಅಂದಿಗೆ ಎಂದು ಬದುಕುತ್ತಿರುವವರ ಸ್ಥಿತಿ ಮತ್ತೂ ಭೀಕರವಾಗುತ್ತದೆ. ಅಂದಹಾಗೆ ತಾಲಿಬಾನ್​ನಿಂದ ಅಫ್ಘಾನಿಸ್ತಾನ್​ ತೆಕ್ಕೆಗೆ ತೆಗೆದುಕೊಳ್ಳುವ ಮುಂಚೆಯೇ ಆರ್ಥಿಕತೆ ತೆವಳುತ್ತಿತ್ತು. ನಿಧಾನ ಪ್ರಗತಿ, ಭ್ರಷ್ಟಾಚಾರ, ತೀವ್ರ ಬಡತನ ಹಾಗೂ ಗಂಭೀರ ಸ್ವರೂಪದ ಬರದಿಂದ ದೇಶ ನರಳುತ್ತಿತ್ತು.

English summary
Afghanistan's finance ministry under the Taliban government has prepared a draft national budget that, for the first time in two decades, is funded without foreign aid, a spokesman said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X