ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Video: ಕಾಬೂಲ್ ವಿಮಾನ ನಿಲ್ದಾಣದ ಬಳಿ ಸ್ಫೋಟದ ಹಿಂದೆ ಐಸಿಸ್ ಕೈವಾಡ!

|
Google Oneindia Kannada News

ಕಾಬೂಲ್, ಆಗಸ್ಟ್ 26: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಗರದಲ್ಲಿರುವ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದ ಮೂರು ಸರಣಿ ಬಾಂಬ್ ಸ್ಫೋಟದ ಹಿಂದೆ ಐಸಿಸ್ ಉಗ್ರರ ಕೈವಾಡವಿರುವ ಬಗ್ಗೆ ತಾಲಿಬಾಲ್ ಶಂಕೆ ವ್ಯಕ್ತಪಡಿಸಿದೆ. ಬಾಂಬ್ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಾಥಮಿಕ ವರದಿಯಾಗಿದೆ.

ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಸಂಭವಿಸಿದ ಸ್ಫೋಟಗಳನ್ನು ತಾಲಿಬಾನ್ "ಭಯೋತ್ಪಾದಕ ಕೃತ್ಯ" ಎಂದು ಕರೆದಿದೆ. ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಸ್ಫೋಟದ ಕುರಿತು ಅಮೆರಿಕಾಗೆ ಮಾಹಿತಿ ನೀಡಿದ್ದು, ದಾಳಿ ಹಿಂದೆ ಐಸಿಸ್(ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆಂಡ್ ಸಿರಿಯಾ) ಉಗ್ರರು ಕೈವಾಡವಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

Breaking: ಕಾಬೂಲ್ ಏರ್‌ಪೋರ್ಟ್ ಬಳಿ ಸರಣಿ ಬಾಂಬ್ ಸ್ಫೋಟ: 13 ಮಂದಿ ಸಾವು Breaking: ಕಾಬೂಲ್ ಏರ್‌ಪೋರ್ಟ್ ಬಳಿ ಸರಣಿ ಬಾಂಬ್ ಸ್ಫೋಟ: 13 ಮಂದಿ ಸಾವು

"ತಾಲಿಬಾನ್ ಜಾಗತಿಕ ಸಮುದಾಯದೊಂದಿಗೆ ಕಾರ್ಯ ನಿರ್ವಹಿಸಲು ಬದ್ಧವಾಗಿದೆ. ಅಫ್ಘಾನಿಸ್ತಾನದ ನೆಲದಲ್ಲಿ ಯಾವುದೇ ಭಯೋತ್ಪಾದಕರಿಗೆ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ," ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.

Taliban Suspect: ISIS role in Kabul airport Blast incident

ಕಾಬೂಲ್ ವಿಮಾನ ನಿಲ್ದಾಣದ ಬಳಿ ಸರಣಿ ಸ್ಪೋಟ:

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‌ನ ಹಮೀದ್ ಕರ್ಜಾಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಎರಡು ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ವೇಳೆ ನಾಲ್ಕು ಅಮೆರಿಕನ್ ಸೇನಾ ಯೋಧರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಈ ಸ್ಫೋಟದ ಬೆನ್ನಲ್ಲೇ ಅಮೆರಿಕಾ ತನ್ನ ಪ್ರಜೆಗಳಿಗೆ ಏರ್ ಪೋರ್ಟ್ ಬಳಿ ತೆರಳದಂತೆ ಸಂದೇಶ ರವಾನಿಸಿದೆ. ಫ್ರಾನ್ಸ್ ಕೂಡ ತನ್ನ ಪ್ರಜೆಗಳಿಗೆ ಆ ಪ್ರದೇಶದಿಂದ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಕೆ ನೀಡಿದೆ.

English summary
Taliban Suspect: ISIS role in Kabul airport Blast incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X