ಆಡಳಿತವನ್ನು ಅಸ್ಥಿರಗೊಳಿಸದಂತೆ ಯುಎಸ್ಗೆ ತಾಲಿಬಾನ್ ಎಚ್ಚರಿಕೆ
ದೋಹಾ, ಅಕ್ಟೋಬರ್ 10: ಅಫ್ಘಾನಿಸ್ತಾನದಿಂದ ಯುಎಸ್ ತನ್ನ ಸೇನೆಯನ್ನು ಹಿಂದಕ್ಕೆ ಪಡೆದ ಬಳಿಕ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದುಕೊಂಡ ತಾಲಿಬಾನ್ನೊಂದಿಗೆ ನಡೆದ ಮೊದಲ ಮಾತುಕತೆಯಲ್ಲಿ ಆಡಳಿತವನ್ನು ಅಸ್ಥಿರಗೊಳಿಸದಂತೆ ತಾಲಿಬಾನ್ ಯುಎಸ್ಗೆ ಎಚ್ಚರಿಕೆ ನೀಡಿದೆ ಎಂದು ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಶನಿವಾರ ತಿಳಿಸಿದ್ದಾರೆ.
"ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದು ಯಾರಿಗೂ ಒಳಿತಲ್ಲ ಎಂದು ನಾವು ತಿಳಿಸಿದ್ದೇವೆ," ಎಂದು ಯುಎಸ್ನೊಂದಿಗೆ ದೋಹಾದ ಕತಾರ್ನಲ್ಲಿ ಮಾತುಕತೆ ನಡೆದ ಬಳಿಕ ಬಕಾರ್ ಸುದ್ದಿ ಸಂಸ್ಥೆಗೆ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ಹೇಳಿದ್ದಾರೆ.
"ಅಫ್ಘಾನಿಸ್ತಾನದೊಂದಿಗೆ ಒಳ್ಳೆಯ ಸಂಬಂಧವನ್ನು ಇಟ್ಟುಕೊಳ್ಳುವುದು ಎಲ್ಲರಿಗೂ ಒಳಿತು. ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ಇರುವ ತಾಲಿಬಾನ್ ಸರ್ಕಾರವನ್ನು ಅಸ್ಥಿರಗೊಳಿಸಲು ಏನನ್ನೂ ಮಾಡಬಾರದು. ಆ ರೀತಿ ಮಾಡಿದ್ದಲ್ಲಿ ಜನರಿಗೆ ತೊಂದರೆ ಉಂಟಾಗುತ್ತದೆ," ಎಂದು ಅಮಿರ್ ಖಾನ್ ಮುತ್ತಾಕಿ ಎಚ್ಚರಿಕೆ ನೀಡಿದ್ದಾರೆ.

ವಿದೇಶಾಂಗ ಇಲಾಖೆಯ ಉಪ ವಿಶೇಷ ಪ್ರತಿನಿಧಿ ಟಾಮ್ ವೆಸ್ಟ್ ಮತ್ತು ಯುಎಸ್ಎಐಡಿಯ ಉನ್ನತ ಮಾನವೀಯ ಅಧಿಕಾರಿ ಸಾರಾ ಚಾರ್ಲ್ಸ್ ನೇತೃತ್ವದ ಯುಎಸ್ ತಂಡದೊಂದಿಗೆ ಎರಡು ದಿನಗಳ ಮಾತುಕತೆಯ ಮೊದಲ ದಿನದಂದು ಮುತ್ತಾಕಿ ಈ ಹೇಳಿಕೆಯನ್ನು ನೀಡಿದ್ದಾರೆ.
ಇನ್ನು ಈ ಸಂದರ್ಭದಲ್ಲೇ "ಅಫ್ಘಾನಿಸ್ತಾನದ ಜನರಿಗೆ ಕೋವಿಡ್ ವಿರುದ್ಧದ ಲಸಿಕೆಯನ್ನು ನೀಡಲು ಯುಎಸ್ ಸಹಾಯ ಮಾಡಲಿದೆ," ಎಂದು ಕೂಡಾ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಅಮಿರ್ ಖಾನ್ ಮುತ್ತಾಕಿ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಯುಎಸ್ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. "ಯುಎಸ್ನ ಪ್ರತಿನಿಧಿಗಳು ಅಫ್ಘಾನ್ ಜನರಿಗೆ ಕೋವಿಡ್ ವಿರುದ್ದದ ಲಸಿಕೆಯನ್ನು ನೀಡಲು ಸಹಾಯ ಮಾಡಲು ಹಾಗೂ ಅಲ್ಲಿನ ಮಾನವ ಸಂಪನ್ಮೂಲದ ಮೂಲಕ ಸಹಾಯ ಮಾಡುವುದಾಗಿ ಹೇಳಿದ್ದಾರೆ," ಎಂದು ಅಮಿರ್ ಖಾನ್ ಮುತ್ತಾಕಿ ತಿಳಿಸಿದರು.
"ಅಫ್ಘಾನಿಸ್ತಾನ ಈ ಸಂಕಷ್ಟದ ಸಂದರ್ಭದಲ್ಲಿ ಉಭಯ ದೇಶಗಳು ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳುವುದಾಗಿ ಹಾಗೂ ತಾಳ್ಮೆಯಿಂದ ಇರುವುದಾಗಿ ಭರವಸೆ ನೀಡಿದೆ. ಅಫ್ಘಾನಿಸ್ತಾನ ಎಲ್ಲಾ ಸಂಕಷ್ಟವನ್ನು ಎದುರಿಸಿ ಮುನ್ನಡೆಯಲಿದೆ," ಎಂದಿದೆ.
ಉತ್ತರ ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಬಾಂಬ್ ಸ್ಪೋಟದಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಪೊಲೀಸರು ಮಾಹಿತಿ ನೀಡಿದ್ದಾರೆ. ದೋಸ್ತ್ ಮೊಹಮ್ಮದ್ ಅವರು ಹೇಳಿರುವ ಪ್ರಕಾರ ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ದಾಳಿಯಲ್ಲಿ ಬಹುತೇಕರು ಮೃತಪಟ್ಟಿದ್ದಾರೆ. ಕುಂದುಜ್ ಪ್ರದೇಶದಲ್ಲಿ ಸ್ಫೋಟ ನಡೆದಿದ್ದು, ಇಸ್ಲಾಮಿಕ್ ಸ್ಟೇಟ್ ಸೇನೆಯು ಮೊದಲಿನಿಂದಲೂ ಅಫ್ಘಾನಿಸ್ತಾನದ ಅಲ್ಪಸಂಖ್ಯಾತರಾಗಿರುವ ಶಿಯಾ ಮುಸ್ಲಿಮರ ಮೇಲೆ ದಾಳಿ ನಡೆಸುತ್ತಲೇ ಇದೆ.
ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಈ ಹಿಂದೆ ಕುಂದುಜ್ನಲ್ಲಿ ಶಿಯಾ ಮಸೀದಿಗಳಲ್ಲಿ ಸಾಕಷ್ಟು ಸ್ಫೋಟಗಳು ಸಂಭವಿಸಿವೆ. ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಇದಕ್ಕೂ ಮುನ್ನ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಬಾಂಬ್ ಸ್ಪೋಟವಾಗಿದ್ದು, ಕೆಲವು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ವಕ್ತಾರುರು ಹೇಳಿದ್ದರು. ಈದ್ಗಾ ಮಸೀದಿಯಲ್ಲಿ ಸೇರಿದ್ದವರನ್ನು ಗುರಿಯಾಗಿಸಿಕೊಂಡು ಈ ಬಾಂಬ್ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. "ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ," ಎಂದು ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯ್ಯದ್ ಖೋಸ್ತಿ ತಿಳಿಸಿದ್ದಾರೆ ಎಂದು ಎಎಫ್ಪಿ ಸುದ್ದಿ ಸಂಸ್ಥೆಯು ವರದಿ ಮಾಡಿದೆ.
(ಒನ್ಇಂಡಿಯಾ ಸುದ್ದಿಗಳು)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications