ಕ್ಯಾಲಿಫೋರ್ನಿಯಾ ಶಾಲೆಯಲ್ಲಿ ಇಬ್ಬರನ್ನು ಕೊಂದವನು ತಾನೂ ಸತ್ತ

By: ವಿಕಾಸ್ ನಂಜಪ್ಪ
Subscribe to Oneindia Kannada

ಕ್ಯಾಲಿಫೋರ್ನಿಯಾ, ಏಪ್ರಿಲ್ 11: ಶಿಕ್ಷಕಿ ಹಾಗೂ ಎಂಟು ವರ್ಷದ ವಿದ್ಯಾರ್ಥಿಯನ್ನು ಹತ್ಯೆಗೈದ ವ್ಯಕ್ತಿಯೊಬ್ಬ ಆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದ ಸ್ಯಾನ್ ಬರ್ನಾರ್ಡಿನೋ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ತನಿಖಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಶಂಕಿತ ಮೃತಪಟ್ಟಿದ್ದಾನೆ.

ನಾರ್ತ್ ಪಾರ್ಕ್ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ವ್ಯಕ್ತಿಯೊಬ್ಬ ಪಿಸ್ಟಲ್ ನಿಂದ ಮನಬಂದಂತೆ ಗುಂಡು ಹಾರಿಸಿದ್ದಾನೆ. ಈ ವೇಳೆ ಇಬ್ಬರು ವಿದ್ಯಾರ್ಥಿಗಳಿಗೆ ಕೂಡ ಗಾಯವಾಗಿದೆ. ಸ್ಯಾನ್ ಬರ್ನಾರ್ಡಿನೊ ಪೊಲೀಸ್ ಅಧಿಕಾರಿ ಮಾತನಾಡಿ, ಇದು ಕೊಲೆ-ಆತ್ಮಹತ್ಯೆ ಪ್ರಕರಣ ಎಂದು ಹೇಳಿದ್ದಾರೆ.[ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆ]

ಪೊಲೀಸರು ಬಂದೂಕುಧಾರಿಯ ಗುರುತು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ. ಮೃತ ಮಹಿಳೆಯನ್ನು ಆಕೆ ಸಂಬಂಧಿಕರು ಗುರುತಿಸಬೇಕಿದೆ. ಮನೆ ಜಗಳದಿಂದ ಈ ಘಟನೆ ನಡೆಯಿತೋ ಎಂಬ ಆಯಾಮದಿಂದಲೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Gun

ಅವರ ಸದ್ಯದ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಮೃತಮಹಿಳೆ ಶಾಲೆಯ ಶಿಕ್ಷಕಿ. ದಾಳಿ ವೇಳೆ ಆಕೆ ತರಗತಿಯಲ್ಲಿ ಪಾಠ ಮಾಡುತ್ತಿದ್ದರು ಎಂದು ಶಾಲೆಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
A teacher and an 8 year old student died in an apparent murder-suicide inside an elementary school in San Bernardino, South California. Investigators say that the suspect is down and there is no further threat to the North Park School. A man opened fire with a pistol on Monday before killing himself.
Please Wait while comments are loading...