ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೈಲಿನಲ್ಲಿರುವ ಚೋಕ್ಸಿ ಚಿತ್ರ ಬಿಡುಗಡೆ, ಭಾರತಕ್ಕೆ ಕಳಿಸಲು ಮನವಿ

|
Google Oneindia Kannada News

ನವದೆಹಲಿ, ಮೇ 30: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಭಾರತದ ನಂ.1 ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಸದ್ಯ ಡೊಮಿನಿಕಾದಲ್ಲಿ ಜೈಲಿನಲ್ಲಿರುವ ಚಿತ್ರ ಬಿಡುಗಡೆಯಾಗಿದೆ. ಇದಾದ ಬಳಿಕ, ಆತನನ್ನು ಭಾರತಕ್ಕೆ ವಿಚಾರಣೆಗೆ ಕಳಿಸುವಂತೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ. ಜೈಲಿನಲ್ಲಿ ಕಂಬಿ ಹಿಂದಿರುವ ಮೆಹುಲ್ ಚೋಕ್ಸಿ ಕಣ್ಣುಗಳು ಊದಿಕೊಂಡಿವೆ, ಮತ್ತು ದೇಹದ ಮೇಲೆ ಗಾಯದ ಗುರುತುಗಳಿವೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ ಶಾಖೆಯೊಂದರಲ್ಲಿ 13,500 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿ ಜತೆಗೆ ಮೆಹುಲ್ ಚೊಕ್ಸಿ ಕೂಡಾ ಆರೋಪಿಯಾಗಿದ್ದು, ಕೆರಿಬಿಯನ್ ದ್ವೀಪ ರಾಷ್ಟ್ರ ಆಂಟಿಗಾ ಹಾಗೂ ಬರ್ಬುಡಾದಲ್ಲಿ ಪೌರತ್ವ ಪಡೆದುಕೊಂಡಿದ್ದಾರೆ.

ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಡೊಮಿನಿಕಾ ಕೋರ್ಟ್ ತಡೆಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಡೊಮಿನಿಕಾ ಕೋರ್ಟ್ ತಡೆ

ಡೊಮಿನಿಕಾದ ರಾಷ್ಟ್ರೀಯ ಭದ್ರತಾ ಸಚಿವಾಲಯ ಮತ್ತು ಗೃಹ ಸಚಿವಾಲಯ ಹೇಳುವ ಪ್ರಕಾರ, ಅಕ್ರಮ ಪ್ರವೇಶ ಮಾಡಿದ್ದರಿಂದ ಚೋಕ್ಸಿಯನ್ನು ಬಂಧಿಸಲಾಗಿತ್ತು. ಜೊತೆಗೆ ಮೆಹುಲ್ ಚೋಕ್ಸಿಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಆಂಟಿಗುವಾ ಮತ್ತು ಬಾರ್ಬುಡಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಂಟಿಗುವಾ ಅಧಿಕಾರಿಗಳು ಮಾಹಿತಿ ಒದಗಿಸಿದ ಬಳಿಕ, ಮೆಹುಲ್​ ಚೋಕ್ಸಿಯನ್ನು ಆಂಟಿಗುವಾಕ್ಕೆ ವಾಪಸ್​ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದೆ.

The first pictures of fugitive diamantaire Mehul Choksi surfaced

ಡೊಮಿನಿಕಾ ಸರ್ಕಾರವು ಆಂಟಿಗುವಾ ಮತ್ತು ಭಾರತ ಸರ್ಕಾರಗಳೊಂದಿಗೆ ಸಹಕರಿಸುತ್ತಿದೆ. ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಹೊಂದಿದ್ದಾರೆ. ಆದರೆ ಆಂಟಿಗುವಾಕ್ಕೆ ಚೋಕ್ಸಿಯನ್ನು ವಾಪಸ್ ಕಳುಹಿಸದಂತೆ ನಾವು ಡೊಮಿನಿಕಾ ಕಾನೂನು ಜಾರಿ ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಚೋಕ್ಸಿಯನ್ನು ನೇರವಾಗಿ ಭಾರತಕ್ಕೆ ವಾಪಸ್​ ಕಳುಹಿಸಲು ಭಾರತೀಯ ಕಾನೂನು ಜಾರಿ ಸಂಸ್ಥೆಗಳು ಅಗತ್ಯ ವ್ಯವಸ್ಥೆ ಮಾಡಬೇಕೆಂದು ನಾವು ವಿನಂತಿ ಮಾಡಲಾಗಿದೆ. ಪೋರ್ಟ್ ಆಫ್ ಸ್ಪೇನ್ ಭಾರತೀಯ ರಾಯಭಾರಿ ಅರುಣ್ ಕುಮಾರ್ ಸಾಹು ಅವರು ಖುದ್ದು ಡೊಮಿನಿಕಾಕ್ಕೆ ತೆರಳಿ, ಚೋಕ್ಸಿ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡಲು ಮನವಿ ಮಾಡಲಿದ್ದಾರೆ.

The first pictures of fugitive diamantaire Mehul Choksi surfaced

ಇಂಟರ್ ಪೋಲ್ ನಿಂದ ರೆಡ್ ಕಾರ್ನರ್ ನೋಟಿಸ್ ಪಡೆದಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಅವರು ಭಾರತದ ಪೌರತ್ವವನ್ನು ತೊರೆದಿದ್ದಾರೆ. ರಾಯಭಾರ ಕಚೇರಿಗೆ ಭಾರತದ ಪಾಸ್ ಪೋರ್ಟ್ ನೀಡಿದ್ದಾರೆ. ಜೊತೆಗೆ ಜಾಲಿ ಹಾರ್ಬರ್ ಮಾರ್ಕ್ಸ್ ನಲ್ಲಿ ವಾಸವಾಗಿದ್ದೇನೆ ಎಂದು ಹೊಸ ವಿಳಾಸವನ್ನು ನೀಡಿದ್ದಾರೆ.

English summary
The first pictures of fugitive diamantaire Mehul Choksi surfaced on Saturday that showed the PNB scam accused behind bars in Dominica, where he was arrested a few days back.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X