ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಲ್ಲಿ ಪ್ರತಿಭಟನೆ ಮಾಡಿದ್ರೆ ಗುಂಡೇಟು ಪಕ್ಕಾ!

|
Google Oneindia Kannada News

ಹಾಂಗ್ ಕಾಂಗ್, ನವೆಂಬರ್.11: ಭಾರತದಲ್ಲಿ ಪ್ರಜಾಪ್ರಭುತ್ವ ವ್ಯನಸ್ಥೆಯಿದೆ. ಇಲ್ಲಿ ದಿನನಿತ್ಯ ಒಂದಿಲ್ಲೊಂದು ಪ್ರತಿಭಟನೆಗಳು ಸರ್ಕಾರದ ವಿರುದ್ಧ ಹೋರಾಟಗಳು ನಡೆಯುತ್ತಲೇ ಇರುತ್ತವೆ. ಆದರೆ, ವಿದೇಶದಲ್ಲಿ ಪರಿಸ್ಥಿತಿ ಹಾಗಿಲ್ಲ. ಅದರಲ್ಲೂ ಇದೊಂದು ದೇಶದಲ್ಲಿ ಪ್ರತಿಭಟನೆ ನಡೆಸಿದರೆ, ಗುಂಡೇಟು ಬೀಳೋದು ಪಕ್ಕಾ.

ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇದೊಂದು ಘಟನೆ ನಡೆದಿದ್ದು ಭಾರತದಲ್ಲಲ್ಲ, ಬದಲಿಗೆ ಹಾಂಗ್ ಕಾಂಗ್ ನಲ್ಲಿ. ಸರ್ಕಾರದ ನೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರನ ಮೇಲೆ ಪೊಲೀಸರೇ ಗುಂಡು ಹಾರಿಸಿದ್ದಾರೆ.

ಹೌದು, ಹಾಂಗ್ ಕಾಂಗ್ ಸರ್ಕಾರದ ವಿರುದ್ಧ ಪ್ರಜೆಗಳೆಲ್ಲ ಬೀದಿಗೆ ಇಳಿದಿದ್ದಾರೆ. ಕ್ಯಾರಿ ಲ್ಯಾಮ್ಸ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಹಸ್ತಾಂತರ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

 The police opened fire on the protesters

ಕಳೆದ ನವೆಂಬರ್.04ರಂದು ಪ್ರತಿಭಟನಾನಿರತ ವಿದ್ಯಾರ್ಥಿ ಚೌ ಎಂಬಾತ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದನು. ನಂತರ ನವೆಂಬರ್.08ರಂದೇ ಅದೇ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಬಿದ್ದ ಪ್ರಾಣ ಬಿಡುತ್ತಾನೆ. ವಿದ್ಯಾರ್ಥಿ ಆತ್ಮಹತ್ಯೆಯಿಂದ ಕೆರಳಿದ ವಿದ್ಯಾರ್ಥಿ ಸಮೂಹ, ಇಂದು ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿಯಿತು.

 The police opened fire on the protesters

ಪ್ರತಿಭಟನೆ ನಡೆಸಿದ್ದಕ್ಕೆ ಗುಂಡೇಟು:

ನೆರೆದ ಪ್ರತಿಭಟನಾಕಾರರನ್ನು ಚದುರಿಸಲು ಹಾಂಗ್ ಕಾಂಗ್ ಪೊಲೀಸರು ವಿದ್ಯಾರ್ಥಿಯೊಬ್ಬನ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಂದು ನಡೆದಿರುವ ಘಟನೆಯಿಂದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಿದೆ.

English summary
Honk-kong Anti-Government Protest: The police opened fire on the protesters.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X