Breaking: ಚೀನಾ-ತೈವಾನ್ ಉದ್ವಿಗ್ನತೆ: ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ
ಕ್ಷಿಪಣಿ ಅಭಿವೃದ್ಧಿ ತಂಡದ ನೇತೃತ್ವ ವಹಿಸಿದ್ದ ತೈವಾನ್‌ನ ಉನ್ನತ ಅಧಿಕಾರಿಯೊಬ್ಬರು ಶುಕ್ರವಾರ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಯ ನಂತರ ಚೀನಾ ಮತ್ತು ತೈವಾನ್ ನಡುವಿನ ಉದ್ವಿಗ್ನತೆಯ ನಡುವೆ ಇದು ಸಂಭವಿಸಿದೆ.
ಯುಎಸ್ ಪಾರ್ಲಿಮೆಂಟ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ತೈವಾನ್ ಭೇಟಿಯ ಬಗ್ಗೆ ಚೀನಾ ಕೋಪಗೊಂಡಿದ್ದು, ವಿಶ್ವದ ಎರಡು ಮಹಾಶಕ್ತಿಗಳಾದ ಚೀನಾ ಮತ್ತು ಅಮೆರಿಕ ನಡುವೆ ಯುದ್ಧ ಸಂಭವಿಸಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ. ಇದಕ್ಕೆ ಕಾರಣ ಜೋ ಬೈಡನ್ ಅವರೊಂದಿಗಿನ ದೂರವಾಣಿ ಸಂಭಾಷಣೆಯ ಬಳಿಕವೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಬೆಂಕಿಯೊಂದಿಗೆ ಆಟವಾಡುವ ತಪ್ಪನ್ನು ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಇದರ ಹೊರತಾಗಿಯೂ ತೈವಾನ್‌ಗೆ ನ್ಯಾನ್ಸಿ ಪೆಲೋಸಿಯ ಭೇಟಿ ನೀಡಿದರು. ಈ ಬಗ್ಗೆ ಚೀನಾ ಕೋಪಗೊಂಡಿದೆ ಮತ್ತು ನಿರಂತರವಾಗಿ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸುತ್ತಿದೆ. ಇಷ್ಟೇ ಅಲ್ಲ, ಚೀನಾ ತನ್ನ ಸೇನಾ ಪಡೆಯನ್ನೂ ತೈವಾನ್ ಗಡಿಯ ಬಳಿ ವ್ಯಾಯಾಮದ ಹೆಸರಿನಲ್ಲಿ ಬಿಟ್ಟಿದೆ. ಆದರೆ, ಚೀನಾ ಸೇನೆಯು ನಾಲ್ಕು ದಿನಗಳ ಸಮರಾಭ್ಯಾಸ ನಡೆಸುವುದಾಗಿ ಹೇಳಿದೆ.
ನ್ಯಾನ್ಸಿ ಪೆಲೋಸಿ ತೈವಾನ್ ಭೇಟಿಯಿಂದ ಆಕ್ರೋಶಗೊಂಡಿರುವ ಚೀನಾ "ರಾತ್ರೋರಾತ್ರಿ ತೈವಾನ್ ಅನ್ನು ಗುರಿಯಾಗಿಸಿಕೊಂಡು ಅಂದಾಜು 11 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ಇದು ದ್ವೀಪದ ಈಶಾನ್ಯ, ಪೂರ್ವ ಮತ್ತು ಆಗ್ನೇಯಕ್ಕೆ ಪರಿಣಾಮ ಬೀರಿದೆ" ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಚೀನಾದ ಈ ಕ್ರಮಗಳನ್ನು ನಾವು ಖಂಡಿಸುತ್ತೇವೆ. ಇದು ಬೇಜವಾಬ್ದಾರಿ ಮತ್ತು ತೈವಾನ್ ಜಲಸಂಧಿಯಾದ್ಯಂತ ಮತ್ತು ಆ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವ ನಮ್ಮ ದೀರ್ಘಕಾಲದ ಉದ್ದೇಶಕ್ಕೆ ವಿರುದ್ಧವಾಗಿದೆ, "ಎಂದು ಕಿರ್ಬಿ ಹೇಳಿದ್ದಾರೆ.

"ಈ ಕ್ರಮಗಳು ಮುಂದುವರಿಯುತ್ತವೆ ಮತ್ತು ಮುಂಬರುವ ದಿನಗಳಲ್ಲಿ ಚೀನಿಯರು ಹೀಗೆ ಪ್ರತಿಕ್ರಿಯಿಸುತ್ತಾರೆ ಎಂದು ನಾವು ನಿರೀಕ್ಷಿಸಿದ್ದು, ಇದಕ್ಕೆ ಏನು ಮಾಡಬೇಕೆಂದು ಅಮೆರಿಕ ಸಹ ಸಿದ್ಧವಾಗಿದೆ. ಆದರೆ ನಾವು ಬಿಕ್ಕಟ್ಟನ್ನು ಹುಡುಕುವುದಿಲ್ಲ ಅಥವಾ ಬಯಸುವುದಿಲ್ಲ" ಎಂದು ಅವರು ತಿಳಿಸಿದ್ದಾರೆ.ಅಮೆರಿಕ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರ ಭೇಟಿ ಬಳಿಕ ತೈವಾನ್ ಸುತ್ತಲೂ ಯುದ್ಧ ವಿಮಾನಗಳು, ಸಮರ ನೌಕೆಗಳನ್ನು ನಿಯೋಜಿಸುವ ಮೂಲಕ ದಿಗ್ಬಂಧನ ವಿಧಿಸುವಂತೆ ಅತಿ ದೊಡ್ಡ ಸೇನಾ ತಾಲೀಮನ್ನು ಚೀನಾ ಮಾಡುತ್ತಿದೆ.
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications