ತೋಶಾಖಾನಾ ಪ್ರಕರಣ: ಇಮ್ರಾನ್ ಖಾನ್‌ಗೆ ಜಾಮೀನು ರಹಿತ ಬಂಧನದ ವಾರೆಂಟ್!
ತೋಶಾಖಾನಾ ಪ್ರಕರಣದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಲಾಗಿದೆ.
ಇಸ್ಲಾಮಾಬಾದ್ ಫೆಬ್ರವರಿ 28: ತೋಶಾಖಾನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್‌ನ ಪಾಕಿಸ್ತಾನ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಇತರ ರಾಷ್ಟ್ರಗಳ ಮುಖ್ಯಸ್ಥರು ಮತ್ತು ವಿದೇಶಿ ಗಣ್ಯರಿಂದ ಪಡೆದ ಉಡುಗೊರೆಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಪಾಕ್ ನ್ಯಾಯಾಲಯ ಇಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದೆ.

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಾಫರ ಇಕ್ಬಾಲ್ ಅವರು ಪಾಕಿಸ್ತಾನ-ತೆಹ್ರೀಕ್-ಇ-ಇನ್ಸಾಫ್ (ಪಿಟಿಇ) ಮುಖ್ಯಸ್ಥರ ವಿರುದ್ಧ ವಾರಂಟ್ ಹೊರಡಿಸಿದ್ದಾರೆ ಮತ್ತು ಪ್ರಕರಣವನ್ನು ಮಾರ್ಚ್ 7ಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು. ಇಂದು ಚಾರ್ಜ್ ಶೀಟ್ ಸಲ್ಲಿಸಬೇಕಿದ್ದು, ಪದೇ ಪದೇ ಸಮನ್ಸ್ ನೀಡಿದರೂ ಆರೋಪಿಗಳು ಹಾಜರಾಗಿಲ್ಲ ಎಂದು ನ್ಯಾಯಾಧೀಶ ಇಕ್ಬಾಲ್ ಹೇಳಿದ್ದಾರೆ.
ಏನಿದು ತೋಶಾಖಾನಾ ಪ್ರಕರಣ?
ಪಾಕಿಸ್ತಾನದ ಚುನಾವಣಾ ಆಯೋಗಕ್ಕೆ (ಇಸಿಪಿ) ಸಲ್ಲಿಸಿದ ವಾರ್ಷಿಕ ಆಸ್ತಿಯಲ್ಲಿ ತೋಶಖಾನ್ ಎಂಬ ರಾಜ್ಯದ ಡಿಪಾಸಿಟರಿಯಿಂದ ರಿಯಾಯಿತಿ ದರದಲ್ಲಿ ಪ್ರಧಾನ ಮಂತ್ರಿಯಾಗಿ ಸ್ವೀಕರಿಸಿದ ದುಬಾರಿ ಗ್ರಾಫ್ ಕೈಗಡಿಯಾರ ಸೇರಿದಂತೆ ಉಡುಗೊರೆಗಳನ್ನು ಖರೀಸಲು ಮತ್ತು ಲಾಭಕ್ಕಾಗಿ ಮಾರಾಟ ಮಾಡಿದಕ್ಕಾಗಿ ಖಾನ್ ಕಾನೂನು ತೊಂದರೆಗಳಲ್ಲಿ ಸಿಲುಕಿದ್ದಾರೆ.












Click it and Unblock the Notifications