PM Modi US Visit: ಡೊನಾಲ್ಡ್ ಟ್ರಂಪ್ ತೆರಿಗೆ ಯುದ್ಧದಿಂದ ಭಾರತ ಬಚಾವ್?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶತ್ರುಗಳ ವಿರುದ್ಧ ತೆರಿಗೆ ಯುದ್ಧ ಸಾರಿದ್ದು, ಜಗತ್ತೇ ಈ ತೆರಿಗೆ ಯುದ್ಧ ನೋಡಿ ಬೆಚ್ಚಿಬಿದ್ದಿದೆ. ಅದರಲ್ಲೂ ಅಮೆರಿಕದ ಜೊತೆಗೆ ವ್ಯಾಪಾರ ಮತ್ತು ವ್ಯವಹಾರ ನಡೆಸುತ್ತಿದ್ದ ಸಣ್ಣಪುಟ್ಟ ದೇಶಗಳಿಗೆ ಹೊಸ ನಡುಕ ಸೃಷ್ಟಿಯಾಗಿದೆ. ಹೀಗಿದ್ದಾಗ ನಮಗೆ ಅಂದರೆ ಭಾರತೀಯರಿಗೂ ಇದರಿಂದ ದೊಡ್ಡ ಹೊಡೆತ ಬೀಳುವ ಲಕ್ಷಣ ಕಾಣುತ್ತಿತ್ತು. ಆದರೆ ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿ ನಂತರ ಸಂಪೂರ್ಣ ಚಿತ್ರಣ ಬದಲಾದಂತೆ ಕಾಣುತ್ತಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆ ಆರಂಭಕ್ಕೂ ಮೊದಲು ಡೊನಾಲ್ಡ್ ಟ್ರಂಪ್ ತೆರಿಗೆ ಯುದ್ಧ ನಡೆಸುವ ಮುನ್ಸೂಚನೆ ನೀಡಿದ್ದರು. ಅದರ ಪ್ರಕಾರ ಈಗಾಗಲೇ ಹಲವು ದೇಶಗಳ ವಿರುದ್ಧ ಭಾರಿ ದೊಡ್ಡ ಮೊತ್ತದ ತೆರಿಗೆ ವಿಧಿಸಿ ಆಘಾತ ನೀಡಿದ್ದಾರೆ ಡೊನಾಲ್ಡ್ ಟ್ರಂಪ್. ಭಾರತಕ್ಕೆ ಇದರಿಂದ ಇನ್ನಷ್ಟು ಆಘಾತ ಎದುರಾಗಿದ್ದು, ಭಾರತೀಯ ಷೇರು ಮಾರುಕಟ್ಟೆಗೆ ಕೂಡ ಈ ವಿಚಾರದಲ್ಲಿ ಸಿಕ್ಕಾಪಟ್ಟೆ ಹೊಡೆತ ಬಿದ್ದಿತ್ತು. ಕಳೆದ ಕೆಲವು ದಿನಗಳಿಂದ, ಭಾರತದ ಷೇರು ಮಾರುಕಟ್ಟೆ ನಿರಂತರವಾಗಿ ಕುಸಿತ ಕಾಣುತ್ತಿತ್ತು. ಇಷ್ಟೆಲ್ಲದರ ನಡುವೆ ಇದೀಗ ಮತ್ತೊಂದು ಭರ್ಜರಿ ಸುದ್ದಿ ಭಾರತಕ್ಕೆ ಸಿಕ್ಕಿದೆ.

ತೆರಿಗೆ ಯುದ್ಧದಿಂದ ಭಾರತ ಬಚಾವ್?
ಈಗಿನ ವಾತಾವರಣ ಗಮನಿಸಿದರೆ ಭಾರತಕ್ಕೆ ತೆರಿಗೆ ವಿನಾಯಿತಿ ಸಿಗುವುದು ಗ್ಯಾರಂಟಿ ಆಗಿದೆ ಎನ್ನಬಹುದು. ಈ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಕೂಡ ಮುನ್ಸೂಚನೆ ನೀಡಿ ಹೊಸ ಸುದ್ದಿ ಕೊಟ್ಟಿದ್ದಾರೆ. ಈಗಾಗಲೇ ಟ್ರಂಪ್ ಜೊತೆಗೆ ಭಾರತದ ಪ್ರಧಾನಿ ಮೋದಿ ಅವರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದು, ತೆರಿಗೆ ಹೇರಿಕೆಯ ವಿಚಾರವಾಗಿ ಕೂಡ ಮಾತುಕತೆ ನಡೆಯುತ್ತಿದೆ.
ಭಾರತ ಮತ್ತು ಅಮೆರಿಕ ಮಧ್ಯೆ ಲಕ್ಷಾಂತರ ಕೋಟಿ ರೂಪಾಯಿ ವ್ಯವಹಾರ ಮಾಡಲಾಗುತ್ತಿದ್ದು ಹೆಚ್ಚಿನ ತೆರಿಗೆ ಹಾಕಿದರೆ ಎರಡೂ ದೇಶಗಳಿಗೆ ಇದರಿಂದ ಭಾರಿ ಹೊಡೆತ ಬೀಳುವ ಆತಂಕವೂ ಇದೆ. ಹೀಗಾಗಿ ಅಮೆರಿಕದ ಮೇಲೆ ಒತ್ತಡ ಹೆಚ್ಚಾಗಿತ್ತು, ಅದರ ಪರಿಣಾಮ ಭಾರತಕ್ಕೆ ಈಗ ಲಾಭವಾಗುವ ನಿರೀಕ್ಷೆ ಇದೆ.
500 ಬಿಲಿಯನ್ ಡಾಲರ್‌ಗೆ ಏರಿಕೆ
ತೈಲ ಕ್ಷೇತ್ರ ಮಾತ್ರವಲ್ಲದೆ, ಭಾರತದ ನ್ಯೂಕ್ಲಿಯರ್ ಎನರ್ಜಿ ಅಂದರೆ ಪರಮಾಣು ಆಧರಿತ ವಿದ್ಯುತ್ ಉದ್ಪಾತದನಾ ಕ್ಷೇತ್ರಕ್ಕೆ ಅಮೆರಿಕ ಎಂಟ್ರಿ ಕೊಡಲು ಬೇಕಾದ ಕಾನೂನು ತಿದ್ದುಪಡಿ ಮಾಡಲು ಇದೀಗ ಭಾರತ ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಭಾರತ & ಅಮೆರಿಕ ನಡುವೆ ವ್ಯಾಪಾರದ ಒಟ್ಟು ಮೊತ್ತವನ್ನು 2030ರ ಒಳಗೆ 500 ಬಿಲಿಯನ್ ಡಾಲರ್‌ಗೆ ಏರಿಕೆ ಮಾಡಲು ಎರಡೂ ದೇಶಗಳು ಒಪ್ಪಿಗೆ ಸೂಚಿವೆ. ಇದರ ಜೊತೆಗೆ F-35 ಜೆಟ್ ಖರೀದಿ ಬಗ್ಗೆ ಕೂಡ ಪಿಎಂ ಮೋದಿ ಮತ್ತು ಟ್ರಂಪ್ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications