Donald Trump: ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಕಾರ್ಯಕ್ರಮ: ಯಾರೆಲ್ಲ ಭಾಗಿ, ಗಣ್ಯರ ಲಿಸ್ಟ್ ಇಲ್ಲಿದೆ
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು (ಜನವರಿ 20) ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೋಮವಾರ ವಾಷಿಂಗ್ಟನ್ ಡಿಸಿ ಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾ। ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.
ಡೊನಾಲ್ಡ್ ಟ್ರಂಪ್ ಸೋಮವಾರ ವಾಷಿಂಗ್ಟನ್ ಡಿಸಿ ಯ ಕ್ಯಾಪಿಟಲ್‌ನಲ್ಲಿ ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಜಗತ್ತಿನ ಅತಿ ಶ್ರೀಮಂತನೂ ಆಗಿರುವ ಟ್ರಂಪ್ ಆಪ್ತ ಎಲಾನ್ ಮಸ್ಕ್, ಖ್ಯಾತ ಉದ್ಯಮಿ ಜೆಫ್ ಬೆಜೋಸ್ ಮತ್ತು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್, ಚೀನಾ ಸಾಮಾಜಿಕ ಮಾಧ್ಯಮ ದೈತ್ಯ ಟಿಕ್‌ಟಾಕ್ ಮುಖ್ಯಸ್ಥ ಶೌ ಚೆವ್, ಮಾಜಿ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯೂ ಬುಷ್ ಮತ್ತು ಬರಾಕ್ ಒಬಾಮಾ, ಬಿಲ್ ಕ್ಲಿಂಟನ್ ಪತ್ನಿ ಹಿಲರಿ ಕ್ಲಿಂಟನ್, ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್, ನಿರ್ಗಮಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭಾಗವಹಿಸಲಿದ್ದಾರೆ.
ವಿದೇಶಿ ಗಣ್ಯರಿಗೂ ಆಹ್ವಾನಿಸಲಾಗಿದ್ದು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ -ಜೇವಿಯರ್ ಮಿಲಿ, ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್, ಜಪಾನಿನ ವಿದೇಶಾಂಗ ಸಚಿವ ಟಕೇಶಿ ಇವಾಯಾ ಅವರು ಭಾಗವಹಿಸಲಿದ್ದಾರೆ. ಬಲ ಪಂಥೀಯ ನಾಯಕರಾದ ನಿಗೆಲ್ ಫರಾಜ್ (ಯುಕೆ), ಎರಿಕ್ ಜೆಮ್ಮೌರ್ (ಫ್ರಾನ್ಸ್) ಮತ್ತು ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಭಾಗಿಯಾಗಿವ ಸಾಧ್ಯತೆಯಿದೆ.
ಟ್ರಂಪ್ ಕಾರ್ಯಕ್ರಮಕ್ಕೆ ಗೈರಾಗಲಿರುವ ಗಣ್ಯರು
ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೆಲವು ಗಣ್ಯರು ಗೈರಾಗಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆಹ್ವಾನವಿಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ಗೈರುಹಾಜರಾಗಿದ್ದಾರೆ. ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಗೈರಾಗಲಿದ್ದಾರೆ.
ಟ್ರಂಪ್ ಭಾಷಣ
ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾ। ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದ ಬಳಿಕ ಟ್ರಂಪ್, ತಮ್ಮ ಹೊಸ ಅವಧಿಯ ಮೊದಲ ಭಾಷಣವನ್ನು ಮಾಡುವ ನಿರೀಕ್ಷೆಯಿದೆ ಹಾಗೂ ಅದರಲ್ಲಿ ಮುಂದಿನ ನಾಲ್ಕು ವರ್ಷಗಳವರೆಗಿನ ಯೋಜನೆಗಳ ಬಗ್ಗೆ ಘೋಷಣೆ ಮಾಡಲಿದ್ದಾರೆ. ನಂತರ ಮೊದಲ ಕಾರ್ಯಾದೇಶಗಳಿಗೆ ಸಹಿ ಹಾಕಲಿದ್ದಾರೆ. ಇದಲ್ಲದೆ, ಗಣ್ಯರ ಜತೆ ಔತಣದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಟ್ರಂಪ್ ತಮ್ಮ ತಂಡದೊಂದಿಗೆ ಭಾನುವಾರ ವಾಷಿಂಗ್ಟನ್‌ಗೆ ಬಂದಿಳಿದಿದ್ದು, ಪ್ರಮಾಣ ವಚನಕ್ಕೆ ಪೂರ್ವಭಾವಿಯಾಗಿ ಕೆಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.












Click it and Unblock the Notifications