ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿ ಬಗ್ಗೆ ಹೇಳಿದ್ದೇನು? Donald Trump
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗಬೇಕು ಅನ್ನೋ ವಿಚಾರ ದೊಡ್ಡ ಸದ್ದು ಮಾಡಿತ್ತು. ನಾನು ಅನೇಕ ಯುದ್ಧಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ಕಾಪಾಡಿದ್ದೇನೆ, ಹೀಗಾಗಿ ನನಗೇ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕು ಎಂದು ಡೊನಾಲ್ಡ್ ಟ್ರಂಪ್ ವಾದ ಮಾಡಿದ್ದರು. ಆದರೆ ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿತ್ತು. ಹೀಗಿದ್ದಾಗ ಡೊನಾಲ್ಡ್ ಟ್ರಂಪ್ ಅವರ ಅಭಿಮಾನಿ ಆಗಿರುವ ಮಾರಿಯಾ ಕೊರಿನಾ ಮಚಾಡೊ, ನೇರವಾಗಿ ಅಮೆರಿಕ ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ತಮಗೆ ಸಿಕ್ಕಿದ್ದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಹಸ್ತಾಂತರ ಮಾಡಿದ್ದರು. ಈ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರಿಗೆ ಮಾರಿಯಾ ಕೊರಿನಾ ಮಚಾಡೊ ನೀಡಿದ ನೊಬೆಲ್ ಶಾಂತಿ ಪ್ರಶಸ್ತಿ ಪದಕ ದೊಡ್ಡ ಸದ್ದು ಮಾಡುತ್ತಿದೆ. ಹೀಗೆಲ್ಲಾ ನೊಬೆಲ್ ಪ್ರಶಸ್ತಿಯನ್ನು ಒಬ್ಬರು ಮತ್ತೊಬ್ಬರಿಗೆ ಹಸ್ತಾಂತರ ಮಾಡಬಹುದಾ? ಎಂಬ ಚರ್ಚೆಗಳು ಜೋರಾಗಿವೆ. ಆದರೆ ಇದನ್ನು ಸ್ವತಃ ಟ್ರಂಪ್ ಅವರೇ ಸಮರ್ಥನೆ ಮಾಡಿಕೊಂಡಿದ್ದಾರೆ. ಅವರು ಅದನ್ನ ನನಗೆ ಕೊಟ್ಟರು, ಅದು ತುಂಬಾ ಅದ್ಭುತವಾಗಿದೆ ಎಂದು ನಾನು ಭಾವಿಸಿದ್ದೇನೆ. ಹಾಗೇ ಮಚಾಡೊ ಅವರು ಇದನ್ನು ನನಗೆ ಕೊಡುವಾಗ, ನಾನು ಎಂಟು ಯುದ್ಧಗಳನ್ನು ಕೊನೆಗೊಳಿಸಿದ್ದೇನೆ ಹೀಗಾಗಿ ಈ ಪ್ರಶಸ್ತಿಗೆ ನಿಮಗಿಂತ ಬೇರೆ ಯಾರೂ ಅರ್ಹರಲ್ಲ ಎಂದರು ಅಂತಾ ಇದೀಗ ಟ್ರಂಪ್ ಸಮರ್ಥನೆ ಮಾಡಿಕೊಂಡಿದ್ದಾರೆ.

ನೊಬೆಲ್ ಶಾಂತಿ ಪ್ರಶಸ್ತಿ ಕೊಟ್ಟಿದ್ದೇಕೆ?
ವೆನೆಜುವೆಲಾ ದೇಶದಲ್ಲಿ ಹಲವು ವರ್ಷಗಳಿಂದ ಸಂಘರ್ಷ ನಡೆಯುತ್ತಿದೆ, ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಈ ಸಂಘರ್ಷದಲ್ಲಿ ಹೋರಾಡಿದ್ದರು. ಅಲ್ಲದೆ ವೆನೆಜುವೆಲಾ ಮಾಜಿ ಅಧ್ಯಕ್ಷ ನಿಕೋಲಾಸ್ ಮಡುರೊ ವಿರುದ್ಧ ಸಂಘಟಿತ ಹೋರಾಟ ನಡೆಸಿ, ಸರ್ಕಾರದ ನಿರ್ಧಾರಗಳನ್ನು ವಿರೋಧ ಮಾಡಿದ್ದರು. ಈ ಎಲ್ಲಾ ಸಾಧನೆ ಪರಿಗಣಿಸಿ ಮಾರಿಯಾ ಕೊರಿನಾ ಮಚಾಡೊ ಅವರಿಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿತ್ತು. ಆದರೆ ತಮಗೆ ಸಿಕ್ಕಿದ್ದ ನೊಬೆಲ್ ಶಾಂತಿ ಪ್ರಶಸ್ತಿಯ ಪದಕ ಹಾಗೂ ಪ್ರಮಾಣ ಪತ್ರವನ್ನು ಮಚಾಡೊ ಟ್ರಂಪ್ ಅವರಿಗೆ ಹಸ್ತಾಂತರ ಮಾಡಿದ್ದು ದೊಡ್ಡ ವಿವಾದ ಎಬ್ಬಿಸಿದೆ.
ಭಾರತ & ಪಾಕಿಸ್ತಾನ ಯುದ್ಧ ಪ್ರಸ್ತಾಪ
ಡೊನಾಲ್ಡ್ ಟ್ರಂಪ್ ಅವರು ಪದೇ ಪದೇ ಹಲವು ಯುದ್ಧಗಳನ್ನು ತಾನು ನಿಲ್ಲಿಸಿದ್ದೇನೆ, ಈ ಮೂಲಕ ಜಗತ್ತಿನಲ್ಲಿ ಶಾಂತಿ ಕಾಪಾಡಲು ಹೋರಾಡಿದ್ದೇನೆ ಎಂದು ಸಮಜಾಯಿಷಿ ನೀಡುತ್ತಾ ಬಂದಿದ್ದಾರೆ. ಈ ಪೈಕಿ ಭಾರತ & ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ಕೂಡ ನಾನೇ ಎಂದು ಹೇಳಿದ್ದರು ಡೊನಾಲ್ಡ್ ಟ್ರಂಪ್. ಈ ವಿಚಾರವಾಗಿ ಭಾರತ ಕೂಡ ಬೇಸರ ಹೊರ ಹಾಕಿತ್ತು. ಅಲ್ಲದೆ ಗಾಜಾ ಪಟ್ಟಿಯಲ್ಲಿ ನಡೆಯುತ್ತಿದ್ದ ಹಿಂಸಾಚಾರಕ್ಕೆ ಬ್ರೇಕ್ ಹಾಕಲು ಪ್ರಯತ್ನಿಸಿದ್ದು, ಇರಾನ್ ಮತ್ತು ಇಸ್ರೇಲ್ ಯುದ್ಧ ವಿಚಾರಗಳನ್ನೆಲ್ಲಾ ಮುಂದೆ ಇಟ್ಟುಕೊಂಡು ಟ್ರಂಪ್ ಅವರು ಇಷ್ಟುದಿನ ವಾದ ಮಾಡುತ್ತಿದ್ದರು. ಇದೀಗ ತಮಗೆ ನೊಬೆಲ್ ಶಾಂತಿ ಪ್ರಶಸ್ತಿಯ ಪದಕ ಸಿಕ್ಕಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
-
ಇರಾನ್ ಮಾತ್ರವಲ್ಲ ಉತ್ತರ ಕೊರಿಯಾ ಸರ್ವಾಧಿಕಾರಿ ನಡೆಗೆ ಬೆಚ್ಚಿಬಿದ್ದ ಅಮೆರಿಕ | Kim Jong Un -
ಮಧ್ಯಪ್ರಾಚ್ಯ ದೇಶಗಳಿಗೆ ಸಹಾಯ ಮಾಡುತ್ತಿರುವ ಉಕ್ರೇನ್, ರೊಚ್ಚಿಗೆದ್ದ ಇರಾನ್ ಸೇನೆ | Iran Conflict -
200 ಸೇನಾ ತಜ್ಞರನ್ನ ಮಧ್ಯಪ್ರಾಚ್ಯಕ್ಕೆ ಕಳುಹಿಸಿದ ಉಕ್ರೇನ್, ನಿಮಗೆ ಟೈಂ ಬಂತು ಅಂತಿದ್ದಾರೆ ಜನ | Iran Conflict -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ












Click it and Unblock the Notifications