Trump: ಭಾರತ-ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ: ಮತ್ತೆ ಬೆನ್ನುತಟ್ಟಿಕೊಂಡ ಟ್ರಂಪ್‌

ಇತ್ತೀಚೆಗೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿದ್ದು ಗೊತ್ತೇ ಇದೆ. ಭಾರತವನ್ನು ಕೆಣಕಿದ ಪಾಕ್‌ಗೆ ಮುಟ್ಟಿ ನೋಡಿಕೊಳ್ಳುವಂತೆ ಮಾಡಿದ್ದನ್ನು ಕೂಡ ಜಗತ್ತು ನೋಡಿತ್ತು. ಆದರೆ ಇನ್ನೇನು ಯುದ್ಧ ನಡೆಯುತ್ತೆ ಎನ್ನುವಷ್ಟರಲ್ಲಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಪ್ರವೇಶಿಸಿದ್ದರು. ಆಗ ಟ್ರಂಪ್‌ ಕಾರಣದಿಂದಲೇ ಯುದ್ಧ ನಿಂತಿತ್ತು ಎಂದು ಜಾಗತಿಕವಾಗಿ ಹೇಳಲಾಗಿತ್ತು. ಇದೀಗ ಟ್ರಂಪ್‌ ಇದೇ ವಿಚಾರವನ್ನು ಮತ್ತೆ ಪುನರುಚ್ಛರಿಸಿದ್ದಾರೆ. ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಮತ್ತೊಮ್ಮೆ ಬೆನ್ನುತಟ್ಟಿಕೊಂಡಿದ್ದಾರೆ.

ನಾನು ಪಾಕಿಸ್ತಾನ ಮತ್ತು ಭಾರತದ ನಡುವಿನ ಯುದ್ಧವನ್ನು ನಿಲ್ಲಿಸಿದೆ. ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಎಂದು ಟ್ರಂಪ್ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೋದಿ ಒಬ್ಬ ಅದ್ಭುತ ವ್ಯಕ್ತಿ, ನಾನು ನಿನ್ನೆ ರಾತ್ರಿ ಅವರೊಂದಿಗೆ ಮಾತನಾಡಿದೆ ಎಂದು ಟ್ರಂಪ್‌ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ ಕೀರ್ತಿಯನ್ನು ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮದಾಗಿಸಿಕೊಂಡಿದ್ದಾರೆ.

trump-repeats-india-pakistan-ceasefire-claim-modi-denies-us-mediation

ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯದಲ್ಲಿ ಭಾರತ ಯಾವುದೇ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಎಂದಿಗೂ ಸ್ವೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಅಧ್ಯಕ್ಷ ಟ್ರಂಪ್‌ಗೆ ಸ್ಪಷ್ಟಪಡಿಸಿದ್ದು ಪಾಕಿಸ್ತಾನಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಭಾರತ ಎಂದಿಗೂ ಮಧ್ಯಸ್ಥಿಕೆ ವಹಿಸಲು ಒಪ್ಪಿಕೊಂಡಿಲ್ಲ, ಎಂದಿಗೂ ಒಪ್ಪುವುದಿಲ್ಲ. ಅಂತಹ ಮಧ್ಯಸ್ಥಿಕೆಗಳಿಗೆ ನವದೆಹಲಿ ಎಂದಿಗೂ ಒಪ್ಪಿಕೊಂಡಿಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಯೋಜನೆಗಳನ್ನು ಉಲ್ಲೇಖಿಸಿದ ಟ್ರಂಪ್, ನಾವು ಭಾರತದ ಮೋದಿ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ಆದರೆ ನಾನು ಪಾಕಿಸ್ತಾನ ಮತ್ತು ಭಾರತದ ನಡುವಿನ ಯುದ್ಧವನ್ನು ನಿಲ್ಲಿಸಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಇಬ್ಬರನ್ನೂ ಟ್ರಂಪ್ ಶ್ಲಾಘಿಸಿದ್ದಾರೆ.

ಈ ಮುನೀರ್ ಪಾಕಿಸ್ತಾನದ ಕಡೆಯಿಂದ ಯುದ್ಧವನ್ನು ನಿಲ್ಲಿಸುವಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದರು. ಇನ್ನೊಂದು ಕಡೆಯಿಂದ ಮೋದಿ ಕೂಡ ಎಂದಿದ್ದಾರೆ. ಇಬ್ಬರು ಯುದ್ಧ ಮಾಡಲು ಹೊರಟಿದ್ದರು, ಎರಡೂ ಪರಮಾಣು ರಾಷ್ಟ್ರಗಳು. ನಾನು ಎರಡು ಪ್ರಮುಖ ಪರಮಾಣು ರಾಷ್ಟ್ರಗಳ ನಡುವಿನ ಯುದ್ಧವನ್ನು ನಿಲ್ಲಿಸಿದೆ. ಆದರೆ ಅದರ ಬಗ್ಗೆ ಯಾವುದೇ ಕಥೆ ಬರೆಯಲಾಗಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಮೋದಿ ಅವರೊಂದಿಗಿನ ದೂರವಾಣಿ ಸಂಭಾಷಣೆಯ ಕೆಲವೇ ಗಂಟೆಗಳ ನಂತರ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಇತ್ತೀಚೆಗೆ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ನಿರ್ಧಾರವನ್ನು ಎರಡೂ ಸೇನೆಗಳು ನೇರವಾಗಿ ತೆಗೆದುಕೊಂಡಿವೆ ಎಂದು ಸ್ಪಷ್ಟಪಡಿಸಿದರು. ಭಾರತ ಎಂದಿಗೂ ಮಧ್ಯಸ್ಥಿಕೆ ಒಪ್ಪಿಕೊಂಡಿಲ್ಲ, ಅದನ್ನು ಸ್ವೀಕರಿಸುವುದಿಲ್ಲ ಮತ್ತು ಎಂದಿಗೂ ಮಾಡುವುದಿಲ್ಲ ಎಂದು ಮೋದಿ ಅವರನ್ನು ಉಲ್ಲೇಖಿಸಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ. ಯುದ್ಧ ಸನ್ನಿವೇಶದ ಸಂದರ್ಭದಲ್ಲಿ ಅಮೇರಿಕಾ-ಭಾರತ ವ್ಯಾಪಾರ ಒಪ್ಪಂದ ಅಥವಾ ವಾಷಿಂಗ್ಟನ್‌ನ ಯಾವುದೇ ಮಧ್ಯಸ್ಥಿಕೆಯ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಯಾವುದೇ ಸಮಯದಲ್ಲಿ ಅದು ನಡೆದಿಲ್ಲ ಎಂದು ಮಿಸ್ರಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+