Donald Trump: ಭಾರತ - ಪಾಕ್‌ಗೆ "ಕದನ ವಿರಾಮ ಘೋಷಿಸಿ" ಇಲ್ಲ ವ್ಯಾಪಾರ ನಿಲ್ಲಿಸುತ್ತೇನೆ ಎಂದು ಎಚ್ಚರಿಸಿದ್ದೆ ಎಂದ ಟ್ರಂಪ್!
Donald Trump: ಭಾರತ ಹಾಗೂ ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಯುದ್ಧ ಮಾದರಿ ಸಂಘರ್ಷವನ್ನು ತಪ್ಪಿಸುವುದಕ್ಕೆ ನಾವೇ ಕಾರಣ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಷ್ಟೇ ಅಲ್ಲ ಮುಂದುವರಿದು ಎರಡೂ ದೇಶಗಳು ನ್ಯೂಕ್ಲಿಯರ್ ಬಾಂಬ್ ಹೊಂದಿವೆ. ಹೀಗಾಗಿ ಈ ದೇಶಗಳ ನಡುವೆ ಯುದ್ಧ ನಡೆದರೆ ಭಾರೀ ಅಪಾಯ ಎದುರಾಗುವ ಸಾಧ್ಯತೆ ಇತ್ತು. ಈ ಕಾರಣಕ್ಕೆ ಅಮೆರಿಕದ ಮಧ್ಯ ಪ್ರವೇಶವು ಪ್ರಮುಖ ಹಾಗೂ ನಿರ್ಣಾಯಕವಾಗಿತ್ತು ಎಂದು ಡೊನಾಲ್ಡ್ ಟ್ರಂಪ್ ಅವರು ಹೇಳಿಕೊಂಡಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಏರ್ಪಟ್ಟಿದ್ದ ಕದನವನ್ನು ನಿಲ್ಲಿಸದಿದ್ದರೆ, ನಿಮ್ಮ ಎರಡೂ ದೇಶಗಳೊಂದಿಗೆ ನಾವು ವ್ಯಾಪಾರ ಹಾಗೂ ವಾಣಿಜ್ಯ ವ್ಯವಹಾರಗಳನ್ನು ಮಾಡುವುದಿಲ್ಲ. ನಾವು ನಿಮ್ಮೊಂದಿಗೆ ವ್ಯಾಪಾರವನ್ನು ಮುಂದುವರಿಸಬೇಕು ಎಂದಾದರೆ ಕದನ ವಿರಾಮವನ್ನು ಘೋಷಿಸಿ ಎಂದು ನಾನು ಭಾರತ ಹಾಗೂ ಪಾಕಿಸ್ತಾನಕ್ಕೆ ಹೇಳಿದ್ದೆ ಎಂದು ಸಹ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಲ್ಲದೇ ಎರಡೂ ದೇಶಗಳು ನ್ಯೂಕ್ಲಿಯರ್ ಬಾಂಬ್‌ಗಳನ್ನು ಹೊಂದಿರುವ ಕಾರಣಕ್ಕೆ ಈ ಉದ್ವಿಗ್ನತೆ ಭಾರೀ ದೊಡ್ಡ ಅಪಾಯವನ್ನು ತಂದೊಡ್ಡುವ ಸಾಧ್ಯತೆ ಇತ್ತು. ಇದರಿಂದ ಲಕ್ಷಾಂತರ ಜನ ಸಾವನ್ನಪ್ಪುವ ಸಾಧ್ಯತೆ ಇತ್ತು. ನಾವು ಮಧ್ಯಪ್ರವೇಶ ಮಾಡಿದ್ದರಿಂದಲೇ ಈ ಉದ್ವಿಗ್ನತೆ ಕಡಿಮೆಯಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪೂರ್ಣ ಪ್ರಮಾಣದ ಕ್ರೆಡಿಟ್ ತೆಗೆದುಕೊಂಡಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮವಾಗಿರುವುದಕ್ಕೆ ನನಗೆ ಅತ್ಯಂತ ಹೆಮ್ಮೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಾಯಕತ್ವವು ಅಚಲ ಮತ್ತು ಶಕ್ತಿಯುತವಾಗಿತ್ತು. ಎರಡೂ ದೇಶಗಳ ನಾಯಕರು ನಿಜವಾಗಿಯೂ ಪರಿಸ್ಥಿತಿಯ ಗಂಭೀರತೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲು ಮತ್ತು ಅರ್ಥಮಾಡಿಕೊಳ್ಳಲು ಶಕ್ತಿ, ಬುದ್ಧಿವಂತಿಕೆ ಮತ್ತು ಧೈರ್ಯವನ್ನು ಹೊಂದುವ ದೃಷ್ಟಿಕೋನವನ್ನು ಹೊಂದಿದ್ದರು.
ಎರಡೂ ದೇಶಗಳಿಗೆ ವ್ಯಾಪಾರ ನಿಲ್ಲಿಸುವ ಎಚ್ಚರಿಕೆ ನೀಡಿದ್ದೆ!
ಇನ್ನು ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗದೆ ಇದ್ದರೆ ನಾವು ಎರಡೂ ದೇಶಗಳ ನಡುವೆ ವ್ಯಾಪಾರ ಹಾಗೂ ವಹಿವಾಟನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ನಾವು ಬಹಳಷ್ಟು ಸಹಾಯ ಮಾಡಿದ್ದೇವೆ ಮತ್ತು ವ್ಯಾಪಾರಕ್ಕೂ ಸಹಾಯ ಮಾಡಿದ್ದೇವೆ ಎಂದು ನಾನು ಹೇಳಿದೆ. ಬನ್ನಿ, ನಾವು ನಿಮ್ಮೊಂದಿಗೆ ಬಹಳಷ್ಟು ವ್ಯಾಪಾರ ಮಾಡುತ್ತೇವೆ. ಇದನ್ನು ನಿಲ್ಲಿಸೋಣ ಅಂತ ಕರೆ ನೀಡಿದ್ದೆ. ನೀವು ಉದ್ವಿಗ್ನ ಪರಿಸ್ಥಿತಿ ನಿಲ್ಲಿಸಿದರೆ ಮಾತ್ರ ನಾವು ವ್ಯಾಪಾರ ಮಾಡುತ್ತಿದ್ದೇವೆ. ನೀವು ಅದನ್ನು ನಿಲ್ಲಿಸದಿದ್ದರೆ, ನಾವು ಯಾವುದೇ ವ್ಯಾಪಾರ ಮಾಡುವುದಿಲ್ಲ ಎಂದು ಹೇಳಿದ್ದೆ ಎಂದಿದ್ದಾರೆ.
ನಿಮ್ಮೊಂದಿಗೆ ವ್ಯಾಪಾರವನ್ನು ಮುಂದುವರಿಸಬೇಕಾದರೆ, ಇದನ್ನು ಕೂಡಲೇ ನಿಲ್ಲಿಸಿ ಎಂದು ನಾನು ಹೇಳಿದ್ದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಇದೀಗ ಕದನ ವಿರಾಮ ಘೋಷಣೆಯಾಗಿದೆ. ಈ ಕದನ ವಿರಾಮ ಶಾಶ್ವತವಾಗಿ ಇರಲಿದೆ ಎಂದು ನಾನು ಭಾವಿಸಿದ್ದೇನೆ ಎಂದೂ ಟ್ರಂಪ್ ಅವರು ಹೇಳಿದ್ದಾರೆ.












Click it and Unblock the Notifications