ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಬಗ್ಗೆ 'ಏನೂ ಗೊತ್ತಿಲ್ಲ' ಎಂದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 22: ಉತ್ತರ ಕೊರಿಯಾದ ಸುಪ್ರೀಂ ಲೀಡರ್ ಕಿಮ್ ಜಾಂಗ್ ಉನ್ ಆರೋಗ್ಯದ ಬಗ್ಗೆ ನಿನ್ನೆಯಷ್ಟೇ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿತ್ತು. 36 ವರ್ಷ ವಯಸ್ಸಿನ ಕಿಮ್ ಜಾಂಗ್ ಉನ್ ಅನಾರೋಗ್ಯಕ್ಕೀಡಾಗಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅಮೇರಿಕಾದ ಅಧಿಕಾರಿಯೊಬ್ಬರು ತಿಳಿಸಿದ್ದರು. ಜೊತೆಗೆ ಕಿಮ್ ಜಾಂಗ್ ಉನ್ ಆರೋಗ್ಯದ ಬಗ್ಗೆ ಅಮೇರಿಕಾದ ಗುಪ್ತಚರ ಇಲಾಖೆ ಮಾಹಿತಿ ಕಲೆಹಾಕುತ್ತಿದೆ ಎಂದೂ ಹೇಳಲಾಗಿತ್ತು.

Recommended Video

      ಈಶಾನ್ಯ ರಾಜ್ಯಗಳಲ್ಲಿ ಕೇಂದ್ರದ ವಿರುದ್ಧ ಆಕ್ರೋಶ | Oneindia Kannada

      ಈಗ ಇದೇ ವಿಚಾರದ ಕುರಿತಾಗಿ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. ''ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ಯಾ ಎಂಬುದು ನಮಗೆ ಗೊತ್ತಿಲ್ಲ. ಆದರೆ, ಅವರು ಆರೋಗ್ಯವಾಗಿರಲಿ ಎಂದು ಆಶಿಸುತ್ತೇನೆ'' ಅಂತ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

      ಡೊನಾಲ್ಡ್ ಟ್ರಂಪ್ ಹೇಳಿದ್ದೇನು.?

      ಡೊನಾಲ್ಡ್ ಟ್ರಂಪ್ ಹೇಳಿದ್ದೇನು.?

      ''ಕಿಮ್ ಜಾಂಗ್ ಉನ್ ಆರೋಗ್ಯವಾಗಿರಲಿ ಎಂದು ಆಶಿಸುತ್ತೇನೆ. ರಾಷ್ಟ್ರಕ್ಕಾಗಿ ನಮ್ಮಿಬ್ಬರ ಮಧ್ಯೆ ಉತ್ತಮ ಬಾಂಧವ್ಯ ಇತ್ತು. ಅವರ ಆರೋಗ್ಯದ ಬಗ್ಗೆ ಪ್ರಕಟವಾಗಿರುವ ವರದಿಗಳು ಸತ್ಯವೇ ಎಂಬುದು ನಮಗೆ ಗೊತ್ತಿಲ್ಲ'' ಅಂತ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

      ಶಸ್ತ್ರಚಿಕಿತ್ಸೆ ಬಗ್ಗೆ ವರದಿ

      ಶಸ್ತ್ರಚಿಕಿತ್ಸೆ ಬಗ್ಗೆ ವರದಿ

      ಏಪ್ರಿಲ್ 12 ರಂದು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಕಿಮ್ ಜಾಂಗ್ ಉನ್ ಒಳಗಾಗಿದ್ದರು. ಅತಿಯಾದ ಧೂಮಪಾನ ಮತ್ತು ಬೊಜ್ಜಿನಿಂದಾಗಿ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಸದ್ಯ ಹ್ಯಾಂಗ್ ಸಾನ್ ಕೌಂಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡೈಲಿ ಎನ್.ಕೆ ಆನ್ ಲೈನ್ ಪತ್ರಿಕೆ ವರದಿ ಮಾಡಿದೆ.

      ಅಜ್ಜನ ಜನ್ಮದಿನೋತ್ಸವಕ್ಕೆ ಚಕ್ಕರ್

      ಅಜ್ಜನ ಜನ್ಮದಿನೋತ್ಸವಕ್ಕೆ ಚಕ್ಕರ್

      ಉತ್ತರ ಕೊರಿಯಾದ ಮಾಧ್ಯಮಗಳ ಮುಂದೆ ಕಿಮ್ ಜಾಂಗ್ ಉನ್ ಪ್ರತ್ಯಕ್ಷವಾಗಿದ್ದು ಏಪ್ರಿಲ್ 11 ರಂದು. ಏಪ್ರಿಲ್ 15 ರಂದು ಅವರ ಅಜ್ಜ ಕಿಮ್ ಸಂಗ್ ಜನ್ಮದಿನಾಚರಣೆಯಿದ್ದರೂ, ಕಿಂಗ್ ಜಾಂಗ್ ಉನ್ ಕಾಣಿಸಿಕೊಳ್ಳಲಿಲ್ಲ. ಹೀಗಾಗಿ ಕಿಮ್ ಜಾಂಗ್ ಉನ್ ಅನಾರೋಗ್ಯದ ಬಗ್ಗೆ ವದಂತಿಗಳು ಕೇಳಿಬರುತ್ತಿವೆ.

      ದಕ್ಷಿಣ ಕೊರಿಯಾದ ಅಧ್ಯಕ್ಷ ಹೇಳಿದ್ದೇನು.?

      ದಕ್ಷಿಣ ಕೊರಿಯಾದ ಅಧ್ಯಕ್ಷ ಹೇಳಿದ್ದೇನು.?

      ''ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾದ ಮೇಲೆ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ'' ಎಂದು ಅಮೇರಿಕಾದ ಅಧಿಕಾರಿಗಳು ತಿಳಿಸಿದ್ದರೆ, ''ಉತ್ತರ ಕೊರಿಯಾದ ಗ್ರಾಮೀಣ ಪ್ರದೇಶದಲ್ಲಿ ಕಿಮ್ ಜಾಂಗ್ ಉನ್ ಮಾಮೂಲಿಯಾಗಿ ಓಡಾಡಿಕೊಂಡಿದ್ದಾರೆ'' ಎಂದು ದಕ್ಷಿಣ ಕೊರಿಯಾದ ಅಧ್ಯಕ್ಷ ಮೂನ್ ಜೇ ಇನ್ ಹೇಳಿದ್ದಾರೆ. ಆದರೆ ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂಬುದು ಖಚಿತವಾಗಿ ತಿಳಿದುಬಂದಿಲ್ಲ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+