Rice: ಭಾರತಕ್ಕೆ "ಅಕ್ಕಿ" ವಿಚಾರದಲ್ಲಿ ಶಾಕ್ ನೀಡಲು ಮುಂದಾದ ಟ್ರಂಪ್: ಅಕ್ಕಿ ಬೆಲೆ ಏರಿಕೆ ಸಾಧ್ಯತೆ!
ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹುಚ್ಚಾಟ ಮುಂದುವರಿದಿದ್ದು, ಇದೀಗ ಟ್ರಂಪ್ ಅವರ ಕಣ್ಣು ಭಾರತದ ಅಕ್ಕಿಯ ಮೇಲೆ ಬಿದ್ದಿದೆ. ಇದರಿಂದ ಮುಂದಿನ ದಿನಗಳಲ್ಲಿ ಭಾರತದಲ್ಲಿ ಅಕ್ಕಿ ಬೆಲೆ ಹೆಚ್ಚಾಗಬಹುದೇ ಎನ್ನುವ ಆತಂಕವೂ ಸಹ ಶುರುವಾಗಿದೆ. ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ವಿವಿಧ ವಸ್ತುಗಳ ಮೇಲೆ ಈಗಾಗಲೇ ಭಾರೀ ಸುಂಕ ವಿಧಿಸಿ ಆಗಿದೆ. ಇದೀಗ ಅಕ್ಕಿಯನ್ನು ತಂದು ಇಲ್ಲಿ ಸುರಿಯಬೇಡಿ ಎಂದು ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಅಮೇರಿಕಾದ ಹಲವು ಸಂಸ್ಥೆಗಳು ಭಾರತದೊಂದಿಗೆ ಸುಧಾರಣೆ ಮಾಡಿಕೊಳ್ಳಬೇಕು, ಒಳ್ಳೆಯ ಸಂಬಂಧ ಉಳಿಸಿಕೊಳ್ಳಬೇಕು ಎಂದು ಹೇಳುತ್ತಿವೆ. ಆದರೆ, ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗಳಿಗೆಗೊಂದು ಮಾತನಾಡುವುದನ್ನು ಮುಂದುವರಿಸಿದ್ದು, ಭಾರತದ ಮೇಲೆ ಹೊಸ ಹಾಗೂ ದೊಡ್ಡ ತೆರಿಗೆ ವಿಧಿಸುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

ಭಾರತ ಸೇರಿದಂತೆ ಕೆಲವೊಂದು ದೇಶಗಳಿಂದ ಹೆಚ್ಚು ಅಕ್ಕಿಯನ್ನು ಅಮೇರಿಕಾಗೆ ರಫ್ತು ಮಾಡಲಾಗುತ್ತಿದೆ. ಇದನ್ನು ತಪ್ಪಿಸಬೇಕು. ಅಮೇರಿಕಾಗೆ ಅಕ್ಕಿ ತಂದು ಸುರಿಯುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದೂ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈಚೆಗೆ ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಭಾರತಕ್ಕೆ ಹೊಸ ಸುಂಕ ಬೆದರಿಕೆ ಹಾಕಿರುವ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾತುಕತೆ ನಿಧಾನಗತಿಯಲ್ಲಿದೆ ಎಂದಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಈಚೆಗೆ ಭಾರತಕ್ಕೆ ಭೇಟಿ ನೀಡಿದ ಮೇಲೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಅಲ್ಲದೇ ರಷ್ಯಾದಿಂದ ಭಾರತಕ್ಕೆ ಆಮದು ಆಗುತ್ತಿರುವ ಕಚ್ಚಾ ತೈಲ ಸೇರಿದಂತೆ ಯಾವುದೇ ವಸ್ತುಗಳನ್ನು ಬೇಕಾದರೂ ಅಗತ್ಯ ಪ್ರಮಾಣದಲ್ಲಿ ಭಾರತಕ್ಕೆ ಕೊಡುವುದಾಗಿ ರಷ್ಯಾ ಹೇಳಿದೆ. ರಷ್ಯಾದಿಂದ ತೈಲ ಖರೀದಿ ಮಾಡಬಾರದು ಹಾಗೂ ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಿದರೆ ಇನ್ನಷ್ಟು ಸುಂಕವನ್ನು ಭಾರತದ ಮೇಲೆ ವಿಧಿಸಬೇಕಾಗುತ್ತದೆ ಎಂದು ಭಾರತದ ಮೇಲೆ ಅಮೇರಿಕಾ ನಿರಂತರವಾಗಿ ಒತ್ತಡ ಹೇರುತ್ತಲ್ಲೇ ಇದೆ. ಆದರೆ ಅಮೇರಿಕಾದ ಬೆದರಿಕೆಗಳನ್ನು ಭಾರತವು ಗಂಭೀರವಾಗಿ ತೆಗೆದುಕೊಂಡೇ ಇಲ್ಲ.
ಇದೀಗ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಕೃಷಿ ಆಮದಿನ ಮೇಲೆ ಮುಖ್ಯವಾಗಿ ಅಕ್ಕಿ ಆಮದಿನ ಕಣ್ಣಿರಿಸಿದ್ದು ದುಬಾರಿ ಸುಂಕವನ್ನು ಹಾಕಬೇಕಾಗುತ್ತದೆ ಎಂದಿದ್ದಾರೆ. ಅಲ್ಲದೇ ಭಾರತದೊಂದಿಗೆ ಅಮೇರಿಕಾಗೆ ಹೆಚ್ಚು ಅಕ್ಕಿ ಆಮದು ಮಾಡುತ್ತಿರುವ ಚೀನಾ ಮತ್ತು ಥೈಲ್ಯಾಂಡ್ ದೇಶಗಳಿಗೂ ಎಚ್ಚರಿಕೆ ನೀಡಲಾಗಿದೆ. ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಇತರ ಏಷ್ಯಾದ ಪೂರೈಕೆದಾರರಿಂದ ಕೃಷಿ ಆಮದಿನ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಕ್ಕಿ ಬೆಲೆ ಏರುಪೇರಾಗುವ ಸಾಧ್ಯತೆ: ಇನ್ನು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಅಕ್ಕಿಯ ಮೇಲೆ ಸುಂಕ ವಿಧಿಸುವ ಮಾತನಾಡಿದ್ದು ಇದರಿಂದ ಮುಂದಿನ ದಿನಗಳಲ್ಲಿ ಭಾರತದಲ್ಲಿ ಅಕ್ಕಿ ಬೆಲೆ ಏರಿಕೆ ಅಥವಾ ಇಳಿಕೆಯಾಗಲಿದೆಯೇ ಎನ್ನುವ ಚರ್ಚೆ ಶುರುವಾಗಿದೆ. ದುಬಾರಿ ಸುಂಕ ವಿಧಿಸಿದರೆ ಅಕ್ಕಿ ಬೆಲೆ ಹೆಚ್ಚಳವಾಗುವ ಸಾಧ್ಯತೆಯೂ ಇದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications