ನನ್ನ ಆತ್ಮೀಯ ಗೆಳೆಯ ಮೋದಿ ಜೊತೆ ಮಾತನಾಡಬೇಕು ಎಂದ ಟ್ರಂಪ್ - ಮೋದಿ ಹೇಳಿದ್ದೇನು ?

ಅಮೆರಿಕಾ ಮತ್ತು ಭಾರತದ ನಡುವಿನ ತೆರಿಗೆ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣಿಸುತ್ತಿವೆ. ಇದಕ್ಕೆ ಕಾರಣ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವುದು ಹೊಸ ಸಂಚಲವನ್ನು ಸೃಷ್ಟಿ ಮಾಡಿದೆ. ಭಾರತ ಮತ್ತು ಅಮೆರಿಕಾದ ನಡುವೆ ಉತ್ತಮ ಸ್ನೇಹ ಬಾಂಧವ್ಯ ಇದೆ. ಆದರೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಭಾರತದ ಮೇಲೆ ಶೇ 50ರಷ್ಟು ತೆರಿಗೆ ವಿಧಿಸಿದ ಮೇಲೆ ಎರಡೂ ದೇಶಗಳ ನಡುವೆ ಸ್ನೇಹ ಸಂಬಂಧ ಕುಸಿದಿದೆ. ಇದೀಗ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಭಾರತದ ಮುಂದೆ ಸ್ನೇಹ ಹಸ್ತವನ್ನು ಚಾಚಿದ್ದಾರೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಟ್ವೀಟ್ ಏನು ಹಾಗೂ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರಿಯಾಕ್ಷನ್‌ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

ಭಾರತ - ಅಮೆರಿಕಾದ ಟ್ಯಾಕ್ಸ್‌ ವಾರ್ ಬೆದರಿಕೆಗೆ ಬಗ್ಗದೆ ತನ್ನದೇ ದಾರಿಯನ್ನು ಕಂಡುಕೊಂಡಿತ್ತು. ಇದು ಅಮೆರಿಕಾಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿತ್ತು. ಇದೀಗ ಕೊನೆಗೂ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಯೂಟರ್ನ್‌ ತೆಗೆದುಕೊಂಡಿದ್ದಾರೆ. ಭಾರತದ ವಿಚಾರದಲ್ಲಿ ರಾಜಿಸಂಧಾನಕ್ಕೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (Donald J. Trump) ಅವರು ಮುಂದಾಗಿದ್ದಾರೆ.

Trump Wants Talks with Good Friend Modi PM Modi s Reaction Inside

ಈ ಸಂಬಂಧ ಸೋಷಿಯಲ್ ಮೀಡಿಯಾ ಟ್ರೂತ್‌ನಲ್ಲಿ ಬರೆದುಕೊಂಡಿರುವ ಅವರು, ಭಾರತ ಮತ್ತು ಅಮೆರಿಕ ಎರಡೂ ದೇಶಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ಪರಿಹರಿಸಲು ಮಾತುಕತೆಗಳನ್ನು ಮುಂದುವರಿಸುತ್ತಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಮುಂಬರುವ ವಾರಗಳಲ್ಲಿ ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡುವುದಕ್ಕೆ ನಾನು ಕಾತುರದಿಂದ ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ಪ್ರಮುಖ ದೇಶಗಳಿಗೆ ಯಶಸ್ವಿ ಅಥವಾ ಪ್ರಮುಖ ತೀರ್ಮಾನಕ್ಕೆ ಬರಲು ಯಾವುದೇ ತೊಂದರೆ ಇರುವುದಿಲ್ಲ ಎಂದು ನನಗೆ ಖಚಿತವಾಗಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಹೇಳಿದ್ದಾರೆ.

ಇನ್ನು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ರಿಯಾಕ್ಷನ್‌ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿಯೇ ರಿಯಾಕ್ಟ್‌ ಮಾಡಿದ್ದಾರೆ.

ಭಾರತ ಮತ್ತು ಅಮೆರಿಕ ಆತ್ಮೀಯ ಸ್ನೇಹಿತರು ಹಾಗೂ ಸಹಜ ಪಾಲುದಾರರು. ನಮ್ಮ ವ್ಯಾಪಾರ ಮಾತುಕತೆಗಳು ಭಾರತ-ಅಮೆರಿಕ ಪಾಲುದಾರಿಕೆಯ ಅಪರಿಮಿತ ಸಾಮರ್ಥ್ಯವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಲು ದಾರಿ ಮಾಡಿಕೊಡುತ್ತವೆ ಎಂದು ನನಗೆ ವಿಶ್ವಾಸವಿದೆ. ನಮ್ಮ ತಂಡಗಳು ಈ ಚರ್ಚೆಗಳನ್ನು ಆದಷ್ಟು ಬೇಗ ಮುಗಿಸಲು ಕೆಲಸ ಮಾಡುತ್ತಿವೆ. ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಎರಡೂ ದೇಶದ ಜನರಿಗೆ ಉಜ್ವಲ, ಹೆಚ್ಚು ಸಮೃದ್ಧ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಒಟ್ಟಾರೆ ಅಮೆರಿಕಾ ಮತ್ತು ಭಾರತದ ನಡುವೆ ಏರ್ಪಟ್ಟಿದ್ದ ಸುಂಕ / ತೆರಿಗೆ ಸಂಘರ್ಷವು ಸುಖಾಂತ್ಯ ಕಾಣುವ ಲಕ್ಷಣಗಳು ಕಾಣಿಸುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+