Donald Trump: ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್
US Election 2024: ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರದಿಂದ ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರ ವಿರುದ್ಧ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ. ಈ ಮೂಲಕ ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ ನೆಟ್ಟಿದ್ದ ಕುತೂಹಲಕ್ಕೆ ಬುಧವಾರ ತೆರೆ ಬಿದ್ದಿದೆ.
ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗಿಂತ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇಲ್ಲಿಯವರೆಗೂ ಕಮಲಾ ಹ್ಯಾರಿಸ್ 214 ಮತಗಳನ್ನು ಪಡೆದಿದ್ದರೆ, ಡೊನಾಲ್ಡ್ ಟ್ರಂಪ್ ಅವರು ಅವರಿಗಿಂತ 251 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಅಮೆರಿಕದ ಅಧ್ಯಕೀಯ ಚುನಾವಣೆ ಕುರಿತು ಬುಧವಾರ ಸಂಜೆ ಹೊತ್ತಿಗೆ ಸಂಪೂರ್ಣ ಫಲಿತಾಂಶ ಪ್ರಕಟಗೊಳ್ಳಲಿದೆ. ಇದಾದ ನಂತರ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಫ್ಲೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಟ್ರಂಪ್ ಪರವಾಗಿ ಬಹಿರಂಗ ಪ್ರಚಾರ ಮಾಡಿರುವ ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಅವರು ಸಹ ಡೊನಾಲ್ಡ್ ಟ್ರಂಪ್ ಜೊತೆ ವೇದಿಕೆ ಮೇಲಿರಲಿದ್ದಾರೆ ಎಂದು ತಿಳಿದು ಬಂದಿದೆ.
ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ನ್ಯೂ ಹ್ಯಾಂಪ್‌ಶೈರ್‌ನಲ್ಲಿ ಭರ್ಜರಿ ವಿಜಯ ಸಾಧಿಸಿದ್ದಾರೆ. ರಾಜ್ಯದ ನಾಲ್ಕು ಚುನಾವಣಾ ಮತಗಳನ್ನು ಡೆಮಾಕ್ರಟಿಕ್ ಪಕ್ಷವು ಭದ್ರಪಡಿಕೊಂಡಿತು. ಕಮಲಾ ಅವರ ಈ ವಿಜಯವು ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿಗಳ ಪರವಾಗಿ ನ್ಯೂ ಹ್ಯಾಂಪ್‌ಶೈರ್‌ನ ಎರಡು ದಶಕಗಳ ಶ್ರಮವನ್ನು ಎತ್ತಿ ಹಿಡಿದಂತಾಗಿದೆ.
ಏಕೆಂದರೆ ಕಳೆದ 8 ಅಧ್ಯಕ್ಷೀಯ ಚುನಾವಣೆಗಳಲ್ಲಿ 7ರಲ್ಲಿ ಈ ರಾಜ್ಯದಲ್ಲಿ ಈಗ ಡೆಮೋಕ್ರಾಟ್‌ಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. ಒಂಬತ್ತು ತಿಂಗಳ ಮೊದಲು ಮೊದಲ ಅಧ್ಯಕ್ಷೀಯ ಪ್ರಾಥಮಿಕ ರಾಜ್ಯವಾಗಿ ನ್ಯೂ ಹ್ಯಾಂಪ್‌ಶೈರ್‌ನ ಸಾಂಪ್ರದಾಯಿಕ ಹೊಂದಾಣಿಕೆಯಿಂದ ಹೊರ ಬಂದಿತು.
ಅಮೆರಿಕದ ಅಭಿವೃದ್ಧಿ ಬಗ್ಗೆ ಮಾತನಾಡಿದ ಟ್ರಂಪ್
ಪ್ರಸಕ್ತ ಸಾಲಿನ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ವಿಜಯ ಸಾಧಿಸಿರುವ ದೇಶದ 47ನೇ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿರುವ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಜನರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲೇ ತಾವು ಅಮೆರಿಕಾ ದೇಶವನ್ನು ಇನ್ನಷ್ಟು ಅಭಿವೃದ್ಧಿ ಮಾಡುತ್ತೇನೆ. ಇಂತಹ ವಿಜಯ, ಸಂಭ್ರಮಾಚರಣೆ ನೋಡಿರಲಿಲ್ಲ ಎಂದು ತಿಳಿಸಿದ್ದಾರೆ. ಗೆಲುವಿನಗೆ ತಮ್ಮ ನಾಯಕ ಸನೀಹವಾಗುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ. ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.












Click it and Unblock the Notifications