ಪಾಕ್ ವಿದೇಶಾಂಗ ಕಚೇರಿ ವಕ್ತಾರನ ಟ್ವಿಟ್ಟರ್ ಖಾತೆ ಅಮಾನತು
ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಮೊಹ್ಮದ್ ಫೈಸಲ್ ವೈಯಕ್ತಿಕ ಖಾತೆಯನ್ನು ಟ್ವಿಟ್ಟರ್ ಅಮಾನತು ಮಾಡಿದೆ. ಪಾಕಿಸ್ತಾನದ ಮಾಧ್ಯಮಗಳ ಮಾಹಿತಿ ಪ್ರಕಾರ, ಭಾರತದ ಅಧಿಕಾರಿಗಳು ಮೈಕ್ರೋಬ್ಲಾಗಿಂಗ್ ವೆಬ್ ಸೈಟ್ ಗೆ ದೂರು ನೀಡಿದ ನಂತರ ಮಂಗಳವಾರ ರಾತ್ರಿ ಟ್ವಿಟ್ಟರ್ ಖಾತೆ ಅಮಾನತು ಮಾಡಲಾಗಿದೆ.
ಜಿಯೋ ನ್ಯೂಸ್ ವರದಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತವು ನಡೆಸುತ್ತಿರುವ ಹಿಂಸಾಚಾರ ಹಾಗೂ ಅಂತರರಾಷ್ಟ್ರೀಯ ಕೋರ್ಟ್ ನಲ್ಲಿ ನಡೆಯುತ್ತಿರುವ ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ಮಾಹಿತಿಯನ್ನು ತಮ್ಮ ಫಾಲೋವರ್ಸ್ ಗಳ ಜತೆಗೆ ಹಂಚಿಕೊಳ್ಳುತ್ತಿದ್ದರು. ಅದ್ದರಿಂದಲೇ ಟ್ವಿಟ್ಟರ್ ಖಾತೆಯನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ.

ಈ ಮಧ್ಯೆ ಮೊಹ್ಮದ್ ಫೈಸಲ್ ನ ಹೆಸರಲ್ಲೇ ಇರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಅಧಿಕೃತ ಟ್ವಿಟ್ಟರ್ ಖಾತೆ ಸಕ್ರಿಯವಾಗಿಯೇ ಇದೆ. ಕಳೆದ ವಾರ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರ ದಾಳಿಯ ನಂತರ ನಲವತ್ತು ಸಿಆರ್ ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದರು. ಈ ಘಟನೆ ನಂತರ ಎರಡೂ ದೇಶಗಳ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.












Click it and Unblock the Notifications