ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಐಎಸ್‌ಐ ವಶದಲ್ಲಿ?

ಇಸ್ಲಾಮಾಬಾದ್, ಜೂನ್ 15 : ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇಬ್ಬರೂ ಸಹ ಐಎಸ್‌ಐ ವಶದಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Recommended Video

      ಮೇಘನಾ ಕುಟುಂಬಕ್ಕೆ ಸಾಂತ್ವನ ಹೇಳಿದ ದೊಡ್ಮನೆ ಕುಟುಂಬ | Oneindia Kannada

      ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಭಂದಿಗಳು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ. ಭಾರತೀಯ ವಿದೇಶಾಂಗ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ.

      Two Indian Officials At Pakistan Likely In ISI Custody

      ಇಬ್ಬರು ಅಧಿಕಾರಿಗಳ ಕಾರನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್‌ಐ) ಹಿಂಬಾಲಿಸಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು. ಸಂಜೆ ಇಬ್ಬರು ಅಧಿಕಾರಿಗಳು ಐಎಸ್‌ಐ ವಶದಲ್ಲಿದ್ದಾರೆ ಎಂಬ ಮಾಹಿತಿ ಬಂದಿದೆ.

      ಭಾರತೀಯ ವಿದೇಶಾಂಗ ಇಲಾಖೆ ಅಧಿಕಾರಿಗಳು ಪಾಕಿಸ್ತಾನದ ಅಧಿಕಾರಿಗಳ ನಿರಂತರ ಸಂಪರ್ಕದಲ್ಲಿದ್ದು, ಅಧಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಧಿಕಾರಿಗಳನ್ನು ಪತ್ತೆ ಹಚ್ಚಲು ಪ್ರಯತ್ನಗಳನ್ನು ಭಾರತ ಮುಂದುವರೆಸಿದೆ.

      ದೆಹಲಿಯ ಕರೋಲ್‌ ಬಾಗ್ ಪ್ರದೇಶದಲ್ಲಿ ಪಾಕಿಸ್ತಾನ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು. ಬಳಿಕ ಎರಡೂ ದೇಶಗಳ ನಡುವೆ ಪರಿಸ್ಥಿತಿ ಬಹಳ ಸೂಕ್ಷ್ಮವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+