• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಐಎಸ್ಐ ವಶದಲ್ಲಿದ್ದ ಇಬ್ಬರು ಭಾರತೀಯ ಅಧಿಕಾರಿಗಳು ಬಿಡುಗಡೆ

|

ನವದೆಹಲಿ, ಜೂನ್.15: ಪಾಕಿಸ್ತಾನ ಗುಪ್ತಚರ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಇಬ್ಬರು ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಸೋಮವಾರ ರಾತ್ರಿ ಬಿಡುಗಡೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಯಿಂದಲೂ ಭಾರತದ ಇಬ್ಬರು ಅಧಿಕಾರಿಗಳನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ(ಐಎಸ್ಐ) ಅಧಿಕಾರಿಗಳ ವಶದಲ್ಲಿದ್ದಾರೆ ಎಂದು ಹೇಳಲಾಗಿತ್ತು.

   Sushanth Singh Rajput's dad collapsed after hearing his son's news | Oneindia Kannada

   ಭಾರತ ಮಿಷನ್ ನಿಂದ 2 ಕಿಲೋ ಮೀಟರ್ ದೂರದಲ್ಲಿ ಇರುವ ಇಸ್ಲಮಾಬಾದ್ ಕಾರ್ಯದರ್ಶಿ ಪೊಲೀಸ್ ಠಾಣೆಗೆ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ಅಧಿಕಾರಿಗಳನ್ನು ಒಪ್ಪಿಸಲಾಗಿದೆ. ಈ ವೇಳೆ ಇಬ್ಬರು ಅಧಿಕಾರಿಗಳ ಮೈ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ತದನಂತರದಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.

   ಪಾಕಿಸ್ತಾನದಲ್ಲಿರುವ ರಾಯಭಾರಿಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸಂದೇಶ ರವಾನಿಸಿದೆ ಎಂದು ಎಎನ್ಐ ಸುದ್ದಿಸಂಸ್ಥೆಯು ವರದಿ ಮಾಡಿತ್ತು. ಇಬ್ಬರು ಭಾರತೀಯ ಅಧಿಕಾರಿಗಳು ನಾಪತ್ತೆಯಾಗಿರುವ ಬಗ್ಗೆ ಪಾಕಿಸ್ತಾನ ಸರ್ಕಾರಕ್ಕೂ ದೂರು ಸಲ್ಲಿಸಲಾಗಿತ್ತು.

   ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಐಎಸ್‌ಐ ವಶದಲ್ಲಿ? ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿ ಐಎಸ್‌ಐ ವಶದಲ್ಲಿ?

   ನವದೆಹಲಿಯಲ್ಲಿ ಇರುವ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳ ವಿರುದ್ಧ ಗೂಢಚರ್ಯೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಶಂಕಿತ ಅಧಿಕಾರಿಗಳನ್ನು ಗಡೀಪಾರು ಮಾಡುವ ಬಗ್ಗೆ ಚರ್ಚೆ ನಡೆಸಿತ್ತು. ಅದಾಗಿ ಒಂದೇ ವಾರದಲ್ಲಿ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿರುವ ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿದ್ದಾರೆ.

   ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿ ಇರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳನ್ನು ಆಕ್ರಮಣಕಾರಿಯಾಗಿ ಕಟ್ಟಿಹಾಕಲಾಗಿದೆ ಎಂಬ ಆರೋಪ ಎದುರಾಗಿತ್ತು. ಭಾರತೀಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲಿನ ಹಲ್ಲೆ ಖಂಡಿಸಿ ಕಳೆದ ಮಾರ್ಚ್ ತಿಂಗಳಿನಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗಿತ್ತು.

   English summary
   Two Missing Indian High Commission Staffers Release From ISI Custody.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X