ಲಾಸ್ ಏಂಜಲೀಸ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರ ಸಾವು
ಕ್ಯಾಲಿಫೋರ್ನಿಯಾ, ಜೂನ್ 02 : ಲಾಸ್ ಏಂಜಲೀಸ್‌ನಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಗುಂಡಿನ ದಾಳಿ ನಡೆಸಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ವಿವಿಯ ಕ್ಯಾಂಪಸ್‌ನಲ್ಲಿರುವ ಬೋಲ್ಟರ್ ಹಾಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಈ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. [ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್, ಒಬಾಮಾ ಕಳವಳ]

ಗುಂಡಿನ ದಾಳಿ ಬಳಿಕ ವಿವಿ ಕ್ಯಾಂಪಸ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ಗುಂಡಿನ ದಾಳಿ ನಡೆಸಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.












Click it and Unblock the Notifications