ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ರೈಲುಗಳ ಮುಖಾಮುಖಿ ಡಿಕ್ಕಿ: 32 ಪ್ರಯಾಣಿಕರ ಸಾವು

|
Google Oneindia Kannada News

ಕೈರೋ, ಮಾರ್ಚ್ 26: ಎರಡು ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 32 ಮಂದಿ ಪ್ರಯಾಣಿಕರು ಮೃತಪಟ್ಟು, 66 ಮಂದಿ ಗಾಯಗೊಂಡ ಘಟನೆ ದಕ್ಷಿಣ ಈಜಿಪ್ಟಿನಲ್ಲಿ ಶುಕ್ರವಾರ ನಡೆದಿದೆ. ರಾಜಧಾನಿ ಕೈರೋದಿಂದ ದಕ್ಷಿಣ ಭಾಗದಲ್ಲಿ 460 ಕಿಮೀ ದೂರದಲ್ಲಿರುವ ಸೊಹಾಗ್ ಪ್ರಾಂತ್ಯದ ತಹ್ತಾ ಜಿಲ್ಲೆಯಲ್ಲಿ ಈ ಅಪಘಾತ ನಡೆದಿದ್ದು, ಹತ್ತಾರು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸೂಯೆಜ್ ಕಾಲುವೆಯಲ್ಲಿ ಸಿಲುಕಿರುವ ಹಡಗಿನ ಸಿಬ್ಬಂದಿ ಎಲ್ಲರೂ ಭಾರತೀಯರುಸೂಯೆಜ್ ಕಾಲುವೆಯಲ್ಲಿ ಸಿಲುಕಿರುವ ಹಡಗಿನ ಸಿಬ್ಬಂದಿ ಎಲ್ಲರೂ ಭಾರತೀಯರು

32 ಜನರು ಮೃತಪಟ್ಟಿದ್ದು, 66 ಮಂದಿ ಗಾಯಗೊಂಡಿದ್ದಾರೆ. ಗಾಯಾಗಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿಕೆ ತಿಳಿಸಿದೆ. ಎರಡು ರೈಲುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಅನೇಕ ಬೋಗಿಗಳು ತಲೆಕೆಳಗಾಗಿ ಉರುಳಿ ಬಿದ್ದಿವೆ.

Two Train Collide Kills 32, Injures 66 In Egypt

ಈಜಿಪ್ಟ್‌ನಲ್ಲಿ ಇತ್ತೀಚಿನ ವರ್ಷಗಳಲ್ಲಿ ವ್ಯಾಪಕ ರೈಲು ಅಪಘಾತಗಳು ಸಂಭವಿಸುತ್ತಿವೆ. ಸಮರ್ಪಕ ಮೂಲಸೌಕರ್ಯ ಹಾಗೂ ನಿರ್ವಹಣೆಯ ಕೊರತೆ ಈ ಅಪಘಾತಗಳಿಗೆ ಕಾರಣ ಎಂದು ಆರೋಪಿಸಲಾಗಿದೆ. 2002ರಲ್ಲಿ ನಡೆದಿದ್ದ ಭೀಕರ ರೈಲು ಅಪಘಾತದಲ್ಲಿ 373 ಮಂದಿ ಮೃತಪಟ್ಟಿದ್ದರು. ಕೈರೊದ ದಕ್ಷಿಣ ಭಾಗದಲ್ಲಿ ಜನರಿಂದ ತುಂಬಿಕೊಂಡಿದ್ದ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು.

ಕಳೆದ ಮಾರ್ಚ್ ತಿಂಗಳಲ್ಲಿ ಎರಡು ಪ್ರಯಾಣಿಕ ರೈಲುಗಳು ಮುಖಾಮುಖಿ ಡಿಕ್ಕಿಯಾಗಿ 13 ಮಂದಿ ಗಾಯಗೊಂಡಿದ್ದರು. 2019ರ ಫೆಬ್ರವರಿಯಲ್ಲಿ ರೈಲು ಹಳಿ ತಪ್ಪಿ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಇದರ ಬಳಿಕ ರೈಲ್ವೆ ಸಚಿವರು ರಾಜೀನಾಮೆ ನೀಡಿದ್ದರು.

English summary
32 people died and 66 others were injured when two trains collided in southern Egypt.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X