Bangladesh: ಎರಡು ರೈಲು ಡಿಕ್ಕಿ 15 ಮಂದಿ ಸಾವು! ಹಲವರಿಗೆ ಗಂಭೀರ ಗಾಯ
ಬಾಂಗ್ಲಾದೇಶದಲ್ಲಿ ಸೋಮವಾರ ಎರಡು ರೈಲುಗಳು ಡಿಕ್ಕಿ ಹೊಡೆದು 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್‌ನಲ್ಲಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಇನ್ನೂ ಎರಡು ರೈಲುಗಳ ಡಿಕ್ಕಿಯಿಂದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ಎರಡು ರೈಲುಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದಿದ್ದು, ಈಗಾಗಲೇ 15 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತದೆೆ. ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಾವು 15 ಶವಗಳನ್ನು ಹೊರತೆಗೆದಿದ್ದೇವೆ, ಅನೇಕರು ಗಾಯಗೊಂಡಿದ್ದಾರೆ, ಸಂಜೆ 4:00 ಗಂಟೆಗೆ (1000 GMT) ಸಂಭವಿಸಿದ ಈ ಅಪಘಾತವು ಒಂದು ರೈಲು ಇನ್ನೊಂದು ಮಾರ್ಗವನ್ನು ಪ್ರವೇಶಿಸಿದಾಗ ಸಂಭವಿಸಿದೆ ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್ಪಿಗೆ ತಿಳಿಸಿದ್ದಾರೆ.
ಇನ್ನೂ ಹಾನಿಗೊಳಗಾದ ಕೋಚ್‌ಗಳ ಕೆಳಗೆ ಗಾಯಗೊಂಡ ವ್ಯಕ್ತಿಗಳು ಇದ್ದು ಹಲವಾರು ಜನರು ರೈಲಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲದೇ ಬಾಂಗ್ಲಾದೇಶದಲ್ಲಿ ಸಾಮಾನ್ಯವಾಗಿ ಕಳಪೆ ಸಿಗ್ನಲಿಂಗ್, ನಿರ್ಲಕ್ಷ್ಯ, ಹಳೆಯ ಟ್ರ್ಯಾಕ್‌ಗಳು ಅಥವಾ ಇತರ ಕಡಿಮೆ ಮೂಲಸೌಕರ್ಯಗಳಿಂದ ಉಂಟಾಗುತ್ತದೆ.












Click it and Unblock the Notifications