ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೆ ಉದ್ಯೋಗ ಕಡಿತದ ಘೋಷಣೆ ಮಾಡಿದ ಊಬರ್

|
Google Oneindia Kannada News

ಸ್ಯಾನ್ ಫ್ರಾನ್ಸಿಸ್ಕೋ, ಮೇ 19 : ಊಬರ್ ಎರಡನೇ ಹಂತದ ಉದ್ಯೋಗ ಕಡಿತದ ಘೋಷಣೆ ಮಾಡಿದೆ. 3000ಕ್ಕೂ ಅಧಿಕ ಜನರು ಕೆಲಸ ಕಳೆದುಕೊಳ್ಳಲಿದ್ದಾರೆ. ಮೊದಲ ಹಂತದಲ್ಲಿ 3,700 ಉದ್ಯೋಗಿಗಳನ್ನು ತೆಗೆದು ಹಾಕಲು ತೀರ್ಮಾನಿಸಲಾಗಿತ್ತು.

ಉಬರ್ಕಂಪನಿ ಸಿಇಓ ದಾರಾ ಖೊಸ್ರೋಶಾಹಿ 2ನೇ ಹಂತದ ಉದ್ಯೋಗ ಕಡಿತದ ಘೋಷಣೆಯನ್ನು ಮಾಡಿದ್ದಾರೆ. ವಿಶ್ವದ ವಿವಿಧ ದೇಶಗಳಲ್ಲಿ ಇರುವ 45 ಕಚೇರಿಗಳನ್ನು ಮುಚ್ಚಲಾಗುತ್ತದೆ ಎಂದು ಹೇಳಿದ್ದಾರೆ.

ಲಾಕ್ ಡೌನ್; 1,100 ಉದ್ಯೋಗ ಕಡಿತದ ಘೋಷಣೆ ಮಾಡಿದ ಸ್ವಿಗ್ಗಿ ಲಾಕ್ ಡೌನ್; 1,100 ಉದ್ಯೋಗ ಕಡಿತದ ಘೋಷಣೆ ಮಾಡಿದ ಸ್ವಿಗ್ಗಿ

ಕಳೆದ ವಾರ ವಿವಿಧ ಹಂತದ 3,700 ಉದ್ಯೋಗ ಕಡಿತ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿತ್ತು. ಈ ವಾರ ಪುನಃ 3000ಕ್ಕೂ ಅಧಿಕ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಈ ಮೂಲಕ ಆರ್ಥಿಕ ಹೊರೆ ತಗ್ಗಿಸುವ ಕಾರ್ಯ ಆರಂಭಿಸಲಾಗಿದೆ.

ಉದ್ಯೋಗ, ವೇತನ ಕಡಿತದ ಘೋಷಣೆ ಮಾಡಿದ ಝೊಮ್ಯಾಟೋ ಉದ್ಯೋಗ, ವೇತನ ಕಡಿತದ ಘೋಷಣೆ ಮಾಡಿದ ಝೊಮ್ಯಾಟೋ

Uber Announces Second Phase Of Job Cut

"ನಾವು ಕಠಿಣವಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಿದ್ದೇವೆ. ಉದ್ಯೋಗಿಗಳ ಸಂಖ್ಯೆಯಲ್ಲಿ ಸುಮಾರು 3000 ಕಡಿತ ಮಾಡಲಿದ್ದೇವೆ" ಎಂದು ದಾರಾ ಖೊಸ್ರೋಶಾಹಿ ಉದ್ಯೋಗಿಗಳಿಗೆ ಬರೆದಿರುವ ಪತ್ರದಲ್ಲಿ ವಿವರಣೆ ನೀಡಿದ್ದಾರೆ.

ಕೆಲಸದಿಂದ ಕಿತ್ತು ಹಾಕಿದ್ದು, ವೇತನ ಕಡಿತ; 2 ಸಾವಿರ ದೂರು ಕೆಲಸದಿಂದ ಕಿತ್ತು ಹಾಕಿದ್ದು, ವೇತನ ಕಡಿತ; 2 ಸಾವಿರ ದೂರು

ಲಾಕ್ ಡೌನ್ ಪರಿಣಾಮದಿಂದ ನಷ್ಟ ಉಂಟಾಗುತ್ತಿದೆ. ಮುಂದಿನ 12 ತಿಂಗಳುಗಳ ಕಾಲ ಉದ್ಯೋಗ ಕಡಿತ ಪ್ರಕ್ರಿಯೆ ಜಾರಿಯಲ್ಲಿ ಇರುತ್ತದೆ. ವಿಶ್ವದ ವಿವಿಧ ದೇಶದಲ್ಲಿರುವ 45 ಕಚೇರಿಗಳನ್ನು ಮುಚ್ಚಲಾಗುತ್ತಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

2020ನೇ ವರ್ಷವನ್ನು ಹೊಸ ನಿರೀಕ್ಷೆಯೊಂದಿಗೆ ಆರಂಭಿಸಿದ್ದೆವು. ಆದರೆ, ಕೊರೊನಾದ ಹೊಡೆತದಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ನಮ್ಮ ಉದ್ಯಮ ಇನ್ನೂ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ. ಆದರೆ, ಒಂದೇ ರಾತ್ರಿಯಲ್ಲಿ ಇದು ಸಾಧ್ಯವಾಗುವುದಿಲ್ಲ ಎಂದು ವಿವರಣೆ ನೀಡಿದ್ದಾರೆ.

ಈ ವರ್ಷ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನು ಪರಿಚಯಿಸುವ ಘೋಷಣೆಯನ್ನೂ ಊಬರ್ ಮಾಡಿತ್ತು. ಆದರೆ, ಈಗ ಆ ತೀರ್ಮಾನದಿಂದಲೂ ಹಿಂದೆ ಸರಿಯಲಾಗಿದೆ.

English summary
In a Letter Uber CEO Dara Khosrowshahi announced 2nd phase of job cut and close of 45 offices globally. Nearly 3000 employees lay off in second round. 1st phase 3,700 employees fired by Uber.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X