ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ ಭರ್ಜರಿ ದಂಡ

|
Google Oneindia Kannada News

ಲಂಡನ್, ಜುಲೈ.14: ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಇಂಗ್ಲೆಂಡ್ ನಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೊಳಿಸಲಾಗಿದೆ. ಜುಲೈ.24ರಿಂದ ಅಂಗಡಿಗಳಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ.

ಜುಲೈ.15ರಿಂದಲೇ ಸಾರ್ವಜನಿಕ ಸಾರಿಗೆಯಲ್ಲಿ ಸಂಚರಿಸುವವರು ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸುವಂತೆ ಇಂಗ್ಲೆಂಡ್ ಸರ್ಕಾರವು ಆದೇಶಿಸಿರುವ ಬಗ್ಗೆ ಸ್ಪುಟ್ನಿಕ್ ವರದಿ ಮಾಡಿದೆ. ಕೊರೊನಾವೈರಸ್ ಸೋಂಕಿನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಹಾಗೂ ಸುತ್ತಮುತ್ತಲಿನ ಜನರನ್ನು ರಕ್ಷಿಸುವಲ್ಲಿ ಮಾಸ್ಕ್ ಗಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎನ್ನುವುದು ಸಾಬೀತಾಗಿದೆ.

ರಾಷ್ಟ್ರಾಧ್ಯಕ್ಷ, ಪ್ರಧಾನಿಗೂ ಅಂಟಿದ ಕೊವಿಡ್-19: ಅತಿದೊಡ್ಡ ಪಟ್ಟಿ!ರಾಷ್ಟ್ರಾಧ್ಯಕ್ಷ, ಪ್ರಧಾನಿಗೂ ಅಂಟಿದ ಕೊವಿಡ್-19: ಅತಿದೊಡ್ಡ ಪಟ್ಟಿ!

ದೇಶದಲ್ಲಿರುವ ಪ್ರತಿಯೊಬ್ಬ ಪ್ರಜೆಗಳು ಕೊರಾನಾವೈರಸ್ ನಿಂದ ಪಾರಾಗುವುದಕ್ಕೆ ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಗಳನ್ನು ಧರಿಸಬೇಕು. ಈ ಉದ್ದೇಶದಿಂದಲೇ ಜುಲೈ.24ರಿಂದಲೇ ಮಾಸ್ಕ್ ಧರಿಸುವುದನ್ನು ದೇಶಾದ್ಯಂತ ಕಡ್ಡಾಯಗೊಳಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ತಿಳಿಸಿದ್ದಾರೆ.

UK Government Order To mandatory Face Covering In Shops From July 24

ಸರ್ಕಾರದ ನಿಯಮ ಉಲ್ಲಂಘಿಸಿದರೆ ದಂಡ:

ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಸರ್ಕಾರವು ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮವನ್ನು ಜಾರಿಗೊಳಿಸುತ್ತಿದೆ. ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ. ನಿಯಮ ಮೀರಿದವರಿಗೆ 125 ಡಾಲರ್ ದಂಡ ವಿಧಿಸುವುದಾಗಿ ತಿಳಿಸಿದೆ. ಇಂಗ್ಲೆಂಡ್ ನಲ್ಲಿ ಮಂಗಳವಾರದ ಅಂಕಿ-ಅಂಶಗಳ ಪ್ರಕಾರ 2,90,133ಕ್ಕೂ ಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದಾಖಲಾಗಿದ್ದು, ಮಹಾಮಾರಿಗೆ ಇದುವರೆಗೂ 44,830ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದಾರೆ.

English summary
UK Government Order To mandatory Face Covering In Shops From July 24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X