ಖೆರ್ಸನ್ ನಗರ ರಷ್ಯಾ ಕೈವಶವಾಗಿದೆ ಎಂದು ಒಪ್ಪಿಕೊಂಡ ಉಕ್ರೇನ್

ಉಕ್ರೇನ್ ಮೇಲೆ ರಷ್ಯಾ ದಾಳಿ ಎಂಟನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ದಾಳಿಗೆ ಉಕ್ರೇನ್ ನಲುಗಿ ಹೋಗಿದೆ. ಉಕ್ರೇನ್ ಸುತ್ತುವರೆದು ದಾಳಿ ಮಾಡುತ್ತಿರುವ ರಷ್ಯಾ, ಒಂದೊಂದೇ ನಗರಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಬಂದರು ನಗರ ಖಾರ್ಕಿವ್‌ವನ್ನು ಈಗಾಗಲೇ ರಷ್ಯಾ ವಶಕ್ಕೆ ಬಂದಾಗಿದೆ. ಖೆರ್ಸನ್ ನಗರವನ್ನು ರಷ್ಯಾ ವಶವಾಗಿರುವ ಬಗ್ಗೆ ರಷ್ಯಾ ಹೇಳಿಕೊಂಡಿತ್ತು. ಆದರೆ ಉಕ್ರೇನ್ ಈ ಬಗ್ಗೆ ಸ್ಪಷ್ಟಪಡಿಸಿರಲಿಲ್ಲ. ಆದರೀಗ ಉಕ್ರೇನ್ ಸದ್ಯ ಖೆರ್ಸನ್ ನಗರವನ್ನು ರಷ್ಯಾ ವಶ ಪಡೆದುಕೊಂಡಿದೆ ಎಂದು ಒಪ್ಪಿಕೊಂಡಿದೆ.

ದಿನ ಕಳೆದಂತೆ ರಷ್ಯಾವು ಉಕ್ರೇನ್‌ನ ಭಾಗವನ್ನು ವಶಪಡಿಸಿಕೊಳ್ಳುತ್ತಾ ಹೋಗುತ್ತಿದೆ. ಉಕ್ರೇನ್​​ನ ದಕ್ಷಿಣ ಭಾಗದಲ್ಲಿರುವ ಖೆರ್ಸನ್​ ನಗರವನ್ನು ತನ್ನ ವಶಕ್ಕೆ ತೆಗೆದುಕೊಂಡಿರುವುದಾಗಿ ರಷ್ಯಾ ಸೇನೆ ಬುಧವಾರ ಹೇಳಿಕೊಂಡಿತ್ತು. ಆದರೆ ಇದನ್ನು ಉಕ್ರೇನ್ ಇದನ್ನು ಒಪ್ಪಿಕೊಂಡಿರಲಿಲ್ಲ. ಸದ್ಯ ಖೆರ್ಸನ್ ನಗರ ರಷ್ಯಾ ಕೈವಶವಾಗಿದೆ ಎಂದು ಉಕ್ರೇನ್ ಘೋಷಣೆ ಮಾಡಿದೆ.

ರಷ್ಯಾದ ಸೈನ್ಯ ಮತ್ತು ಸ್ಥಳೀಯ ಅಧಿಕಾರಿಗಳ ನಡುವೆ ಸಂಪರ್ಕ ಏರ್ಪಡಿಸುವುದು, ಜನರನ್ನು ರಕ್ಷಿಸುವುದು ಮತ್ತು ಸಾರ್ವಜನಿಕ ಸೇವೆಗಳನ್ನು ಪುನಾರಂಭಿಸುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Ukraine Acknowledges That Kherson Is Russia’s Possession

ರಷ್ಯಾ ಸಶಸ್ತ್ರ ಪಡೆಗಳು ಖೆರ್ಸನ್ ಪ್ರದೇಶವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ರಷ್ಯಾ ರಕ್ಷಣಾ ಸಚಿವಾಲಯದ ವಕ್ತಾರ ಇಗೊರ್ ಕೊನಾಶೆಂಕೋವ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದನ್ನು ಉಕ್ರೇನ್ ಸೇನೆ ಇಂದು ಖಚಿತಪಡಿಸಿದೆ.

ಖೆರ್ಸನ್ ನಗರವನ್ನು ವಶಕ್ಕೆ ತೆಗೆದುಕೊಂಡರೂ, ಸಾರ್ವಜನಿಕ ಸೇವೆಗಳು ಮತ್ತು ಸಾರಿಗೆ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಇಗೊರ್ ಕೊನಾಶೆಂಕೋವ್ ಸ್ಪಷ್ಟನೆ ನೀಡಿದ್ದು, ಖೆರ್ಸನ್​ ನಗರದಲ್ಲಿ ಆಹಾರ ಮತ್ತು ಅಗತ್ಯವಸ್ತುಗಳ ಕೊರತೆ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

Ukraine Acknowledges That Kherson Is Russia’s Possession

ಉಕ್ರೇನ್‌ ನಗರವನ್ನು ಕೈವಶ ಮಾಡಲೇಬೇಕೆಂದು ಹಠಕ್ಕೆ ಬಿದ್ದಿರುವ ರಷ್ಯಾ ಈಗ ಖೆರ್ಸನ್‌ ನಗರವನ್ನು ವಶಕ್ಕೆ ಪಡೆದಿದೆ. ನಗರವನ್ನು ವಶ ಪಡಿಸಿಕೊಳ್ಳಲು ಈಗ ಸರ್ಕಾರಿ ಕಟ್ಟಡದ ಮೇಲೆ ಭಾರೀ ಪ್ರಮಾಣದಲ್ಲಿ ದಾಳಿ ನಡೆಸುತ್ತಿದೆ. ಹೆರಿಗೆ ಆಸ್ಪತ್ರೆ, ಕೀವ್ ಸೇನಾ ಅಕಾಡಮಿ, ಪೊಲೀಸ್ ಹೆಡ್‍ಕ್ವಾಟರ್ಸ್ ಸೇರಿ ಉಕ್ರೇನ್‍ನ ಮೇಲೆ ರಷ್ಯಾ ಏಕಕಾಲದಲ್ಲಿ ಮೂರು ಕಡೆ ದಾಳಿ ಮಾಡಿದೆ. ದಾಳಿಯಲ್ಲಿ 21 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಉಕ್ರೇನಿನ ಮೇಲೆ ರಷ್ಯಾದ ಆಕ್ರಮಣ ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ದಾಳಿಗೆ ಉಕ್ರೇನಿನ ಪ್ರಮುಖ ರಾಜ್ಯಗಳಾದ ಕೀವ್ ಮತ್ತು ಖಾರ್ಕಿವ್ ನಲುಗಿ ಹೋಗಿವೆ.

ಇಂದು ರಷ್ಯಾ ಏಕಕಾಲದಲ್ಲಿ 3 ಕಡೆ ವೈಮಾನಿಕ ದಾಳಿ ನಡೆಸಿದೆ. ಕೀವ್, ಖಾರ್ಕಿವ್, ಖೆರ್ಸನ್‍ನಲ್ಲಿ ರಾಕೆಟ್, ಕ್ಷಿಪಣಿಗಳ ದಾಳಿ ನಡೆಸಿದೆ. ಏರ್‌ಪೋರ್ಟ್, ಝಿಟೋಮಿರ್ ಹೆರಿಗೆ ಆಸ್ಪತ್ರೆ, ಮಿಲಿಟರಿ ಅಕಾಡಮಿ, ಪೊಲೀಸ್ ಹೆಡ್‍ಕ್ವಾಟರ್ಸ್‍ಗಳ ಮೇಲೆ ದಾಳಿ ನಡೆಸಿದೆ. ದಾಳಿ ವೇಳೆ 21ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 112 ಜನರು ಗಾಯಗೊಂಡಿದ್ದಾರೆ. ಝಿಟೋಮಿರ್ ಹೆರಿಗೆ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 21 ಜನರಿಗೆ ಗಂಭೀರ ಗಾಯಗಳಾಗಿವೆ.

ಖೇರ್ಸನ್ ಏರ್‌ಪೋರ್ಟ್‍ನಲ್ಲಿ ಕ್ಷಿಪಣಿ ದಾಳಿ ಹಾಗೂ ಕೀವ್ ಸೆಂಟ್ರಲ್ ರೇಲ್ವೆ ಸ್ಟೇಶನ್‍ನಲ್ಲಿ ಗುಂಡಿನ ದಾಳಿ ನಡೆದಿದೆ. ಅಷ್ಟೇ ಅಲ್ಲದೇ ಜಲ ಮಾರ್ಗದಲ್ಲೂ ದಾಳಿ ತೀವ್ರಗೊಳಿಸಿದ್ದು, ಕಪ್ಪು ಸಮುದ್ರದಲ್ಲಿ ಸೇನೆಯನ್ನು ಹೆಚ್ಚಳ ಮಾಡಿದೆ. ಈಗಾಗಲೇ ರಷ್ಯಾ ಪಡೆಗಳು ಉಕ್ರೇನ್‍ನ ಖೆರ್ಸನ್ ನಗರ ವಶಪಡಿಸಿಕೊಂಡಿದೆ. ನಗರದ ರೈಲ್ವೆ ನಿಲ್ದಾಣ ಮತ್ತು ಬಂದರು ವಶಕ್ಕೆ ಪಡೆದಿದೆ. ಇಡೀ ನಗರದ ಮೇಲೆ ಅಸ್ತಿತ್ವ ಸಾಧಿಸುತ್ತಿದ್ದಾರೆ. ಕೀವ್, ಚೆರ್ನಿಹಿವ್, ಒಬ್ಲಾಸ್ಟ್‍ನ ಪೈರಿಯಾಟಿನ್ ಮತ್ತು ಮೈರೋರೋಡ್ ನಗರಗಳಿಗೆ ರಷ್ಯಾ ಪಡೆಗಳು ಬಂಕರ್‌ಗೆ ತೆರಳುವಂತೆ ಜನರಿಗೆ ಸೈರನ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+