ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯರ ಸ್ಥಳಾಂತರ: ಉಕ್ರೇನ್‌ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಧನ್ಯವಾದ

|
Google Oneindia Kannada News

ನವದೆಹಲಿ, ಮಾರ್ಚ್ 07: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆಗೆ ಫೋನ್‌ ಕರೆಯ ಮೂಲಕ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉಕ್ರೇನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲು ಸಹಕಾರ ನೀಡಿದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಮಾರು 35 ನಿಮಿಷಗಳ ಕಾಲ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆಗೆ ಮಾತುಕತೆ ನಡೆಸಿದ್ದಾರೆ. ರಷ್ಯಾ ದಾಳಿಯ ಬಳಿಕ ಉಕ್ರೇನ್‌ನ ಸ್ಥಿತಿಯ ಬಗ್ಗೆ ಉಭಯ ದೇಶದ ನಾಯಕರುಗಳು ಮಾತುಕತೆ ನಡೆಸಿದ್ದಾರೆ ಎಂದು ವರದಿಯು ಉಲ್ಲೇಖ ಮಾಡಿದೆ.

ವಿದ್ಯಾರ್ಥಿಗಳನ್ನು ಕರೆತರಲು ರಷ್ಯಾದೊಂದಿಗಿನ ಸ್ನೇಹ ಬಳಸಿಕೊಳ್ಳಿ, ಮೋದಿಗೆ ಸಲಹೆವಿದ್ಯಾರ್ಥಿಗಳನ್ನು ಕರೆತರಲು ರಷ್ಯಾದೊಂದಿಗಿನ ಸ್ನೇಹ ಬಳಸಿಕೊಳ್ಳಿ, ಮೋದಿಗೆ ಸಲಹೆ

ಇನ್ನು ಈ ಸಂದರ್ಭದಲ್ಲಿ ಉಕ್ರೇನ್‌ನ ಈಶಾನ್ಯ ಭಾಗದ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಸ್ಥಳಾಂತರ ಮಾಡಲು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಸಹಕಾರವನ್ನು ಕೋರಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ. ಯುದ್ಧ ಪೀಡಿತ ರಾಷ್ಟ್ರ ಉಕ್ರೇನ್‌ನ ಸುಮಿ ನಗರದಲ್ಲಿ ಸುಮಾರು 700 ಭಾರತೀಯರು ಸಿಲುಕಿದ್ದಾರೆ ಎಂದು ವರದಿ ಹೇಳಿದೆ.

Ukraine-Russia War: PM Modi Thanks Ukraine Prezident for Safe Evacuation of Indians

ಉಕ್ರೇನ್‌ನ ಬೇರೆ ಪ್ರದೇಶಗಳಿಂದ ಭಾರತೀಯರು ಉಕ್ರೇನ್‌ನ ಗಡಿ ಭಾಗಕ್ಕೆ ತಲುಪಿದ ಬಳಿಕ ಅಲ್ಲಿಂದ ಭಾರತಕ್ಕೆ ಭಾರತೀಯರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಆದರೆ ಈ ನಡುವೆ ಉಕ್ರೇನ್‌ನ ಸುಮಿ ನಗರದಲ್ಲಿ 700 ಭಾರತೀಯರು ಸಿಲುಕಿದ್ದು ಸ್ಥಳಾಂತರಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಉಕ್ರೇನ್‌ ಸರ್ಕಾರದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಕಾರಿ ಕೋರಿದ್ದಾರೆ.

"ಉಕ್ರೇನ್‌ನಲ್ಲಿ ನಮ್ಮವರು ಸಿಲುಕಿರುವಾಗ ಪ್ರಚಾರದಲ್ಲೇ ಮೋದಿ ಬ್ಯುಸಿ"

ಶಾಂತಿ ಮಾತುಕತೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

"ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೋನ್‌ ಮೂಲಕ ಮಾತುಕತೆ ನಡೆಸಿದ್ದಾರೆ. ಸುಮಾರು 35 ನಿಮಿಷಗಳ ಕಾಲ ಉಭಯ ದೇಶದ ನಾಯಕರುಗಳು ಮಾತನಾಡಿದ್ದಾರೆ. ಉಕ್ರೇನ್‌ನಲ್ಲಿ ಸ್ಥಿತಿಯ ಬಗ್ಗೆ ನರೇಂದ್ರ ಮೋದಿ ಹಾಗೂ ವೊಲೊಡಿಮಿರ್ ಝೆಲೆನ್ಸ್ಕಿ ಮಾತನಾಡಿದ್ದಾರೆ. ರಷ್ಯಾ ಹಾಗೂ ಉಕ್ರೇನ್‌ ನಡುವೆ ಶಾಂತಿ ಮಾತುಕತೆಯನ್ನು ಮುಂದುವರಿಸಿದ್ದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ," ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಷ್ಯಾವು ಉಕ್ರೇನ್‌ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಹಲವಾರು ರಾಷ್ಟ್ರದ ನಾಯಕರುಗಳು ಭಾರತವು ಈ ಬಗ್ಗೆ ನಿಲುವು ತಾಳುವಂತೆ ಒತ್ತಾಯ ಮಾಡುತ್ತಿದ್ದಾರೆ. ಇನ್ನು ಉಕ್ರೇನ್‌ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ರಷ್ಯಾದ ಜೊತೆ ಮಾತುಕತೆ ನಡೆಸಲು ಉಕ್ರೇನ್‌ ವಿದೇಶಾಂಗ ಸಚಿವರು ಭಾರತಕ್ಕೆ ಮನವಿ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ, ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಕೂಡಾ ಮನವಿ ಮಾಡಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಉಕ್ರೇನ್‌ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಮನವಿ ಮಾಡುವಂತೆ ತಿಳಿಸಿದ್ದಾರೆ.

ರಷ್ಯಾ ಅಧ್ಯಕ್ಷರೊಂದಿಗೆ ಎರಡು ಬಾರಿ ಮಾತನಾಡಿದ ಪ್ರಧಾನಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯೂ ಕೂಡಾ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ಎರಡು ಬಾರಿ ಮಾತುಕತೆ ನಡೆಸಿದ್ದಾರೆ. ಫೆಬ್ರವರಿ 24ರಂದು ನಡೆದ ಮೊದಲ ಮಾತುಕತೆಯ ಸಂದರ್ಭದಲ್ಲಿ ಶಾಂತಿ ಮಾತುಕತೆಯನ್ನು ನಡೆಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಜೊತೆ ಮಾತನಾಡಿದ್ದಾರೆ. ಇನ್ನು ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆ ತರಲು ಮೋದಿ ರಷ್ಯಾ ಜತೆಗಿನ ಸ್ನೇಹವನ್ನು ಬಳಸಿಕೊಳ್ಳಬೇಕು ಎಂದು ಹಲವಾರು ಪೋಷಕರು ಮನವಿ ಸಲಹೆ ನೀಡಿದ್ದಾರೆ. ಈಗಾಗಲೇ ಕರ್ನಾಟಕದ ಓರ್ವ ವಿದ್ಯಾರ್ಥಿ ನವೀನ ಉಕ್ರೇನ್‌ನಲ್ಲಿ ಸಾವನ್ನಪ್ಪಿದ್ದಾರೆ. (ಒನ್‌ಇಂಡಿಯಾ ಸುದ್ದಿ)

English summary
Ukraine-Russia War: Ukraine-Russia War: PM Modi Thanks Ukraine Prezident for Safe Evacuation of Indians.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X