ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1941ರಲ್ಲಿ ನಾಜಿಗಳಿಂದ ಇದೇ ರೀತಿ ದಾಳಿ ನಡೆದಿತ್ತು: ಉಕ್ರೇನ್

|
Google Oneindia Kannada News

ಕೀವ್, ಫೆಬ್ರವರಿ 25: ನಾಜಿಗಳು 1941ರಲ್ಲಿ ಇದೇ ಮಾದರಿಯ ದಾಳಿ ನಡೆಸಿದ್ದರು ಎಂದು ಉಕ್ರೇನ್ ಹೇಳಿದೆ.

ಈ ಕುರಿತು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಟ್ವೀಟ್ ಮಾಡಿದ್ದು, ಕೀವ್ ಮೇಲೆ ರಷ್ಯಾವು ರಾಕೆಟ್ ದಾಳಿ ನಡೆಸುತ್ತಿದೆ, ಕಳೆದ ಬಾರಿ 1941ರಲ್ಲಿ ನಾಜಿ ಜರ್ಮನಿಯಿಂದ ದಾಳಿಗೊಳಗಾದಾಗ ನಮ್ಮ ರಾಜಧಾನಿ ಈ ರೀತಿಯ ಭಯಾನಕತೆಯನ್ನು ಅನುಭವಿಸಿತ್ತು ಎಂದು ಹೇಳಿದ್ದಾರೆ.

ಉಕ್ರೇನ್ ಮೇಲೆ ದಾಳಿ ಬಳಿಕ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದೇನು?ಉಕ್ರೇನ್ ಮೇಲೆ ದಾಳಿ ಬಳಿಕ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದೇನು?

ರಷ್ಯಾ ತನ್ನ ದೇಶದ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾಸಿಬ್ಬಂದಿ ಮೃತಪಟ್ಟಿದ್ದಾರೆ.

Ukrainian Minister Says Russian Invasion Is Like 1941 Nazi Germany Attack

ನಾಜಿ ದುಷ್ಟರನ್ನು ಉಕ್ರೇನ್ ಸೋಲಿಸಿತ್ತು, ಈಗ ರಷ್ಯಾವನ್ನೂ ನಾವು ಸೋಲಿಸುತ್ತೇವೆ, ಪುಟಿನ್ ಇದನ್ನು ನಿಲ್ಲಿಸಬೇಕು, ವಿಶ್ವದಿಂದ ರಷ್ಯಾವನ್ನು ಪ್ರತ್ಯೇಕಗೊಳಿಸಬೇಕು, ಅದರೊಂದಿಗಿನ ಎಲ್ಲಾ ಸಂಬಂಧಗಳನ್ನು ಮುರಿದುಕೊಳ್ಳಬೇಕಿದೆ, ಅವರನ್ನು ಹೊರಹಾಕಬೇಕು ಎಂದು ಹೇಳಿದ್ದಾರೆ.

ಉಕ್ರೇನ್‌ ಮೇಲೆ ದಾಳಿ ಮುಂದುವರೆಸಿರುವ ರಷ್ಯಾ ಸೇನೆ ಇದೀಗ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರವನ್ನು ವಶಪಡಿಸಿಕೊಂಡಿವೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸ್ವತಃ ಉಕ್ರೇನ್ ಅಧ್ಯಕ್ಷೀಯ ಕಚೇರಿಯ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ಮಾಹಿತಿ ನೀಡಿದ್ದು, 'ರಷ್ಯನ್ನರ ಸಂಪೂರ್ಣ ಅರ್ಥಹೀನ ದಾಳಿಯ ನಂತರ ಚೆರ್ನೋಬಿಲ್ ಪರಮಾಣು ವಿದ್ಯುತ್ ಸ್ಥಾವರವು ಸುರಕ್ಷಿತವಾಗಿದೆ ಎಂದು ಹೇಳುವುದು ಅಸಾಧ್ಯ'ಎಂದು ಅವರು ಹೇಳಿದ್ದಾರೆ.

'ಇದು ಯುರೋಪಿಗೆ ಸದ್ಯ ಅತ್ಯಂತ ಗಂಭೀರ ಆತಂಕವಾಗಿದೆ. ಅಣುಸ್ಥಾವರವನ್ನು ರಷ್ಯಾ ಸೇನೆ ವಶಕ್ಕೆ ಪಡೆದಿದ್ದು, ಇದು ಮುಂದೆ ಇನ್ನೂ ಕಠಿಣ ಪರಿಸ್ಥಿತಿಗಳಿಗೆ ನಾಂದಿ ಹಾಡಬಹುದು ಎಂದು ಜಾಗತಿಕ ಸಮುದಾಯಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಷ್ಯಾ ತನ್ನ ದೇಶದ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹೇಳಿದ್ದಾರೆ.

ಈ ಬಗ್ಗೆ ಅವರು ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಒಡೆಸಾ ಪ್ರದೇಶದ ಜ್ಮಿನಿ ದ್ವೀಪದಲ್ಲಿರುವ ಎಲ್ಲ ಭದ್ರತಾ ಪಡೆಯ ಸಿಬ್ಬಂದಿಯನ್ನು ರಷ್ಯಾ ಹೊಡೆದುರುಳಿಸಿದೆ. ಅಲ್ಲದೇ ಆ ಪ್ರದೇಶವನ್ನು ರಷ್ಯಾ ವಶಕ್ಕೆ ಪಡೆದಿದೆ. ಯುದ್ಧದಲ್ಲಿ ಮೃತಪಟ್ಟ ಸೈನಿಕರನ್ನು ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹುತಾತ್ಮರು ಎಂದು ಕರೆದಿದ್ದಾರೆ.

ಇನ್ನು ತನ್ನ ದೇಶದ ಮೇಲೆ ದಾಳಿ ಮಾಡಿದ್ದ ರಷ್ಯಾ ವಿರುದ್ಧ ಏಕಾಂಗಿಯಾಗಿ ಹೋರಾಡಲಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹೇಳಿದ್ದಾರೆ. ಇತರೆ ರಾಷ್ಟ್ರಗಳು ರಷ್ಯಾ ಕ್ರಮವನ್ನು ಖಂಡಿಸಿದರೂ ನೇರವಾಗಿ ಯುದ್ಧದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ವೊಲೊಡಿಮಿರ್ ಜೆಲೆನ್​ಸ್ಕಿ ತನ್ನ ಶತ್ರು ರಾಷ್ಟ್ರವನ್ನು ಒಂಟಿಯಾಗಿ ಎದುರಿಸಲಿದೆ ಎಂದಿದ್ದಾರೆ.

Recommended Video

ವಿಕೆಟ್ ಪಡೆದಿದ್ದಕ್ಕೆ ಪುಷ್ಪ ಸ್ಟೈಲ್ ಮಾಡಿ ಸಂಭ್ರಮಿಸಿದ ಜಡೇಜಾ‌ ವಿಡಿಯೋ ಫುಲ್ ವೈರಲ್ | Oneindia Kannada

ಉಕ್ರೇನ್​ ಮೇಲೆ ರಷ್ಯಾ ದಾಳಿ ಬಗ್ಗೆ ಭಾರತದ ಜೊತೆ ಮಾತುಕತೆ ನಡೆಸಲಾಗುವುದು, ಈ ಕುರಿತ ವಿಚಾರ ಇನ್ನೂ ಬಗೆಹರಿದಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್​ ತಿಳಿಸಿದ್ದಾರೆ.

English summary
Ukrainian Foreign Minister Dmytro Kuleba compared the "horrific" Russian invasion to the 1941 attack by Germany on Ukraine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X