ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಸಂಸ್ಥೆಗೆ ಆರ್ಥಿಕ ಮುಗ್ಗಟ್ಟು: ಹಣ ಕೊಡಲು ಸದಸ್ಯ ದೇಶಗಳಿಗೆ ಮನವಿ

|
Google Oneindia Kannada News

ವಾಷಿಂಗ್ಟನ್ ಡಿ.ಸಿ. ಜುಲೈ 28: ವಿಶ್ವಸಂಸ್ಥೆ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು, ಹಣದ ಬಾಕಿ ನೀಡುವಂತೆ ತನ್ನ ಸದಸ್ಯ ರಾಷ್ಟ್ರಗಳಿಗೆ ಮನವಿ ಮಾಡಿದೆ.

ಸದಸ್ಯ ರಾಷ್ಟ್ರಗಳಿಂದ ವಿಳಂಬದ ಪಾವತಿಯಿಂದಾಗಿ ವಿಶ್ವಸಂಸ್ಥೆಯು ಹಣಕಾಸಿನ ಬಿಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿದೆ ಎಂದಿರುವ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟರೆಸ್, ಸದಸ್ಯ ರಾಷ್ಟ್ರಗಳಿಗೆ ಪತ್ರ ಬರೆದಿದ್ದಾರೆ.

ವರ್ಷದ ಆರಂಭದಲ್ಲಿ ನಮ್ಮ ಹಣಕಾಸಿನ ಹರಿವು ಎಂದಿಗೂ ಇಷ್ಟು ಕಡಿಮೆಯಾಗಿರಲಿಲ್ಲ. ಆದರೆ, ಈಗಿನ ಟ್ರೆಂಡ್ ವಿಸ್ತರಿಸುತ್ತಿರುವುದು ಕಳವಳಕಾರಿಯಾಗಿದೆ. ಶೀಘ್ರದಲ್ಲಿಯೇ ನಾವು ನಗದು ರಹಿತರಾಗಲಿದ್ದೇವೆ. ಸಂಪೂರ್ಣ ಖಜಾನೆ ಖಾಲಿಯಾಗಲಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

united nations out of money, urges members to pay up

ವಿಶ್ವಸಂಸ್ಥೆಯ ಖರ್ಚುವೆಚ್ಚಗಳನ್ನು ಕಡಿತಗೊಳಿಸಲು ಮತ್ತು ವಿಶ್ವಸಂಸ್ಥೆಯ ಆರ್ಥಿಕ ಸ್ಥಿರತೆಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಅಮೆರಿಕವು ಪ್ಯಾಲೆಸ್ಟೀನ್ ನಿರಾಶ್ರಿತರಿಗಾಗಿ ನೀಡುತ್ತಿದ್ದ ಆರ್ಥಿಕ ನೆರವಿನ ಪ್ರಮಾಣದಲ್ಲಿ ಕಡಿತಗೊಳಿಸಿತ್ತು.

English summary
The United Nations is reeling under financial crisis and also appealing to its members to pay.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X