Breaking: ನ್ಯೂಯಾರ್ಕ್‌ನಲ್ಲಿ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ
ನ್ಯೂಯಾರ್ಕ್, ಆಗಸ್ಟ್ 12: ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉಪನ್ಯಾಸ ನೀಡಲು ತೆರಳಿದ ವೇಳೆ ಲೇಖಕ ಸಲ್ಮಾನ್ ರಶ್ದಿ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಲೇಖಕರು ಈ ಹಿಂದೆ ಬರೆದಿರುವ ಬರಹಗಳಿಂದಾಗಿ ಕೊಲೆ ಬೆದರಿಕೆಗಳನ್ನು ಎದುರಿಸಿದ್ದು, ಶುಕ್ರವಾರ ನಡೆದ ದಾಳಿಯ ಉದ್ದೇಶವೇನು? ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಚೌಟೌಕ್ವಾ ಇನ್ಸ್ಟಿಟ್ಯೂಷನ್ನಲ್ಲಿ ವೇದಿಕೆಯ ಮೇಲೆ ದಾಳಿ ನಡೆಸಲಾಗಿದೆ.
ದಾಳಿಕೋರನು ಲೇಖಕ ಸಲ್ಮಾನ್ ರಶ್ದಿಗೆ ಬಲವಾಗಿ ಗುದ್ದಿದ್ದು, ಚಾಕುವಿನಿಂದ ಇರಿಯಲು ಯತ್ನಿಸಿದನು. ಈ ವೇಳೆ ಅವರು ನೆಲಕ್ಕೆ ಉರುಳಿ ಬಿದ್ದರು, ತಕ್ಷಣ ಅಲರ್ಟ್ ಆದ ಭದ್ರತಾ ಸಿಬ್ಬಂದಿಯು ದಾಳಿಕೋರನನ್ನು ವಶಕ್ಕೆ ಪಡೆದುಕೊಂಡರು ಎಂದು ಗೊತ್ತಾಗಿದೆ.

ಸಲ್ಮಾನ್ ರಶ್ದಿ ಏರ್‌ಲಿಫ್ಟ್: "ಸಲ್ಮಾನ್ ರಶ್ದಿ ಜೀವಂತವಾಗಿದ್ದು, ಅವರನ್ನು ಸುರಕ್ಷಿತವಾಗಿ ಏರ್‌ಲಿಫ್ಟ್ ಮೂಲಕ ಸ್ಥಳಾಂತರಿಸಲಾಗಿದೆ. ಈ ಕಾರ್ಯಕ್ರಮ ಆಯೋಜಕರ ಮೇಲೆಯೂ ದಾಳಿ ನಡೆಸಲಾಗಿದೆ; ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ," ೆಂದು ನ್ಯೂಯಾರ್ಕ್ ಗವರ್ನರ್ ಕ್ಯಾಥಿ ಹೊಚುಲ್ ಹೇಳಿದ್ದಾರೆ.
ಜೀವ ಬೆದರಿಕೆ ಎದುರಿಸಿದ್ದ ಸಲ್ಮಾನ್ ರಶ್ದಿ: 75 ವರ್ಷದ ಸಲ್ಮಾನ್ ರಶ್ದಿ ತಮ್ಮ ಬರಹಕ್ಕಾಗಿ ಹಲವು ಬಾರಿ ಜೀವ ಬೆದರಿಕೆಗಳನ್ನು ಎದುರಿಸಿದ್ದಾರೆ. ವಿಶೇಷವಾಗಿ 1980ರ ದಶಕದ ಉತ್ತರಾರ್ಧದಲ್ಲಿ ಅವರ 'ದಿ ಸೈಟಾನಿಕ್ ವರ್ಸಸ್' ಪುಸ್ತಕದಿಂದಾಗಿ ಬೆದರಿಕೆಗಳನ್ನು ಎದುರಿಸಿದ್ದರು.
ಈ ಪುಸ್ತಕದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಧರ್ಮನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದನ್ನು ಇರಾನ್‌ನಲ್ಲಿ 1988 ರಿಂದ ನಿಷೇಧಿಸಲಾಗಿತ್ತು. ಇರಾನ್‌ನ ಉನ್ನತ ನಾಯಕನು ಅವರ ತಲೆಯ ಬೆಲೆಯನ್ನು ಕಟ್ಟಿದ್ದನು.
ಆದರೆ, 1998ರ ಹೊತ್ತಿಗೆ ಇರಾನ್ ಸರ್ಕಾರವು ಆ 'ಫತ್ವಾ' ಅಥವಾ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿತು. ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಆಗಿರುವ ಸಲ್ಮಾನ್ ರಶ್ದಿ ಕಳೆದ 20 ವರ್ಷಗಳಿಂದ ಯುಎಸ್‌ನಲ್ಲಿ ವಾಸಿಸುತ್ತಿದ್ದಾರೆ. ಅವರ ಮೊದಲ ಕಾದಂಬರಿ 1975ರಲ್ಲಿ ಹೊರ ಬಂದಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications