UNSC ತುರ್ತು ಸಭೆ: ಮತದಾನದಿಂದ ದೂರ ಉಳಿದ ಭಾರತ

ರಷ್ಯಾ-ಉಕ್ರೇನ್ ಸಂಘರ್ಷವು 5ನೇ ದಿನಕ್ಕೆ ಕಾಲಿಟ್ಟಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು (UNSC) ಇಂದು 193 ಸದಸ್ಯರ ಅಪರೂಪದ ತುರ್ತು ಸಾಮಾನ್ಯ ಸಭೆಯ ಅಧಿವೇಶನವನ್ನು ಕರೆದಿದೆ. ಆದರೆ ಈ ಅಧಿವೇಶನದಿಂದ ಭಾರತ ದೂರ ಸರಿದಿದೆ.

ಉಕ್ರೇನ್‌ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಖಂಡಿಸುವ ವಿಚಾರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ. ನಿರೀಕ್ಷೆಯಂತೆ ಚೀನಾ ಕೂಡಾ ರಷ್ಯಾದ ವಿರುದ್ಧ ಮತದಾನದಿಂದ ದೂರ ಉಳಿದಿದೆ. ಆದರೆ ಬೆಲಾರಸ್ ಗಡಿಯಲ್ಲಿ ಮಾತುಕತೆ ನಡೆಸುವ ಮಾಸ್ಕೋ ಮತ್ತು ಕೀವ್‌ನ ನಿರ್ಧಾರವನ್ನು ನವದೆಹಲಿ ಸ್ವಾಗತಿಸಿದೆ.

ಅಧಿವೇಶನದಲ್ಲಿ 11 ಮತಗಳ ಪರವಾಗಿ ನಿರ್ಣಯವನ್ನು ಅಂಗೀಕರಿಸಲಾಯಿತು. ಭಾರತ, ಚೀನಾ ಮತ್ತು ಯುಎಇ ಮತದಾನದಿಂದ ದೂರ ಉಳಿದವು. ರಷ್ಯಾ ನಿರ್ಣಯದ ವಿರುದ್ಧ ಮತ ಚಲಾಯಿಸಿತು. 1950 ರಿಂದ ಇದು ಸಾಮಾನ್ಯ ಸಭೆಯ 11 ನೇ ತುರ್ತು ಅಧಿವೇಶನವಾಗಿದೆ.

UNSC Emergency Meeting: India Remains From Polling

15 ರಾಷ್ಟ್ರಗಳ ಭದ್ರತಾ ಮಂಡಳಿಯು ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಕುರಿತು 193 ಸದಸ್ಯರ ಸಾಮಾನ್ಯ ಸಭೆಯ ತುರ್ತು ವಿಶೇಷ ಅಧಿವೇಶನದ ಮೇಲೆ ಮತ ಚಲಾಯಿಸಲು ಭಾನುವಾರ ಮಧ್ಯಾಹ್ನ ಸಭೆ ಸೇರಿತು. ಯುಎನ್‌ಎಸ್‌ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಭಾರತವು ಒತ್ತಾಯಿಸಿದ್ದು, ವಿವಾದಗಳನ್ನು ಇತ್ಯರ್ಥ ಮಾಡಲು ಮಾತುಕತೆಯೊಂದೇ ದಾರಿ ಎಂದಿದೆ.

ವಿಶ್ವಸಂಸ್ಥೆಯಲ್ಲಿ ಭಾರತ ಕಾಯಂ ಪ್ರತಿನಿಧಿಯಾದ ಟಿ ಎಸ್​ ತಿರುಮೂರ್ತಿ ಮಾತನಾಡಿ, ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ವಿಚಲಿತವಾಗಿದೆ. ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಉತ್ತಮ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಗೊಳಿಸಲು ಮಾತುಕತೆಯೊಂದೇ ಉತ್ತರವಾಗಿದೆ ಎಂದು ಹೇಳಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ವಿಚಾರದಲ್ಲಿ ರಾಜತಾಂತ್ರಿಕ ಮಾತುಕತೆಯ ಮಾರ್ಗವನ್ನು ಕೈಬಿಟ್ಟಿರುವುದು ವಿಷಾದದ ಸಂಗತಿಯಾಗಿದೆ. ನಾವು ರಾಜತಾಂತ್ರಿಕ ಮಾರ್ಗವನ್ನು ಆಯ್ದುಕೊಳ್ಳಬೇಕು. ಈ ಎಲ್ಲಾ ಕಾರಣಗಳಿಗಾಗಿ, ಭಾರತವು ಈ ನಿರ್ಣಯದಿಂದ ದೂರವಿರಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಉಕ್ರೇನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳಿದ್ದು, ಅವರನ್ನು ಒಳಗೊಂಡ ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್​ನಲ್ಲಿರುವ ಸುಮಾರು 16 ಸಾವಿರ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿದೆ.

ಉಕ್ರೇನ್ ವಿರುದ್ಧ ರಷ್ಯಾ ಯುದ್ಧವನ್ನು ಮುಂದುವರೆಸುತ್ತಿದ್ದು, ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪರಮಾಣು ಪಡೆಗಳಿಗೆ ಹೆಚ್ಚಿನ ಜಾಗರೂಕರಾಗಿರಲು ಆದೇಶಿಸುವ ಮೂಲಕ ಉದ್ವಿಗ್ನತೆ ಹೆಚ್ಚಿಸಿದ್ದಾರೆ.NATO ಮತ್ತು ಕಠಿಣ ಆರ್ಥಿಕ ನಿರ್ಬಂಧಗಳ ಉಲ್ಲೇಖಿಸಿ, ಪುಟಿನ್ ರಷ್ಯಾದ ಪರಮಾಣು ಶಸ್ತ್ರಾಸ್ತ್ರಗಳ ಸನ್ನದ್ಧತೆಯನ್ನು ಹೆಚ್ಚಿಸಲು ನಿರ್ದೇಶನ ನೀಡಿದ್ದಾರೆ, ಉಕ್ರೇನ್ ಆಕ್ರಮಣವು ಪರಮಾಣು ಯುದ್ಧಕ್ಕೆ ಮುಂದುವರೆಯಬಹುದು ಎಂಬ ಭಯವನ್ನು ಹೆಚ್ಚಿಸಿದೆ.

ಹೆಲಿಕಾಪ್ಟರ್‌ಗಳು ಮತ್ತು ಇತರ ವಿಮಾನಗಳನ್ನು ಹೊಡೆದುರುಳಿಸಲು ಸ್ಟಿಂಗರ್ ಕ್ಷಿಪಣಿಗಳು ಸೇರಿದಂತೆ ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಖರೀದಿಸಿ ತಲುಪಿಸುವುದಾಗಿ ಪಾಶ್ಚಿಮಾತ್ಯ ರಾಷ್ಟ್ರಗಳು ಹೇಳಿವೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಕಚೇರಿಯು ಬೆಲರೂಸಿಯನ್ ಗಡಿಯಲ್ಲಿ ಅನಿರ್ದಿಷ್ಟ ಸ್ಥಳದಲ್ಲಿ ರಷ್ಯಾದ ನಿಯೋಗದೊಂದಿಗೆ ಸಭೆಯ ಯೋಜನೆಯನ್ನು ಪ್ರಕಟಿಸಿದೆ. ಕೈವ್‌ ನಲ್ಲಿ ಸಂಘರ್ಷ ಮುಂದುವರೆದಿದ್ದು, ಇದರ ನಡುವೆ ಅನೇಕ ಬೆಳವಣಿಗೆ ನಡೆದಿವೆ. ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‌ ನಲ್ಲಿಯೂ ಕದನ ನಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+