ಸೌದಿ ರಾಜಮನೆತನದ ಸುಮಾರು 150 ಮಂದಿಗೆ ಕೊರೊನಾ ಸೋಂಕು
ಸೌದಿ ಅರೇಬಿಯಾವನ್ನು ಆಳುತ್ತಿರುವ ರಾಜಮನೆತನಕ್ಕೂ ಕೊರೊನಾ ಒಕ್ಕರಿಸಿದೆ. ರಾಜಮನೆತನದ ಸುಮಾರು 150ಕ್ಕೂ ಹೆಚ್ಚು ಮಂದಿ ಕೊರೊನಾ ವೈರಸ್‌ಗೆ ತುತ್ತಾಗಿದ್ದಾರೆ.
ಕಳೆದ ಕೆಲವು ವಾರಗಳ ಹಿಂದಷ್ಟೇ ಇವರು ಕೊರೊನಾಗೆ ತುತ್ತಾಗಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.ಸೌದಿ ರಾಜ ಫೈಜಲ್ ಬಿನ್ ಬಂದಾರ್ ಬಿನ ಅಬ್ದುಲಜೀಜ್ ಅಲ್ ಸೌದ್ ರಿಯಾಧ್‌ನ ಗವರ್ನರ್ ಆಗಿದ್ದಾರೆ.
ಅವರಿಗೆ 70 ವರ್ಷ ವಯಸ್ಸಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ನ್ಯೂಯಾರ್ಕ್ ಟೈಮ್ಸ್ ವರದಿ ಪ್ರಕಾರ ಅವರಿಗೆ ಚಿಕಿತ್ಸೆ ನೀಡುತ್ತಿರುವವರು ಸಾಕಷ್ಟು ವರ್ಷಗಳಿಂದ ಅವರ ಕುಟುಂಬದ ಜೊತೆ ಒಡನಾಟ ಹೊಂದಿದ ವೈದ್ಯರೇ ಆಗಿದ್ದಾರೆ ಎಂದು ಹೇಳಿದೆ.
ರಾಜ ಸಲ್ಮಾನ್ ಹಾಗೂ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ಐಸೋಲೇಷನ್‌ನಲ್ಲಿರಿಸಲಾಗಿದೆ.ಇಲೈಟ್ ಆಸ್ಪತ್ರೆಯಲ್ಲಿ ರಾಜ ಮನೆತನದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 500ಕ್ಕೂ ಹೆಚ್ಚು ಹಾಸಿಗೆಯ ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಎಷ್ಟು ಪ್ರಕರಣಗಳಿವೆ ಎಂದು ಇನ್ನೂ ತಿಳಿದುಬಂದಿಲ್ಲ ಆದರೆ ಹೈ ಅಲರ್ಟ್‌ನಲ್ಲಿರುವಂತೆ ಎಲ್ಲಾ ವೈದ್ಯರಿಗೂ ಸೂಚಿಸಲಾಗಿದೆ. ಎಲ್ಲಾ ದೀರ್ಘಕಾಲದ ರೋಗಿಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ. ಅಲ್ಲಿ ಸಾಕಷ್ಟು ಮಂದಿ ಸೌದಿ ರಾಜರು ಯುರೋಪ್‌ನಿಂದ ಆಗಮಿಸಿದವರಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿರುವ ಸಾಧ್ಯತೆ ಇದೆ.
ಮಾರ್ಚ್ ಮೊದಲ ವಾರದಲ್ಲೇ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾ, ಮದೀನವನ್ನು ಬಂದ್ ಮಾಡಲಾಗಿತ್ತು.ಸಾಮಾನ್ಯವಾಗಿ ಜುಲೈನಲ್ಲಿ ಹಜ್ ಯಾತ್ರೆ ನಡೆಯುತ್ತದೆ. ಕಳೆದ ವರ್ಷ ಆ ಸಂದರ್ಭದಲ್ಲಿ 2.5 ಮಿಲಿಯನ್ ಜನರು ಸೌದಿ ಅರೇಬಿಯಾಕ್ಕೆ ಬಂದಿದ್ದರು.
ಮುಂದಿನ ಕೆಲವೇ ದಿನಗಳಲ್ಲಿ ಸುಮಾರು 2 ಲಕ್ಷ ಮಂದಿಗೆ ಕೊರೊನಾ ಹರಡುವ ಸಾಧ್ಯತೆ ಇದೆ ಜಾಗೃತವಾಗಿರಲು ತಿಳಿಸಲಾಗಿದೆ. ಸೌದಿ ರಾಜಮನೆತನದಲ್ಲಿ ಸುಮಾರು 15 ಸಾವಿರ ಮಂದಿ ಸದಸ್ಯರಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications