ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.14: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ

By Mahesh
|
Google Oneindia Kannada News

ಬೆಂಗಳೂರು, ನ.14: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

2.45: ಐಪಿಎಲ್ 6 ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮುಕುಲ್ ಮುದ್ಗಲ್ ಸಲ್ಲಿಸಿರುವ ವರದಿಯಲ್ಲಿರುವ ಹೆಸರುಗಳು ಬಹಿರಂಗಗೊಂಡಿದೆ. ಐಸಿಸಿ ಅಧ್ಯಕ್ಷ ಎನ್ ಶ್ರೀನಿವಾಸನ್, ರಾಜ್ ಕುಂದ್ರಾ ಹಾಗೂ ಗುರುನಾಥ್ ಮೇಯಪ್ಪನ್ ಹೆಸರುಗಳಿವೆ [ವರದಿ ಇಲ್ಲಿ ಓದಿ]

2.30: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಜೋಧಪುರ ಕೋರ್ಟಿಗೆ ಶುಕ್ರವಾರ ಹಾಜರಾಗಿದ್ದಾರೆ. 1998 ಕೃಷ್ಣಮೃಗ ಬೇಟೆ ಹತ್ಯೆ ಆರೋಪವನ್ನು ಸಲ್ಮಾನ್ ಖಾನ್ ಎದುರಿಸುತ್ತಿದ್ದಾರೆ.

Salman Khan

12.05: ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ಮೀಸಲಾತಿ ರದ್ದುಗೊಳಿಸಿ ಬಾಂಬೆ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.

10.55: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಆಸ್ಟ್ರೇಲಿಯಾ ಪ್ರವಾಸ ಆರಂಭಗೊಂಡಿದ್ದು, ಮೆಲ್ಬೋರ್ನ್ ಕ್ರಿಕೆಟ್ ಮೈದಾನಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಟೋನಿ ಅಬಾಟ್ ರೊಂದಿಗೆ 2015 ಕ್ರಿಕೆಟ್ ವಿಶ್ವಕಪ್ ಟ್ರೋಫಿ ಜೊತೆ ಪೋಸ್ ನೀಡಲಿದ್ದಾರೆ.

Updates India, International News in Brief Nov 14

10.45: ಶಾರದಾ ಚಿಟ್ ಫಂಡ್ ಹಗರಣದ ಆರೋಪಿಯಾಗಿ ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಕುನಾಲ್ ಘೋಷ್ ಅವರು ಪ್ರೆಸಿಡೆಂಟಿ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಳೆದ ಒಂದು ವರ್ಷದಿಂದ ಕುನಾಲ್ ಜೈಲಿನಲ್ಲಿದ್ದಾರೆ.

10.30: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಶಾಂತಿವನಕ್ಕೆ ಆಗಮಿಸಿ ಪಂಡಿತ್ ನೆಹರೂ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

10.15: ದೇಶದೆಲ್ಲಡೆ ನ.14ರಂದು ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 125ನ ಜನ್ಮದಿನೋತ್ಸವ ಆಚರಿಸಲಾಗುತ್ತಿದೆ.

English summary
Top News of the today : Bollywood actor Salman Khan appears in a Jodhpur court in connection with the 1998 black buck poaching case and many news from across the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X