ನ.16: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ

ಬೆಂಗಳೂರು, ನ.16: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

12.35: ಜಾಗತಿಕ ತಾಪಮಾನ ನಿಯಂತ್ರಣ ಹಾಗೂ ಭಯೋತ್ಪಾದನೆ ಹತ್ತಿಕ್ಕುವುದು ವಿಶ್ವದ ದೊಡ್ಡ ಸಮಸ್ಯೆ : ಮೋದಿ

12.30:
ಬ್ರಿಸ್ಬೇನ್ ನ ರೋಮಾ ಸ್ಟ್ರೀಟ್ ಪಾರ್ಕ್ ಲ್ಯಾಂಡ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾಷಣ ಆರಂಭ. ಗಾಂಧಿಜೀ ಅವರ ಸಿದ್ಧಾಂತಗಳು ಇಂದಿಗೂ ಹೇಗೆ ಪ್ರಸ್ತುತ ಎಂದು ವಿವರಣೆ.

12.15: ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿ.


11.45: ಬ್ರಿಸ್ಬೇನ್ ನಲ್ಲಿ ಮೋದಿ ಆಗಮನಕ್ಕೆ ಸ್ವಾಗತ ಕೋರಲು ಎನ್ನಾರೈಗಳು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕಾದಿದ್ದಾರೆ.

11.30: ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಬಗ್ಗೆ ಕೇಂದ್ರ ವಾರ್ತಾ ಸಚಿವ(MoS) ರಾಜವರ್ಧನ್ ರಾಥೋಡ್ ಹೇಳಿದ್ದು ಹೀಗೆ

10.05: ತಮಿಳುನಾಡಿನ ಧರ್ಮಪುರಿಯ ಸರ್ಕಾರ ಆಸ್ಪತ್ರೆಯಲ್ಲಿ ಐದು ನವಜಾತ ಶಿಶುಗಳ ಮರಣವಾಗಿದೆ. ಮಕ್ಕಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾದರೂ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಶಿಶುಗಳು ಬಳಲುತ್ತಿದ್ದವು ಎನ್ನಲಾಗಿದೆ.

Updates India, International News in Brief Nov 16


9.55:
ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದಲ್ಲಿ ಜರ್ಮನಿಯ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

8.35:
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಆದರ್ಶ್ ಸಂಸದ್ ಗ್ರಾಮ ದತ್ತು ಯೋಜನೆ ಅಡಿಯಲ್ಲಿ ಆಂಧ್ರಪ್ರದೇಶದ ಗ್ರಾಮವನ್ನು ಭಾನುವಾರ ದತ್ತು ಸ್ವೀಕರಿಸಲಿದ್ದಾರೆ.

8.30:
ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿ ಇಂದಿಗೆ ಒಂದು ವರ್ಷ ಕಳೆದಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+