ನ.26: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ

ಬೆಂಗಳೂರು, ನ.26: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

18.00: ನವೆಂಬರ್ 27ರ ನಂತರ 43 ದೇಶಗಳಲ್ಲಿ ವೀಸಾ ಆನ್ ಅರೈವಲ್ ಸೌಲಭ್ಯ ಭಾರತೀಯರಿಗೆ ಸಿಗಲಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
12.00: ಮುಂಬೈನ ಲೀಲಾವತಿ ಆಸ್ಪತ್ರೆಯ ಕಿಶೋರ್ ಮೆಹ್ತಾ ಅವರನ್ನು ಬಂಧಿಸಲಾಗಿದೆ. ಮೆಹ್ತಾ ಅವರ ಮೇಲೆ ಫೆಮಾ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪವನ್ನು ಜಾರಿ ನಿರ್ದೇಶನಾಲಯ ಹೊರೆಸಿದೆ.

Lilavati Hospital, Mumbai

11.30: ಸಬ್‌ ಮೆರಿನ್ ಐಎನ್‌ಎಸ್ ಸಿಂಧೂರತ್ನ ಅಗ್ನಿಗಾಹುತಿಯಾದ ಪ್ರಕರಣದಲ್ಲಿ ನೌಕಾದಳದ ಏಳು ಅಧಿಕಾರಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ.

11.20: ನೆರೆ ರಾಷ್ಟ್ರಗಳ ಬಾಂಧವ್ಯದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಅವರು ಬಾಂಗ್ಲಾದೇಶ, ನೇಪಾಳ ಹಾಗೂ ಭೂತನ್ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಅದರೆ, ಪಾಕಿಸ್ತಾನದ ಬಗ್ಗೆ ಉಲ್ಲೇಖಿಸಲಿಲ್ಲ.

Updates India, International News in Brief Nov 26

11.15: ಸಾರ್ಕ್ ಸಮ್ಮೇಳನದ ವೇಳೆಯಲ್ಲಿ ಅಫ್ಘಾನ್ ಅಧ್ಯಕ್ಷ ಆಶ್ರಫ್ ಘನಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಮಹೀಂದ್ರ ರಾಜಪಕ್ಸಾ ಅವರನ್ನು ಮೋದಿ ಅವರು ಭೇಟಿ ಮಾಡಲಿದ್ದಾರೆ.

11.00: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ 18ನೇ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+