ಜು.17 : ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್

ಬೆಂಗಳೂರು, ಜು.17: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

4.30 : ದೇಶದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಬೇಡಿಕೆ ಮತ್ತು ಉತ್ಪಾದನೆ ನಡುವೆ ಭಾರಿ ವ್ಯತ್ಯಾಸ ಕಂಡು ಬಂದಿದೆ ಎಂದು ರಾಷ್ಟ್ರೀಯ ಉಷ್ಣ ವಿದ್ಯುತ್ ಘಟಕದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಹೀಗಾಗಿ ಮುಂದಿನ ಎರಡು ಮೂರು ದಿನಗಳಲ್ಲಿ ದೇಶ ಕತ್ತಲಲ್ಲಿ ಮುಳುಗುವ ಸಾಧ್ಯತೆಯಿದೆ.
4.15 : ದೇಶದ 27 ವಿದ್ಯುತ್ ಘಟಕಗಳಲ್ಲಿ 17 ಸಾವಿರ ಮೆಗಾ ವ್ಯಾಟ್ ಉತ್ಪಾದನೆ ಮಾಡುವಷ್ಟು ಕಲ್ಲಿದ್ದಲು ಸಂಗ್ರಹವಿದೆ. ಕಲ್ಲಿದ್ದಲು ಪೂರೈಕೆ ವ್ಯತ್ಯಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಇಂಧನ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

Power station lacks coal supply

4.00: ದೇಶದಲ್ಲಿ ಮುಂಗಾರು ಮಳೆ ವೈಫಲ್ಯ ಕಂಡಿರುವುದರಿಂದ ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ. ಬೇಡಿಕೆಗೆ ತಕ್ಕ ಕಲ್ಲಿದ್ದಲು ಪೂರೈಕೆ ಸಾಧ್ಯವಾಗುತ್ತಿಲ್ಲ.
3.50: ಧೋತಿ ಪ್ರಕರಣದ ನಂತರ ಸಂಸ್ಕೃತಿ ರಕ್ಷಣೆಗಾಗಿ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿರುವ ತಮಿಳುನಾಡು ಸಿಎಂ ಜಯಲಲಿತಾ ಅವರ ನಡೆಯನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಸ್ವಾಗತಿಸಿವೆ.
2.30: ಬ್ರಿಕ್ಸ್ ಸಮ್ಮೇಳನ ಮೂಲಕ ವಿವಿಧ ದೇಶಗಳ ಮನಗೆದ್ದಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯುಎಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ. ನೆರೆ ಹೊರೆ ರಾಷ್ಟ್ರಗಳ ಜತೆ ಉತ್ತಮ ಬಾಂಧವ್ಯ ವೃದ್ಧಿ ಮುಂದುವರೆಯಲಿ ಎಂದಿದ್ದಾರೆ.

10.40: ದೆಹಲಿ ಗವರ್ನರ್ ಲೆ. ನಜೀಬ್ ಜಂಗ್ ಅವರನ್ನು ಭೇಟಿ ಮಾಡಲು ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಮಾಡಿದ್ದ ಆರ್ಜಿ ತಿರಸ್ಕಾರಗೊಂಡಿದೆ.
10.30: ಕಾಬೂಲಿನ ವಿಮಾನ ನಿಲ್ದಾಣದ ಮೇಲಿನ ದಾಳಿಯ ಹೊಣೆಯನ್ನು ತಾಲಿಬಾನ್ ಹೊತ್ತುಕೊಂಡಿದೆ.

Updates India, International News in Brief on July 17

10.15: ಕಾಬೂಲಿನ ವಿಮಾನ ನಿಲ್ದಾಣದ ಮೇಲೆ ಉಗ್ರರ ದಾಳಿ, ಯಾವುದೇ ಜೀವಹಾನಿ ಸಂಭವಿಸಿಲ್ಲ.
10.00: ಫಿಲಿಫೈನ್ಸ್ ನಲ್ಲಿ ರಾಮಸನ್ ಚಂಡಮಾರುತಕ್ಕೆ 20 ಜನ ಬಲಿಯಾಗಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+