ಸೆ.2: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.2: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
1.10: ಬಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ತಮ್ಮ ಗುರು ಕೋಚ್ ಪಿ. ಗೋಪಿಚಂದ್ ಗೆ ಬೈ ಹೇಳಿದ್ದಾರೆ ಎಂಬ ಸುದ್ದಿ ಬಂದಿದೆ. ಸೈನಾ ಅವರಿಗೆ ಇನ್ಮುಂದೆ ವಿಮಲ್ ಕುಮಾರ್ ತರಬೇತಿ ನೀಡಲಿದ್ದಾರೆ ಎನ್ನಲಾಗಿದೆ.

10.30: ಪಾಕಿಸ್ತಾನದಲ್ಲಿ ಪ್ರಧಾನಿ ನವಾಜ್ ಷರೀಫ್ ಪದಚ್ಯುತಿಗಾಗಿ ಆಗ್ರಹಿಸಿ ಉಗ್ರ ಹೋರಾಟ ಮುಂದುವರೆದಿದೆ. ಈ ನಡುವೆ ರಾಜೀನಾಮೆ
10.22: ತಾಹೀರ್ ಉಲ್ ಖಾದ್ರಿ ಹಾಗೂ ಪಿಟಿಐ ಮುಖ್ಯಸ್ಥ ಇಮ್ರಾನ್ ಖಾನ್ ಅವರು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

10.15: ಭೂ ಸೇನಾ ಮುಖ್ಯಸ್ಥ (ನಿವೃತ್ತ) ಜನರಲ್ ವಿ.ಕೆ.ಸಿಂಗ್‌ರಿಗೆ 14 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಲೆಫ್ಟಿನೆಂಟ್ ಜನರಲ್ (ನಿವೃತ್ತ) ತೇಜಿಂದರ್ ಸಿಂಗ್ ಅವರನ್ನು ಬಂಧಿಸಲಾಗಿದೆ.
10.00: ರಾಜ್ಯದ ನೂತನ ರಾಜ್ಯಪಾಲರಾಗಿ ಗುಜರಾತಿನ ವಿಧಾನಸಭಾ ಅಧ್ಯಕ್ಷರಾಗಿದ್ದ ವಾಜುಬಾಯ್ ರೂಡಾಬಾಯ್ ವಾಲಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.












Click it and Unblock the Notifications