ಆ.22: ದೇಶ, ವಿದೇಶಗಳ ಹೆಡ್ ಲೈನ್ಸ್
ಬೆಂಗಳೂರು, ಆ.22:ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
11.00: ಅಮೆರಿಕ ಮೂಲದ ಪತ್ರಕರ್ತ ಫೊಲೆ ಅವರ ಹತ್ಯೆ ಮಾಡಿದ ಇರಾಕಿ ಉಗ್ರರ ಮೇಲೆ ಸೇಡು ತೀರಿಸಿಕೊಳ್ಳಲು ಅಮೆರಿಕ ಯೋಧರು ಪಣ ತೊಟ್ಟಿದ್ದಾರೆ.
10.45: ಕೇರಳದ ಊಮ್ಮನ್ ಚಾಂಡಿ ಸರ್ಕಾರ 2015ರಿಂದ ಪಂಚತಾರಾ ಹೋಟೆಲ್ ಹೊರತುಪಡಿಸಿ ಮಿಕ್ಕೆಲ್ಲ ಕಡೆ ಮದ್ಯ ಮಾರಾಟ ನಿಷೇಧಿಸಲು ನಿರ್ಧರಿಸಿದೆ. ಸುಮಾರು 700 ಬಾರ್ ಗಳ ಲೈಸನ್ಸ್ ರದ್ದುಗೊಳ್ಳಲಿದೆ.
10.30: ರೇಪ್ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

10.15: ದೆಹಲಿಯಿಂದ ಅಹಮದಾಬಾದಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
10.00: ಐರೋಮ್ ಶರ್ಮಿಳಾ ತಮ್ಮ ಉಪವಾಸ ಹಠ ಮುಂದುವರೆಸಿದ್ದು, ಕುಡಿಯಲು ತಿನ್ನಲು ನಿರಾಕರಿಸಿದ್ದಾರೆ.












Click it and Unblock the Notifications