ನ್ಯೂಯಾರ್ಕ್ ಕೋರ್ಟಿನಿಂದ ಸೋನಿಯಾ ಗಾಂಧಿಗೆ ರಿಲೀಫ್!
ನ್ಯೂಯಾರ್ಕ್, ಆಗಸ್ಟ್ 26: 1984ರಲ್ಲಿ ಭಾರತದಲ್ಲಿ ನಡೆದ ಸಿಖ್ ದಂಗೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಿಲೀಫ್ ಸಿಕ್ಕಿದೆ. ನ್ಯೂಯಾರ್ಕ್ನ್ಯಾಯಾಲಯವೊಂದು ಸೋನಿಯಾ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ. ಈ ಹಿಂದೆ ಬ್ರೂಕ್ಲೀನ್ ನ ಕೋರ್ಟಿನಿಂದಲೂ ಸೋನಿಯಾಗೆ ಶುಭ ಸುದ್ದಿ ಸಿಕ್ಕಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಿಖ್ ಫಾರ್ ಜಸ್ಟೀಸ್ ಎಂಬ ಸಂಸ್ಥೆ ಸಲ್ಲಿಸಿದ್ದ ದೂರಿನ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬ್ರಿಯಾನ್ ಕೋಗನ್ ಅವರು ಸರಿಯಾದ ಸಾಕ್ಷಿ ಆಧಾರಗಳಿಲ್ಲದ ಕಾರಣ ಸೋನಿಯಾ ಗಾಂಧಿ ಅವರ ಮೇಲಿನ ಆರೋಪವನ್ನು ಕೈಬಿಟ್ಟಿದ್ದರು. ಈಗ ನ್ಯೂಯಾರ್ಕಿನಲ್ಲಿ ಮೂವರು ನ್ಯಾಯಾಧೀಶರಾದ ಜೋಸ್ ಕಬ್ರಾನೆಸ್, ರೆನ್ನಾ ರಗ್ಗಿ, ರಿಚರ್ಡ್ ವೆಸ್ಲೆ ಅವರಿದ್ದ ನ್ಯಾಯಾಪೀಠ ಸೋನಿಯಾ ಗಾಂಧಿ ಅವರ ಮೇಲಿದ್ದ ಮಾನವ ಹಕ್ಕು ಉಲ್ಲಂಘನೆ ಆರೋಪವನ್ನು ಸರಿಯಾದ ಸಾಕ್ಷಿ ಆಧಾರಗಳಿಲ್ಲದ ಕಾರಣ ತಳ್ಳಿ ಹಾಕಿದೆ.

ಆದರೆ, ಅರ್ಜಿದಾರರು ಸೂಕ್ತ ಸಾಕ್ಷಿ ಸಿಕ್ಕರೆ ಮತ್ತೊಮ್ಮೆ ದೂರು ಸಲ್ಲಿಸುವ ಅವಕಾಶವಿದೆ. ಸಿಖ್ ಫಾರ್ ಜಸ್ಟೀಸ್ ಇನ್ಮುಂದೆ ಇಂಥ ಪ್ರಕರಣ ದಾಖಲಿಸದಂತೆ ದೂರಿನ ವಿರುದ್ಧ ತಡೆ ನೀಡಬೇಕು ಎಂದು ಸೋನಿಯಾ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳು ತಳ್ಳಿ ಹಾಕಿದ್ದಾರೆ.
2002ರ ಗುಜರಾತ್ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ನರೇಂದ್ರ ಮೋದಿ ಅವರಿಗೆ ವೀಸಾ ನಿರಾಕರಿಸುವುದಾದರೆ, ಸೋನಿಯಾ ಗಾಂಧಿ ಅವರಿಗೂ ವೀಸಾ ನಿರಾಕರಿಸಬೇಕು. ಸಿಖ್ ಸಮುದಾಯದ ಹತ್ಯಾಕಾಂಡ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿಗೂ ವೀಸಾ ನಿಯಮಗಳು ಅನ್ವಯವಾಗಬೇಕು ಎಂದು ಸಿಖ್ ಸಮುದಾಯ ಒತ್ತಾಯಿಸಿತ್ತು.
ಸಿಖ್ ವಿರೋಧಿ ದಂಗೆಯಲ್ಲಿ ಭಾಗಿಯಾದ ಪಕ್ಷದ ನಾಯಕರನ್ನು ರಕ್ಷಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮನ್ಸ್ ಜಾರಿಗೊಳಿಸಿತ್ತು. 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದಿಲ್ಲಿ ಕಂಟೋನ್ಮೆಂಟ್ ಪ್ರದೇಶ ದಲ್ಲಿ ನಡೆದ ಹತ್ಯಾಕಾಂಡ ಪ್ರಕರಣದ ಬಗ್ಗೆ ಸಿಬಿಐ ನೀಡಿರುವ ಹೇಳಿಕೆಯಂತೆ ಈ ಹಿಂಸಾಚಾರವು ವ್ಯವಸ್ಥಿತವಾಗಿ ರೂಪಿಸಿದ್ದು ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ನಾಯಕರನ್ನು ಸೋನಿಯಾ ಗಾಂಧಿ ರಕ್ಷಿಸುತ್ತಿದ್ದಾರೆ ಎಂದು ಸಿಖ್ ಸಮುದಾಯ ಆರೋಪಿಸಿ ತ್ತು Alien Tort Claims Act (ATCA) and Torture Victim Protection Act (TVPA) ಅನ್ವಯ ಎಸ್ ಎಫ್ ಜೆ ದೂರು ದಾಖಲಿಸಿತ್ತು.(ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications