ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿ ತಾಯಿ ನಿಧನ: ಸಂತಾಪ ಸೂಚಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಮತ್ತು ಜಾಗತಿಕ ನಾಯಕರು

|
Google Oneindia Kannada News

ವಾಷಿಂಗ್ಟನ್‌, ಡಿಸೆಂಬರ್‌ 31: ನಿನ್ನೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರು ನಿಧನರಾದರು. ಇದಕ್ಕೆ ಜಗತ್ತಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಸಂತಾಪ ಸೂಚಿಸಿದ್ದಾರೆ.

ಜೋಕಾ- ತಾರಾತಲಾ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಜೋಕಾ- ತಾರಾತಲಾ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಹದಗೆಟ್ಟಿತ್ತು. ಅವರು ಶುಕ್ರವಾರ ಮುಂಜಾನೆ ನಿಧನರಾದರು.

US President Joe Biden offers ‘heartfelt’ condolences to PM Modi on his mother’s demise

'ತಾಯಿಯನ್ನು ಕಳೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್(ಬೈಡನ್‌ ಪತ್ನಿ) ಮತ್ತು ನಾನು ಹೃತ್ಪೂರ್ವಕ ಸಂತಾಪವನ್ನು ಸೂಚಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಪ್ರಧಾನಿ ಮತ್ತು ಅವರ ಕುಟುಂಬದೊಂದಿಗೆ ಇವೆ,' ಎಂದು ಬೈಡೆನ್ ಅವರು ಬರೆದುಕೊಂಡಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ಅವರ ತಾಯಿ ನಿಧನರಾದ ನಂತರ ಹಲವಾರು ಜಾಗತಿಕ ನಾಯಕರು ಸಹ ಸಂತಾಪ ಸೂಚಿಸಿದ್ದಾರೆ.

'ತಾಯಿಯನ್ನು ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟವಿಲ್ಲ' ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಟ್ವೀಟ್ ಮಾಡಿದ್ದಾರೆ.

'ತಾಯಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಸಂತಾಪ" ಎಂದು ಸೇರಿಸಿದ್ದಾರೆ.

US President Joe Biden offers ‘heartfelt’ condolences to PM Modi on his mother’s demise

'ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನರಾದ ಸುದ್ದಿ ಕೇಳಿ ದುಃಖವಾಯಿತು. ಈ ದುಃಖದ ಸಮಯದಲ್ಲಿ ನನ್ನ ಪ್ರಾರ್ಥನೆಗಳು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ಇವೆ' ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಟ್ವೀಟ್ ಮಾಡಿದ್ದಾರೆ.

ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

'ಪ್ರಧಾನಿ ಮೋದಿ, ನಿಮ್ಮ ಪ್ರೀತಿಯ ತಾಯಿಯ ನಿಧನಕ್ಕಾಗಿ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಶುಕ್ರವಾರ ಗುಜರಾತ್‌ನ ಗಾಂಧಿನಗರದಲ್ಲಿ ತಮ್ಮ ತಾಯಿಯ ಅಂತಿಮ ವಿಧಿಗಳನ್ನು ನೆರವೇರಿಸಿದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಾಜಿ ಸಿಎಂ ವಿಜಯ್ ರೂಪಾನಿ ಮತ್ತು ಗುಜರಾತ್ ಕ್ಯಾಬಿನೆಟ್ ಸಚಿವರು ಸಹ ಅವರೊಂದಿಗೆ ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್‌ ಅವರಿಗೆ ನೂರು ವರ್ಷ ವಯಸ್ಸಾಗಿತ್ತು. ಅವರು ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಹಿಂದೂ ಸಂಪ್ರದಾಯದ ವಿಧಿವಿಧಾನಗಳಂತೆ ಅವರಿಗೆ ಅಗ್ನಿ ಸ್ಪರ್ಷ ಮಾಡಲಾಯಿತು. ಗುಜರಾತ್‌ನ ಗಾಂಧಿನಗರದಲ್ಲಿ ಅವರ ಅಂತ್ಯ ಸಂಸ್ಕಾರ ನೇರವೇರಿತು.

English summary
United States President Joe Biden on Saturday offered “heartfelt” condolences to Prime Minister Narendra Modi on his mother’s demise
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X