ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೊಂದು ದಾಳಿ ಭೀತಿ: ಕೂಡಲೇ ಅಫ್ಘಾನ್ ತೊರೆಯುವಂತೆ ಅಮೆರಿಕ ಸೂಚನೆ

|
Google Oneindia Kannada News

ಕಾಬೂಲ್, ಆಗಸ್ಟ್ 28: ಮತ್ತೊಂದು ದಾಳಿಯ ಭೀತಿ ಇರುವ ಹಿನ್ನೆಲೆಯಲ್ಲಿ ತನ್ನ ನಾಗರಿಕರಿಗೆ ಕೂಡಲೇ ಅಫ್ಘಾನಿಸ್ತಾನ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ.

ಕಾಬೂಲ್ ವಿಮಾನ ನಿಲ್ದಾಣದ ಸ್ಫೋಟದ ಬಳಿಕ, ಗುರುವಾರ ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಕಾಬೂಲ್ ವಿಮಾನ ನಿಲ್ದಾಣದಿಂದ ದೂರವಿರುವಂತೆ ಎಚ್ಚರಿಕೆ ನೀಡಿತು. ಪ್ರಮುಖವಾಗಿ ಕಾಬೂಲ್ ವಿಮಾನ ನಿಲ್ದಾಣದ ಅಬ್ಬೆ ಗೇಟ್, ಈಸ್ಟ್ ಗೇಟ್ ಅಥವಾ ನಾರ್ತ್ ಗೇಟ್ ನಲ್ಲಿರುವ ಅಮೆರಿಕ ನಾಗರಿಕರು ಈಗಲೇ ತುರ್ತಾಗಿ ಹೊರಡಬೇಕು ಎಂದು ಹೇಳಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಕಾಬೂಲ್ ಏರ್‌ಪೋರ್ಟ್ ದಾಳಿ ಹಿಂದೆ ISISನ ಫಾರೂಖಿ ಕೈವಾಡ?ಕಾಬೂಲ್ ಏರ್‌ಪೋರ್ಟ್ ದಾಳಿ ಹಿಂದೆ ISISನ ಫಾರೂಖಿ ಕೈವಾಡ?

ಮೊದಲು, ಬ್ರಿಟಿಷ್ ಮತ್ತು ಆಸ್ಟ್ರೇಲಿಯಾ ಸರ್ಕಾರಗಳು ಇದೇ ರೀತಿಯ ಎಚ್ಚರಿಕೆಗಳನ್ನು ನೀಡಿದ್ದವು, ಆಸ್ಟ್ರೇಲಿಯಾದ ಅಧಿಕಾರಿಗಳು "ಭಯೋತ್ಪಾದಕ ದಾಳಿಯ ಮುಂದುವರಿದ ಮತ್ತು ಅತಿ ಹೆಚ್ಚಿನ ಬೆದರಿಕೆಯ ಕುರತು ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಮಾತನಾಡಿದ್ದ ಆಸ್ಟ್ರೇಲಿಯಾದ ವಿದೇಶಾಂಗ ಮಂತ್ರಿ ಮಾರಿಸ್ ಪೇಯ್ನ್, 'ತಾಲಿಬಾನ್ ಆಸ್ಟ್ರೇಲಿಯಾದ ನಾಗರಿಕರು ಮತ್ತು ವೀಸಾ ಹೊಂದಿರುವವರನ್ನು ಸುರಕ್ಷಿತವಾಗಿ ಬಿಡಲು ಅವಕಾಶ ನೀಡುತ್ತದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಅದು ಸಾಧ್ಯವಿಲ್ಲ.

US tells citizens to leave Kabul Airport Gates Immediately

ಉಗ್ರರು ಹಮೀದ್ ಕರ್ಜೈ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡಿದ್ದಾರೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಬಾರದಂತೆ ಸೂಚನೆ ನೀಡಲಾಗಿದೆ. ಪ್ರಸ್ತುತ ಅದು ಸುರಕ್ಷಿತ ಕೂಡ ಅಲ್ಲ. ಕಾಬೂಲ್ ನಲ್ಲಿದ್ದರೆ ಸುರಕ್ಷಿತ ಸ್ಥಳಗಳಿಗೆ ತೆರಳಿ ಆಶ್ರಯ ಪಡೆಯಿರಿ. ಮುಂದಿನ ಸಲಹೆಗಾಗಿ ಕಾಯಿರಿ ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಮಾಹಿತಿ ನೀಡಿದ ಅಮೆರಿಕದ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು 'ಅಫ್ಘಾನಿಸ್ತಾನದ ಇಸ್ಲಾಮಿಕ್ ಸ್ಟೇಟ್ ಅಂಗಸಂಸ್ಥೆ ಇಸಿಸ್ ಕೆಯಿಂದ ವಿಮಾನ ನಿಲ್ದಾಣದಲ್ಲಿ "ನಿರ್ದಿಷ್ಟ" ಮತ್ತು "ನಂಬಲರ್ಹ" ಸಂಭಾವ್ಯ ದಾಳಿ ಸಂಚನ್ನು ಟ್ರ್ಯಾಕ್ ಮಾಡಲಾಗಿದೆ. ಉಗ್ರರು ಕನಿಷ್ಠ 12ಕ್ಕೂ ಹೆಚ್ಚು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ. ದಾಳಿಗಳಿಗೆ ಜನಾಂಗೀಯ ಅಲ್ಪಸಂಖ್ಯಾತರು ಮತ್ತು ಇತರೆ ದೇಶಗಳ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ದೇಶ ತೊರೆಯುವ ಕುರಿತು ಆಗಸ್ಟ್ 31 ರ ತಾಲಿಬಾನ್ ಗಡುವಿನ ಮೊದಲು ವಿಮಾನ ನಿಲ್ದಾಣಕ್ಕೆ ತೆರಳಲು ಪ್ರಯತ್ನಿಸುತ್ತಿರುವ ಅಂದಾಜು 1,500 ಅಮೆರಿಕನ್ನರು ಮತ್ತು ಇನ್ನೂ ಅಫ್ಘಾನಿಸ್ಥಾನದಲ್ಲಿರುವ ಇತರೆ ವಿದೇಶಿಗರು ವಿಮಾನ ನಿಲ್ದಾಣಕ್ಕೆ ದೌಡಾಯಿಸುತ್ತಿದ್ದು, ಇದೇ ಸಂದರ್ಭದಲ್ಲೇ ಈ ಎಚ್ಚರಿಕೆ ರವಾನೆಯಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.

ವಿಮಾನ ನಿಲ್ದಾಣದಲ್ಲಿ ಸಂಭವನೀಯ ಭದ್ರತಾ ಬೆದರಿಕೆಗಳ ಬಗ್ಗೆ ಅಮೆರಿಕ ಸರ್ಕಾರವು ಎಚ್ಚರಿಕೆ ನೀಡುತ್ತಿದೆ ಮತ್ತು ವಿಮಾನ ನಿಲ್ದಾಣಕ್ಕೆ ಪ್ರವೇಶವನ್ನು ಸರಿಹೊಂದಿಸಲಾಗಿದೆ, ಕೆಲವು ಗೇಟ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ಕಾಬೂಲ್ ಬಾಂಬ್ ಸ್ಫೋಟದ ಬೆನ್ನಲ್ಲೇ ಅಫ್ಘಾನಿಸ್ತಾನದ ನಂಗಹಾರ್ ಪ್ರಾಂತ್ಯದಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ನೆಲೆಯ ಮೇಲೆ ಅಮೆರಿಕಾದ ಮಿಲಿಟರಿ ಪಡೆ ವಾಯುದಾಳಿ ನಡೆಸಿದ್ದು, ದಾಳಿಯಲ್ಲಿ ಒಬ್ಬ ಪ್ರಮುಖ ಉಗ್ರ ಹತನಾಗಿದ್ದಾನೆಂದು ತಿಳಿದುಬಂದಿದೆ.

ಈ ಕುರಿತು ಯುಎಸ್‌ ಮಿಲಿಟರಿ ಪಡೆ ಮಾಹಿತಿ ನೀಡಿದ್ದು, ಇಸ್ಲಾಮಿಕ್‌ ಸ್ಟೇಟ್‌ ಸದಸ್ಯರ ವಿರುದ್ದ ದಾಳಿ ನಡೆಸಲಾಗಿದ್ದು, ದಾಳಿಯಿಂದ ಅಫ್ಘನ್ ನಾಗರಿಕರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ತಿಳಿಸಿದೆ.

ಮೊನ್ನೆ ಕಾಬೂಲ್ ವಿಮಾನ ನಿಲ್ದಾಣದ ಬಳಿ ಬಾಂಬ್ ಸ್ಫೋಟಿಸಿದ್ದ ಉಗ್ರರು, 180ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದುಕೊಂಡಿದ್ದರು. ದಾಳಿಯೆ ಹೊಣೆಯನ್ನು ಅಫ್ಘಾನಿಸ್ತಾನದಲ್ಲಿ ಸಕ್ರಿಯವಾಗಿರುವ ಇಸ್ಲಾಮಿಕ್ ಸ್ಟೇಟ್ ಖೊರಸಾನ್ ಸಂಘಟನೆ ಹೊತ್ತುಕೊಂಡಿತ್ತು.

ಇದರ ಬೆನ್ನಲ್ಲೇ ಎಚ್ಚರಿಗೆ ನೀಡಿದ್ದ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರು, ಪ್ರತೀಕಾರ ತೀರಿಸಿಕೊಳ್ಳುವ ಎಚ್ಚರಿಕೆಯನ್ನು ನೀಡಿದ್ದರು.

ಇದರಂತೆ ಅಮೆರಿಕಾ ಪ್ರತೀಕಾರ ತೀರಿಸಿಕೊಂಡಿದ್ದು, ಖೋರಸಾನ್ ಘಟಕದ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಸದಸ್ಯನನ್ನು ಗುರಿ ಮಾಡಿ ದಾಳಿ ನಡೆಸಿದೆ. ದಾಳಿಯಲ್ಲಿ ಐಎಸ್‌ಐಎಸ್‌-ಕೆ 'ಸಂಚುಕೋರ' ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸುವುದಕ್ಕೂ ಮೂರು ದಿನ ಮೊದಲೇ ಅಮೆರಿಕ ಅದರ ಬಗ್ಗೆ ಸುಳಿವು ನೀಡಿತ್ತು. ಆದರೂ ಬಾಂಬ್ ಸ್ಫೋಟವನ್ನು ತಪ್ಪಿಸಲು ಆಗಲಿಲ್ಲ. ಕುತೂಹಲವೆಂದರೆ, ಕಾಬೂಲ್​ನಲ್ಲಿ ಉಗ್ರರಿಂದ ಮತ್ತೊಂದು ಬಾಂಬ್ ಸ್ಫೋಟ ದಾಳಿ ಆಗುವ ಸಾಧ್ಯತೆ ಇದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳು ಎಚ್ಚರಿಸಿವೆ.

English summary
After the Kabul airport blast, the US embassy in Kabul on Thursday Warned Its to stay away from Kabul airport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X