ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಗ್ರರ ವಿರುದ್ಧ ಸೋತ ಅಮೆರಿಕ..! ನಾವೇ ಗೆದ್ದಿದ್ದು ಎಂದು ಬೀಗಿದ ತಾಲಿಬಾನ್..!

|
Google Oneindia Kannada News

ಅಫ್ಘಾನಿಸ್ತಾನ ಹೊಸ ಯುಗ ಆರಂಭವಾಗಿದೆ. ಸುದೀರ್ಘ 20 ವರ್ಷಗಳ ನಂತರ ಅಮೆರಿಕ ತನ್ನ ಸೇನೆಯನ್ನು ಅಫ್ಘಾನಿಸ್ತಾನದಿಂದ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದೆ. ಸೆಪ್ಟೆಂಬರ್ 11ರ ಒಳಗಾಗಿ ಸೇನೆಯನ್ನ ವಾಪಸ್ ಕರೆಸಿಕೊಳ್ಳಲು ಬೈಡನ್ ಆಡಳಿತ ಮುಂದಾಗಿದೆ. ಆದರೆ ಈ ಹೊತ್ತಲ್ಲೇ ಅಮೆರಿಕ ನಾಯಕರಿಗೆ ಹಾಗೇ ಅಲ್ಲಿನ ಸರ್ಕಾರಕ್ಕೂ ತಾಲಿಬಾನ್ ಉಗ್ರರು ತಿರುಗೇಟು ನೀಡಿದ್ದಾರೆ. 'ನಾವು ಗೆದ್ದಿದ್ದೇವೆ, ಆದರೆ ಅಮೆರಿಕ ಸೋತಿದೆ' ಎಂದು ತಾಲಿಬಾನ್ ಉಗ್ರ ಸಂಘಟನೆಯ ನಾಯಕರು ತಿರುಗೇಟು ನೀಡಿದ್ದಾರೆ.

ಸತತ 20 ವರ್ಷಗಳ ಕಾಲ ಅಮೆರಿಕ ಸೇನೆ ಅಫ್ಘಾನಿಸ್ತಾನದಲ್ಲಿ ಬೀಡುಬಿಟ್ಟಿತ್ತು. ಆದರೆ ಈ ಹಿಂದಿನ ಟ್ರಂಪ್ ಸರ್ಕಾರದ ನಿರ್ಧಾರದಿಂದ ತಾಲಿಬಾನ್ ಜೊತೆ ಒಪ್ಪಂದ ಮಾಡಿಕೊಂಡು ಮೇ 1ರ ಒಳಗಾಗಿ ಸೇನೆ ವಾಪಸ್ ಕರೆಸಿಕೊಳ್ಳಲು ಸಿದ್ಧತೆಗಳು ಸಾಗಿದ್ದವು. ಆದರೆ ದಿಢೀರ್ ಆ ಗಡುವನ್ನು ಮುಂದೂಡಿರುವ ಅಮೆರಿಕ ಸರ್ಕಾರ, ಸೆಪ್ಟೆಂಬರ್ 11ರ ಒಳಗಾಗಿ ಸೇನೆಯನ್ನ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದೆ. ಅಮೆರಿಕ ಘೋಷಣೆಯನ್ನ ಹೊರಡಿಸಿ 1 ದಿನ ಕಳೆಯುವ ಮೊದಲೇ ತಾಲಿಬಾನ್ ಉಗ್ರರು ಬೈಡನ್‌ಗೆ ತಿರುಗೇಟು ನೀಡಿದ್ದಾರೆ.

 ಯಾರಿಗೆ ನಷ್ಟ, ಯಾರಿಗೆ ಲಾಭ..?

ಯಾರಿಗೆ ನಷ್ಟ, ಯಾರಿಗೆ ಲಾಭ..?

ಅಮೆರಿಕ ದಿಢೀರ್ ಅಫ್ಘಾನಿಸ್ತಾನದಿಂದ ಹೊರ ಹೋಗುವುದಿಲ್ಲ. ಹಂತ ಹಂತವಾಗಿ ಸೇನೆಯನ್ನು ಸೆಪ್ಟೆಂಬರ್ 11ರ ಒಳಗಾಗಿ ವಾಪಸ್ ಕರೆಸಿಕೊಳ್ಳಲಿದೆ. ಆದ್ರೆ ಅಮೆರಿಕದ ನಿರ್ಧಾರದ ಬೆನ್ನಲ್ಲೇ ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬ ಲೆಕ್ಕಾಚಾರಗಳು ಆರಂಭವಾಗಿವೆ. ಮತ್ತೊಂದು ಕಡೆ ಅಫ್ಘಾನಿಸ್ತಾನದ ಸ್ಥಳೀಯರಿಗೆ ತಾಲಿಬಾನಿಗಳ ಭಯ ಇನ್ನೂ ಹೋಗಿಲ್ಲ. ಏಕೆಂದರೆ ತಾಲಿಬಾನಿ ಉಗ್ರರು ನಡೆಸಿರುವ ಕೃತ್ಯಗಳು ಅಷ್ಟು ಭಯಾನಕವಾಗಿವೆ. ಇಷ್ಟೆಲ್ಲದರ ನಡುವೆ ಮತ್ತೊಂದು ದೇಶ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಬಹುದಾ ಎಂಬ ಪ್ರಶ್ನೆ ಕೂಡ ಹುಟ್ಟಿಕೊಂಡಿದೆ. ಆದರೆ ಇದಕ್ಕೆಲ್ಲಾ ಕಾಲವೇ ಉತ್ತರ ನೀಡಲಿದೆ.

ಅಫ್ಘಾನ್‌ ಜನರಿಗೆ ನೆಮ್ಮದಿಯೇ ಇಲ್ಲ

ಅಫ್ಘಾನ್‌ ಜನರಿಗೆ ನೆಮ್ಮದಿಯೇ ಇಲ್ಲ

ಬ್ರಿಟಿಷರಿಂದ ಅಫ್ಘಾನ್‌ 1919ರಲ್ಲೇ ಸ್ವಾತಂತ್ರ್ಯ ಪಡೆದಿದೆ. ಇದು ಭಾರತಕ್ಕಿಂತ ಮೊದಲಾದರೂ ಅಲ್ಲಿ ಶಾಂತಿ ನೆಲೆಸಿಲ್ಲ. ಸದ್ಯಕ್ಕೆ ಅಫ್ಘಾನ್‌ ಸ್ಥಿತಿ ಹೇಗಿದೆ ಎಂದರೆ, ಧೈರ್ಯವಾಗಿ ಹೊರಗೆ ಹೋಗಲೂ ಸಾಧ್ಯವಿಲ್ಲ. ಯಾವ ಕ್ಷಣದಲ್ಲಿ ಉಗ್ರಪಡೆ ಗುಂಡಿನ ಮಳೆಗರೆಯುತ್ತೋ, ಬಾಂಬ್ ಹಾಕುತ್ತೋ ಎಂಬ ಭಯ. ಅಫ್ಘಾನ್‌ನಲ್ಲಿ ದಿನಕ್ಕೆ ಒಂದಾದರೂ ಹಿಂಸೆ ನಡೆಸದಿದ್ದರೆ ತಾಲಿಬಾನ್ ಉಗ್ರರಿಗೆ ನಿದ್ದೆ ಬರೋದಿಲ್ಲ. ಈಗಾಗಲೇ ಲಕ್ಷಾಂತರ ಜನ ರಕ್ತ ಪಿಪಾಸುಗಳ ದಾಳಿಗೆ ಬಲಿಯಾಗಿದ್ದಾರೆ. ತಾಲಿಬಾನಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಅಶ್ರಫ್ ಘನಿ ಸರ್ಕಾರ ಪರದಾಡುತ್ತಿದೆ. ಕಂಡ ಕಂಡಲ್ಲಿ ಪಟಾಕಿಗಳಂತೆ ಉಗ್ರರು ಬಾಂಬ್ ಉಡಾಯಿಸುತ್ತಿದ್ದಾರೆ.

ಹೊಟ್ಟೆಗೆ ಅನ್ನವಿಲ್ಲ, ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ

ಹೊಟ್ಟೆಗೆ ಅನ್ನವಿಲ್ಲ, ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ

ಅಫ್ಘಾನಿಸ್ತಾನದ ಜನರು ಅದೇನು ಪಾಪ ಮಾಡಿದ್ದಾರೋ ಗೊತ್ತಿಲ್ಲ, ಅಲ್ಲಿ ಬದುಕಬೇಕು ಎಂದರೆ ನರಕದರ್ಶನ ಗ್ಯಾರಂಟಿ. ಹೆಜ್ಜೆ ಹೆಜ್ಜೆಗೂ ಆವರಿಸುವ ಭಯ. ಯಾವ ಸಮಯದಲ್ಲಿ ಏನಾಗುತ್ತೋ ಎಂಬ ಆತಂಕ. ನೆಮ್ಮದಿ, ಶಾಂತಿ ಎಂಬುದೇ ಅಫ್ಘಾನಿಸ್ತಾನದ ಜನರಿಗೆ ಮರೆತು ಹೋದಂತಿದೆ. ಇನ್ನು ಅಲ್ಲಿನ ಆರ್ಥಿಕ ಸ್ಥಿತಿ ಕೂಡ ತೀರಾ ಹದಗೆಟ್ಟು ಹೋಗಿದ್ದು, ಹೊಟ್ಟೆಗೆ ಅನ್ನವಿಲ್ಲದೆ ಕೋಟ್ಯಂತರ ಮಂದಿ ನರಳುತ್ತಿದ್ದಾರೆ. ಮಕ್ಕಳಿಗೆ ವಿದ್ಯಾಭ್ಯಾಸವೂ ಸಿಗದ ಪರಿಸ್ಥಿತಿ ಅಫ್ಘಾನಿಸ್ತಾನದಲ್ಲಿ ನಿರ್ಮಾಣವಾಗಿದೆ. ಹೀಗೆ ಅಫ್ಘಾನಿಸ್ತಾನದ ಪರಿಸ್ಥಿತಿ ಸುಧಾರಣೆ ನೆಪ ಮಾಡಿ ಬಂದು ಸೇರಿಕೊಂಡ ಯಾವುದೇ ದೇಶ ಕೂಡ ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲ ಸಕ್ಸಸ್ ಆಗಿಲ್ಲ. ಅದು ಬಿಡಿ ಪ್ರಾಮಾಣಿಕ ಪ್ರಯತ್ನಗಳನ್ನೂ ನಡೆಸುತ್ತಿಲ್ಲ ಎಂಬ ಆರೋಪವಿದೆ.

ಟ್ರಂಪ್ ಸಂಧಾನವೂ ವಿಫಲವಾಗಿತ್ತು..!

ಟ್ರಂಪ್ ಸಂಧಾನವೂ ವಿಫಲವಾಗಿತ್ತು..!

ತಾಲಿಬಾನಿ ನಾಯಕರ ಜೊತೆ ಹಿಂದೆ ಅಮೆರಿಕ ಅಧ್ಯಕ್ಷ ಟ್ರಂಪ್ ಚರ್ಚೆ ನಡೆಸಲು ಮುಂದಾಗಿದ್ದರು. ಅಲ್ಲದೆ ತಾಲಿಬಾನಿಗಳು ಒಳ್ಳೆಯವರು ಎಂದು ಟ್ರಂಪ್ ಹೇಳಿದ್ದರು. ಆದರೆ ಅಫ್ಘಾನ್‌ ಸರ್ಕಾರದ ಮಧ್ಯಸ್ಥಿಕೆ ಇಲ್ಲದೆ ನೇರವಾಗಿ ಉಗ್ರರ ಜೊತೆ ಮಾತುಕತೆ ನಡೆಸಿದ್ದಕ್ಕೆ ಅಮೆರಿಕದ ವಿರುದ್ಧ ಅಶ್ರಫ್ ಘನಿ ಸರ್ಕಾರ ಆಕ್ರೋಶ ವ್ಯಕ್ತಪಡಿಸಿತ್ತು. ಇದೆಲ್ಲಾ ನಡೆದು ಕೆಲವೇ ದಿನಗಳು ಕಳೆಯುವ ಒಳಗಾಗಿ ಅಮೆರಿಕದ ಸೈನಿಕರನ್ನೇ ತಾಲಿಬಾನ್ ಉಗ್ರರು ಕೊಂದು ಹಾಕಿದ್ದರು. ಈ ದಾಳಿ ನಂತರ ಅಮೆರಿಕ ಹಾಗೂ ತಾಲಿಬಾನ್ ನಡುವಿನ ಮಾತುಕತೆಯೇ ಮುರಿದುಬಿದ್ದಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಸೇನೆ ಹಿಂಪಡೆಯಲು ಅಮೆರಿಕ ಒಪ್ಪಿಗೆ ಸೂಚಿಸಿತ್ತು.

ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿದ್ದರು..!

ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿದ್ದರು..!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅದೆಷ್ಟು ಕ್ರೂರವಾಗಿ ವರ್ತಿಸುತ್ತಿದೆ ಎಂದರೆ, ಅಲ್ಲಿನ ಪ್ರಧಾನಿ, ಅಧ್ಯಕ್ಷರು, ಉಪಾಧ್ಯಕ್ಷರಿಗೇ ಸರಿಯಾದ ಭದ್ರತೆ ಸಿಗುತ್ತಿಲ್ಲ. ಕೆಲವು ತಿಂಗಳ ಹಿಂದೆ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನ ಪಾರ್ಲಿಮೆಂಟ್ ಮೇಲೆ ದಾಳಿಗೆ ಮುಂದಾಗಿದ್ದರು. ಅದೃಷ್ಟವಶಾತ್ ಸೂಸೈಡ್ ಬಾಂಬರ್ ಅಫ್ಘಾನ್ ಸಂಸತ್ ಭವನದಿಂದ ದೂರದಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ್ದ. ಇದರಿಂದ ಜನಪ್ರತಿನಿಧಿಗಳ ಜೀವ ಉಳಿದಿತ್ತು. ಆದರೆ ಅಂದಿನ ಸ್ಫೋಟದ ತೀವ್ರತೆಗೆ ಅಫ್ಘಾನಿಸ್ತಾನದ ಪಾರ್ಲಿಮೆಂಟ್ ಕಟ್ಟಡವೇ ನಡುಗಿ ಹೋಗಿತ್ತು. ಗೋಡೆಗಳು ಬಿರುಕುಬಿಡುವಷ್ಟು ತೀವ್ರತೆ ಆ ಸ್ಫೋಟಕ್ಕೆ ಇತ್ತು.

English summary
After announcement to withdrawal the US troops from Afghanistan, Taliban leaders said it’s the victory against America.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X