ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನಕ್ಕೆ ಹೋಗಬೇಡಿ... ಅಮೆರಿಕ ತನ್ನ ಪ್ರಜೆಗಳಿಗೆ ಯಾಕೆ ಈ ಸಲಹೆ ನೀಡಿದೆ?

|
Google Oneindia Kannada News

ಅಮೆರಿಕ ತನ್ನ ನಾಗರಿಕರಿಗೆ ಸಲಹೆಯನ್ನು ನೀಡಿದೆ ಮತ್ತು ಜಾಗೃತರಾಗಿ ಎಂದು ಎಚ್ಚರಿಸಿದೆ. ಯಾವುದೇ ಪ್ರಜೆ ಪಾಕಿಸ್ತಾನಕ್ಕೆ ತೆರಳಲು ಮುಂದಾದರೆ ಅದನ್ನು ಮರುಪರಿಶೀಲಿಸಬೇಕು ಎಂದು ಅಮೆರಿಕ ಸರ್ಕಾರ ಹೇಳಿದ್ದು, ಈ ಸಲಹೆಯಲ್ಲಿ ಭಯೋತ್ಪಾದಕ ದಾಳಿಯ ಬಗ್ಗೆಯೂ ಉಲ್ಲೇಖಿಸಲಾಗಿದೆ.

ಭಯೋತ್ಪಾದನೆ ಮತ್ತು ಮತೀಯ ಹಿಂಸಾಚಾರವನ್ನು ಗಣನೆಗೆ ತೆಗೆದುಕೊಂಡು, ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಯುಎಸ್ ತನ್ನ ನಾಗರಿಕರಿಗೆ ಸಲಹೆ ನೀಡಿದ್ದು, ಈಗಾಗಲೇ ಪಾಕಿಸ್ತಾನಕ್ಕೆ ಪ್ರಯಾಣಿಸಲು ಯೋಜಿಸಿರುವ ನಾಗರಿಕರನ್ನು ಮರುಪರಿಶೀಲಿಸುವಂತೆ ಸಲಹೆಯನ್ನು ನೀಡಿದೆ. ನಿರ್ದಿಷ್ಟವಾಗಿ, ತೊಂದರೆಗೊಳಗಾದ ಪ್ರಾಂತ್ಯಗಳಿಗೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಇದಕ್ಕೂ ಮುನ್ನವೇ ಅಮೆರಿಕ ಪಾಕಿಸ್ತಾನಕ್ಕೆ ತೆರಳುವ ನಾಗರಿಕರಿಗೆ ಸಲಹೆ ಸೂಚನೆಗಳನ್ನು ನೀಡಿತ್ತು. ಈ ಬಾರಿ ಅನೇಕ ಹೊಸ ಪ್ರಾಂತ್ಯಗಳನ್ನು ಸಹ ಸಲಹೆಗೆ ಸೇರಿಸಲಾಗಿದೆ.

 ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್‌ನಿಂದ ಸಲಹೆ

ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್‌ನಿಂದ ಸಲಹೆ

ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಈ ಸಲಹೆಯನ್ನು ಹಂತ 3 ಎಂದು ಇರಿಸಿದೆ. ಯುನೈಟೆಡ್ ಸ್ಟೇಟ್ಸ್ ಪ್ರಯಾಣಕ್ಕಾಗಿ ಹಂತ 3 ಸಲಹೆಯನ್ನು ನೀಡುತ್ತದೆ. ಪಾಕಿಸ್ತಾನಕ್ಕೆ ಪ್ರಯಾಣಿಸುವುದು ನಾಗರಿಕರ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ. ಆ ದೇಶಕ್ಕೆ ಪ್ರಯಾಣಿಸುವುದನ್ನು ತಪ್ಪಿಸಲು ಪ್ರಯಾಣಿಕರಿಗೆ ಸಲಹೆ ನೀಡುತ್ತದೆ.

ಪಾಕ್ ಮೇಲೆ ದಾಳಿ ನಡೆಸಲು ಭಯೋತ್ಪಾದಕ ಗುಂಪುಗಳು ಪ್ಲಾನ್‌

ಪಾಕಿಸ್ತಾನದ ಮೇಲೆ ದಾಳಿ ನಡೆಸಲು ಭಯೋತ್ಪಾದಕ ಗುಂಪುಗಳು ಯೋಜನೆ ರೂಪಿಸುತ್ತಿವೆ. ಸಾರಿಗೆ ಕೇಂದ್ರಗಳು, ಮಾರುಕಟ್ಟೆಗಳು, ಶಾಪಿಂಗ್ ಮಾಲ್‌ಗಳು, ಮಿಲಿಟರಿ ಸ್ಥಾಪನೆಗಳು, ವಿಮಾನ ನಿಲ್ದಾಣಗಳು, ವಿಶ್ವವಿದ್ಯಾನಿಲಯಗಳು, ಪ್ರವಾಸಿ ಸ್ಥಳಗಳು, ಶಾಲೆಗಳು, ಆಸ್ಪತ್ರೆಗಳು, ಪೂಜಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಗುಂಪುಗಳು ಪಾಕಿಸ್ತಾನದಲ್ಲಿ ದಾಳಿ ನಡೆಸಲು ಯೋಜಿಸುತ್ತಿವೆ ಎಂದು ಸಲಹೆಯಲ್ಲಿ ತಿಳಿಸಲಾಗಿದೆ.

 ಪಾಕಿಸ್ತಾನದಲ್ಲಿ ದಾಳಿಗಳು ನಡೆಯುತ್ತಲೇ ಇವೆ

ಪಾಕಿಸ್ತಾನದಲ್ಲಿ ದಾಳಿಗಳು ನಡೆಯುತ್ತಲೇ ಇವೆ

ಈ ಹಿಂದೆಯೂ ಸಹ ಅಮೆರಿಕದ ನಾಗರಿಕರು ಮತ್ತು ರಾಜತಾಂತ್ರಿಕರನ್ನು ಪಾಕಿಸ್ತಾನದಲ್ಲಿ ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಲಹೆಯಲ್ಲಿ ಹೇಳಲಾಗಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಲೇ ಇರುತ್ತವೆ, ಅವುಗಳಲ್ಲಿ ಹೆಚ್ಚಿನವು ಬಲೂಚಿಸ್ತಾನ್ ಮತ್ತು ಕೆಪಿಕೆ ಪ್ರಾಂತ್ಯಗಳನ್ನು ಒಳಗೊಂಡಿವೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಹೊರಡಿಸಿದ ಸಲಹೆ ತಿಳಿಸಿದೆ. ಈ ದಾಳಿಯಲ್ಲಿ ಅಪಾರ ಸಂಖ್ಯೆಯ ಜನರು ಗಾಯಗೊಂಡಿದ್ದಾರೆ.

 ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸದಂತೆ ಎಚ್ಚರವಹಿಸಿ

ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸದಂತೆ ಎಚ್ಚರವಹಿಸಿ

"ಅಪರಾಧ ಮತ್ತು ಭಯೋತ್ಪಾದನೆ" ಹಿನ್ನೆಲೆಯಲ್ಲಿ ಭಾರತಕ್ಕೆ ಪ್ರಯಾಣಿಸುವಾಗ "ಹೆಚ್ಚಿನ ಎಚ್ಚರಿಕೆ" ಯನ್ನು ವಹಿಸುವಂತೆ ಯುನೈಟೆಡ್ ಸ್ಟೇಟ್ಸ್ ಶುಕ್ರವಾರ ತನ್ನ ನಾಗರಿಕರಿಗೆ ಸಲಹೆಯನ್ನು ನೀಡಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸದಂತೆಯೂ ಅಮೆರಿಕ ನಾಗರಿಕರಿಗೆ ಸೂಚಿಸಲಾಗಿದೆ.

English summary
US Urges Citizens To Reconsider Travel To Pakistan Due To Terrorism Read more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X