ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವೈರಸ್ ಚಿಕಿತ್ಸೆಗೆ ಭಾರತದಲ್ಲಿ ಔಷಧಿ ಕೋರಿದ ಅಮೆರಿಕಾ

|
Google Oneindia Kannada News

ವಾಶಿಂಗ್ ಟನ್, ಏಪ್ರಿಲ್.05: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ.. ಕೊರೊನಾ ವೈರಸ್ ನಿಂದ ತತ್ತರಿಸಿ ಹೋಗಿರುವ ರಾಷ್ಟ್ರಗಳ ಪೈಕಿ ಅಮೆರಿಕಾ ಅಗ್ರಸ್ಥಾನದಲ್ಲಿದೆ. ಪ್ರತಿನಿತ್ಯ ಸಾವಿರಾರು ಜನರು ಮಾರಕ ಸೋಂಕಿಗೆ ತುತ್ತಾಗುತ್ತಿದ್ದಾರೆ. ಪ್ರಜೆಗಳನ್ನು ರಕ್ಷಿಸಿಕೊಳ್ಳಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ನೆರವು ಕೋರಿದ್ದಾರೆ.
ಅಮೆರಿಕಾದಲ್ಲಿ ಇರುವ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕಾಗಿ Hydroxychloroquine ಔಷಧವನ್ನು ರಫ್ತು ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿದ್ದೇವೆ ಎಂದು ಸ್ವತಃ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ತನ್ನದೇ ಪ್ರಜೆಗಳ ಮೇಲೆ ಮುನಿಸಿಕೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ದೂರವಾಣಿ ಮೂಲಕ ಭಾರತ ಪ್ರಧಾನಿ ಮೋದಿ ಜೊತೆಗೆ ಮಾತನಾಡಿದ್ದು ಕೊರೊನಾ ವೈರಸ್ ವಿರುದ್ಧ ಹೋರಾಟವನ್ನು ಅವರೂ ಕೂಡಾ ಗಂಭೀರವಾಗಿ ಪರಿಗಣಿಸಿದ್ದಾರೆ. ಹೈಡ್ರೋಕ್ಲೋರೊಕ್ವಿನ್ ಔಷಧಿ ಕುರಿತು ವೈದ್ಯರ ಬಳಿಯೂ ಚರ್ಚಿಸಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.

USA Request To India For Hydroxychloroquine Tablets To Treat Coronavirus Patients

ಭಾರತವನ್ನು ಹಾಡಿ ಹೊಗಳಿದ ಟ್ರಂಪ್:
ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಶ್ರಮಿಸುತ್ತಿದೆ. ಕೋಟ್ಯಂತರ ಮಂದಿ ಪ್ರಜೆಗಳನ್ನು ರಕ್ಷಿಸಿಕೊಳ್ಳಲು ಭಾರತ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಮಲೇರಿಯಾಗೆ ಬಳಸುವ ಹೈಡ್ರೋಕ್ಲೋರೊಕ್ವಿನ್ ಔಷಧವನ್ನು ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಲಾಗುತ್ತಿದೆ. ಭಾರತದ ಬಳ ಹೈಡ್ರೋಕ್ಲೋರೊಕ್ವಿನ್ ಔಷಧಿಯ ದಾಸ್ತಾನು ಸಾಕಷ್ಟಿದೆ. ಇದರಲ್ಲಿ ಅಮೆರಿಕಾಗೂ ಸ್ವಲ್ಪ ಔಷಧಿಯನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದೇವೆ ಎಂದು ಟ್ರಂಪ್ ತಿಳಿಸಿದ್ದಾರೆ.

English summary
USA Request To India For Hydroxychloroquine Tablets To Treat Coronavirus Patients
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X