ಬಾಂಗ್ಲಾದೇಶದಲ್ಲಿ ಹಿಂದೂ ವಿಧವಾ ಮಹಿಳೆ ಮೆಲೆ ಗ್ಯಾಂಗ್ ರೇಪ್, ಪತ್ರಕರ್ತನ ಭೀಕರ ಹತ್ಯೆ
Violence Against Hindus in Bangladesh: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಇದೀಗ ಮತ್ತೆ ಹಿಂದೂ ವಿಧವಾ ಮಹಿಳೆಯೊಬ್ಬರ ಮೇಲೆ ಗ್ಯಾಂಗ್ ರೇಪ್ ಹಾಗೂ ಮತ್ತೊಂದೆಡೆ ಓರ್ವ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆಗೈದ ಹೀನ ಕೃತ್ಯಗಳು ನಡೆದಿವೆ.
ಕಾಲಿಗಂಜ್ ಎಂಬ ಸ್ಥಳದಲ್ಲಿ 40 ವರ್ಷದ ಹಿಂದೂ ವಿಧವೆಯೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ನಡೆಸಿದ್ದಾರೆ. ಅಷ್ಟೇ ಅಲ್ಕದೆ, ಈ ಮಹಿಳೆಯನ್ನು ಮರಕ್ಕೆ ಕಟ್ಟಿ ಕೂದಲು ಕತ್ತರಿಸಿ ಚಿತ್ರಹಿಂಸೆ ನೀಡಿ ಹೀನಕೃತ್ಯ ಮರೆದಿರುವ ಫೋಟೋ ಇದೀಗ ಹರಿದಾಡುತ್ತಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ.

ಹಿಂದೂ ವಿಧವಾ ಮಹಿಳೆ ಮೇಲೆ ಗ್ಯಾಂಗ್ ರೇಪ್: ಸಂತ್ರಸ್ತ ಮಹಿಳೆಯು ಶಾಹೀನ್ ಮತ್ತು ಆತನ ಸಹೋದರನಿಂದ 0.03 ಹೆಕ್ಟೇರ್ ಭೂಮಿ ಹಾಗೂ ಎರಡು ಅಂತಸ್ತಿನ ಮನೆಯನ್ನು 14,00,000 ರೂಪಾಯಿಗೆ ಖರೀದಿ ಮಾಡಿದ್ದರು. ನಂತರ ಅವರಿಬ್ಬರು ಆಕೆಗೆ ಕಿರುಕುಳ ನೀಡುತ್ತಿದ್ದರು. ಶನಿವಾರ ಶಾಹೀನ್ ಮತ್ತು ಹಸನ್ ದಿಢೀರ್ ಮಹಿಳೆಯ ಮನೆಯೊಳಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಹೀನಕೃತ್ಯ ಮೆರೆದಿದ್ದಾರೆ ಎಂದು ವರದಿಯಾಗಿದೆ.
ಅಷ್ಟೇ ಅಲ್ಲದೆ, ಬಳಿಕ 37,000 ರೂಪಾಯಿ ನೀಡುವಂತೆ ಒತ್ತಾಯಿಸಿದರು. ಇದಕ್ಕೆ ನಿರಾಕರಿಸಿದಾಗ ಆಕೆಯನ್ನು ಸಂಬಂಧಿಕರ ಮುಂದೆಯೇ ಎಳೆದೊಯ್ದು ಮರಕ್ಕೆ ಕಟ್ಟಿ ಕೂದಲು ಕತ್ತರಿಸಿ, ಆಕೆ ಪ್ರಜ್ಞೆತಪ್ಪುವವರೆಗೂ ಚಿತ್ರಹಿಂಸೆ ನೀಡಿದ್ದಾರೆ. ಇದೀಗ ಅ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿವೆ. ಇನ್ನೂ ಮಹಿಳೆ ಎಚ್ಚರ ತಪ್ಪುತ್ತಿದ್ದಂತೆ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಂತರ ಆಕೆ ಕಾಲಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹಿಂದೂ ಪತ್ರಕರ್ತನ ಭೀಕರ ಹತ್ಯೆ: ಜಶೋರ್ ಜಿಲ್ಲೆಯ ಮಣಿರಾಂಪುರ ಉಪಜಿಲ್ಲೆಯಲ್ಲಿ ರಾಣಾ ಪ್ರತಾಪ್ ಬೈರಾಗಿ ಎಂಬ ಪತ್ರಕರ್ತ ಮಾರುಕಟ್ಟೆಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಬೈರಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅರೋಪಿಗಳ ಪತ್ತೆಗೆ ಶೋಧಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದ ಬೈರಾಗಿ, ಬಾಂಗ್ಲಾದೇಶ್ ಡೈಲಿ ಎಂಬ ಪತ್ರಿಕೆಯ ಹಂಗಾಮಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಹಿಂದೂ ಪತ್ರಕರ್ತ ಬೈರಾಗಿ ಹತ್ಯೆ ಸೇರಿದಂತೆ ಕಳೆದ 3 ವಾರದಲ್ಲಿ ಬಾಂಗ್ಲಾದೇಶದಲ್ಲಿ ದುಷ್ಕರ್ಮಿಗಳ ಹಟ್ಟಹಾಸಕ್ಕೆ ಬಲಿಯಾದ ಹಿಂದೂಗಳ ಸಂಖ್ಯೆ 5ಕ್ಕೆ ಏರಿದೆ. ಈ ಮೊದಲು ದೀಪು ಚಂದ್ರದಾಸ್, ಅಮೃತ್ ಮೊಂಡಲ್, ಬಜೇಂದ್ರ ಬಿಸ್ವಾಸ್, ಖೊಕೋನ್ ದಾಸ್‌ರ ಅವರನ್ನು ಹತ್ಯೆ ಮಾಡಿದ್ದರು.
ಇನ್ನೂ ಈ ಘಟನೆಗಳನ್ನು ಬಾಂಗ್ಲಾದೇಶದಲ್ಲಿನ ಹಿಂದೂ ಸಮುದಾಯ ಕಟುವಾಗಿ ಟೀಕಿಸಿದೆ ಮತ್ತು ಕೆಲವು ನಿರ್ದಿಷ್ಟ ಪ್ರಕರಣಗಳಲ್ಲಿ ಮಾತ್ರ ಮಾತನಾಡುವ ಪ್ರಗತಿಪರರು ಹಾಗೂ ಮಾನವ ಹಕ್ಕು ಕಾರ್ಯಕರ್ತರು ಈಗ ಏಕೆ ಸುಮ್ಮನಿದ್ದಾರೆ ಅಂತಲೂ ಪ್ರಶ್ನೆ ಮಾಡಿದೆ. ಅಲ್ಲದೆ, ಯಾವುದೇ ದೂರದ ದೇಶದಲ್ಲಿ ಆದ ಹತ್ಯೆಗಳ ಬಗ್ಗೆ ಕಂಬನಿ ಮಿಡಿಯುವ ಭಾರತದ ಚಿಂತಕರು ಪಕ್ಕದ ದೇಶದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ಈ ದೌರ್ಜನ್ಯಗಳನ್ನು ಯಾಕೆ ಪ್ರಶ್ನೆ ಮಾಡುತ್ತಿಲ್ಲ ಎನ್ನುವ ಆಕ್ರೋಶಗಳು ಭುಗಿಲೆದ್ದಿವೆ.
ಅಲ್ಲದೆ, ಬರೀ ರಾಜಕೀಯಕ್ಕಾಗಿ ಧರ್ಮ ಬಳಸಿಕೊಳ್ಳಬೇಡಿ. ಯಾವುದೇ ಹಿಂದೂಗಳು ಎಂದು ಕಟ್ಟಿರುವ ಪಕ್ಷ, ಸಂಘಟನೆಗಳು ಇರಲಿ ಮೊದಲು ಹಿಂದೂಗಳು ಕಷ್ಟದಲ್ಲಿದ್ದಾದಾಗ ಅವರ ನೆರವಿಗೆ ಬನ್ನಿ. ಆಗ ಧರ್ಮ ರಕ್ಷಣೆ ಮಾಡಿದಂತೆ ಆಗುತ್ತದೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications