ಭಾರತೀಯ ವಿದ್ಯಾರ್ಥಿ ಮೇಲೆ ಅಮೆರಿಕ ಪೊಲೀಸರ ದೌರ್ಜನ್ಯ, ವೈರಲ್ ವಿಡಿಯೋ!

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರನ್ನು ಅಮಾನುಷವಾಗಿ ನಡೆಸಿಕೊಳ್ಳಲಾಗಿದ್ದು ತೀವ್ರ ಖಂಡನೆ ವ್ಯಕ್ತವಾಗಿದೆ. ಭಾರತೀಯ ವಿದ್ಯಾರ್ಥಿಯೊಬ್ಬರನ್ನು ನೆಲಕ್ಕೆ ಕೆಡವಿ ಕೈಗಳಿಗೆ ಕೋಳ ಹಾಕಿ ಅತ್ಯಂತ ಅಮಾನುಷವಾಗಿ ನಡೆಸಿಕೊಳ್ಳಲಾಗಿದೆ. ಈ ಹಿಂಸಾತ್ಮಕ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಭಾರೀ ಖಂಡನೆ ವ್ಯಕ್ತವಾಗಿದೆ. ಅಮೆರಿಕದ ನ್ಯೂಜೆರ್ಸಿಯ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯ ಕೈಕೋಳ ಹಾಕಿ ಬಂಧಿಸಿರುವ ಆಘಾತಕಾರಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಜಾರಿಗೆ ತರುತ್ತಿರುವ ಅಕ್ರಮ ವಲಸೆ ನೀತಿಗೆ ಅಮೆರಿಕದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಪ್ರತಿಭಟನೆಯು ಉಗ್ರ ಸ್ವರೂಪವನ್ನು ಪಡೆದುಕೊಂಡಿದ್ದು. ಪ್ರತಿಭಟನಾಕಾರರು ಕಂಡ ಕಂಡ ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಇದರ ನಡುವೆ ಭಾರತೀಯ ವಿದ್ಯಾರ್ಥಿಯ ವಿಡಿಯೋ ವೈರಲ್ ಆಗಿದೆ. ಈ ನಡುವೆ ಭಾರತದಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದೆ.

Viral video of US police brutality on Indian student

ಅಮೆರಿಕ ದೇಶವು ಪ್ರಮಾಣಿಕ ಪ್ರವಾಸಿಗರು /ಕಾನೂನು ಬದ್ಧವಾಗಿ ಅಮೆರಿಕಕ್ಕೆ ಬರುವವರನ್ನು ಸ್ವಾಗತಿಸುತ್ತಲ್ಲೇ ಇದೆ. ಆದರೆ, ಅಮೆರಿಕಕ್ಕೆ ಅಕ್ರಮ ಪ್ರವೇಶ, ವೀಸಾ ದುರುಪಯೋಗ ಹಾಗೂ ಕಾನೂನು ಉಲ್ಲಂಘನೆ ಮಾಡುವುದನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹೇಳಿದೆ. ಮುಂದುವರಿದು ನಮ್ಮ ದೇಶಕ್ಕೆ ಕಾನೂನುಬದ್ಧವಾಗಿ ಬರುವವರನ್ನು ನಾವು ಆತ್ಮೀಯವಾಗಿ ಸ್ವಾಗತಿಸುತ್ತಿದ್ದೇವೆ. ಆದರೆ ಅಕ್ರಮ ಪ್ರವೇಶಗಳನ್ನು ನಾವು ಪ್ರೋತ್ಸಾಹಿಸುವುದಿಲ್ಲ.

ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು ಈ ವೀಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೇಲೆ ಭಾರತದಲ್ಲಿ ಈ ವಿಚಾರವಾಗಿ ಚರ್ಚೆ ಜೋರಾಗಿದೆ. ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕದ ಪೊಲೀಸರು ನಡೆಸಿಕೊಂಡಿರುವ ವಿಧಾನಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೊಂದು ಅಮಾನವೀಯ ಘಟನೆ ಎಂದು ಭಾರತೀಯರು ಅಭಿಪ್ರಾಯಪಡುತ್ತಿದ್ದಾರೆ.

ಕಾರಣ ವಿವರಿಸಲು ಸಾಧ್ಯವಾಗುತ್ತಿಲ್ಲ: ವಿದ್ಯಾರ್ಥಿಗಳು ತಮ್ಮ ವೀಸಾ ತೆಗೆದುಕೊಂಡೇ ವಿಮಾನಗಳನ್ನು ಹತ್ತಿದ್ದಾರೆ (ಭಾರತದಿಂದ ಅಮೆರಿಕಕ್ಕೆ ಬರುತ್ತಿದ್ದಾರೆ). ಆದರೆ, ಇಲ್ಲಿನ ಪೊಲೀಸರು ಕಾರಣ ಕೇಳಿದಾಗ ಅವರಿಗೆ ಅದಕ್ಕೆ ವಿವರಣೆ ಕೊಡುವುದಕ್ಕೆ ಸಾಧ್ಯವಾಗುತ್ತಿಲ್ಲ. ವಲಸೆ ಅಧಿಕಾರಿಗಳು ಯಾವ ಕಾರಣಕ್ಕೆ ಅಮೆರಿಕಗೆ ಭೇಟಿ ನೀಡಿದ್ದೀರಿ ಎಂದು ಪ್ರಶ್ನಿಸುವಾಗ, ಯುವಕ - ಯುವತಿಯರಿಗೆ ವಿವರಿಸಲು ಸಾಧ್ಯವಾಗುತ್ತಿಲ್ಲ. ಈ ಯುವಕರನ್ನು ಅಪರಾಧಿಗಳಂತೆ ಸಂಜೆ ವಿಮಾನದಲ್ಲಿ ಕಟ್ಟಿಹಾಕಲಾಗುತ್ತಿದೆ. ಪ್ರತಿದಿನ ಇಂತಹ ಮೂರ್ನಾಲ್ಕು ಪ್ರಕರಣಗಳು ನಡೆಯುತ್ತಿವೆ. ಕಳೆದ ಕೆಲವು ದಿನಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳಿದ್ದಾರೆ.

ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಇದಕ್ಕೆ ಪ್ರತಿಕ್ರಿಯಿಸಿದೆ. ನ್ಯೂಯಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಪ್ರಜೆಯೊಬ್ಬರಿಗೆ ತೊಂದರೆ ಆಗಿದೆ ಎನ್ನುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ನೋಡಿದ್ದೇವೆ. ಈ ನಿಟ್ಟಿನಲ್ಲಿ ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದೆ.

ಭಾರತದಲ್ಲಿ ವಾಕ್ಸಮರ: ಇನ್ನು ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕದ ಪೊಲೀಸರು ನಡೆಸಿಕೊಂಡಿರುವ ರೀತಿಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+