ಫ್ರಾನ್ಸ್‌ನಲ್ಲಿ ಕೊರೊನಾ ಆತಂಕದ ನಡುವೆಯೇ ಶಾಲೆಗಳು ಓಪನ್
ಪ್ಯಾರಿಸ್, ಆಗಸ್ಟ್ 29: ಫ್ರಾನ್ಸ್‌ನಲ್ಲಿ ದಿನೇ ದಿನೇ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದರೂ ಶಾಲೆಗಳನ್ನು ತೆರೆಯಲು ಮುಂದಾಗಿದೆ.
ಫ್ರಾನ್ಸ್‌ನಲ್ಲಿ ಶುಕ್ರವಾರ ಏಳು ಸಾವಿರಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಲಕ್ಷ ಮಂದಿಯ ಪೈಕಿ 30 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕರ್ನಾಟಕದಲ್ಲಿ ಸೆಪ್ಟೆಂಬರ್ ಅಂತ್ಯಕ್ಕೆ ತಾರಕಕ್ಕೇರಲಿದೆ ಕೊರೊನಾ ಸೋಂಕು
1.29 ಕೋಟಿ ವಿದ್ಯಾರ್ಥಿಗಳು ಮಂಗಳವಾರದಿಂದ ತರಗತಿಗೆ ಮರಳಲಿದ್ದಾರೆ ಎಂದು ಸರ್ಕಾರ ಹೇಳಿದೆ. ಹಾಗೆಯೇ ಟೂರ್ ಡಿ ಫ್ರಾನ್ಸ್ ವೃತ್ತಿಪರ ಸೈಕ್ಲಿಂಗ್ ರೇಸ್‌ಗೂ ಹಸಿರು ನಿಶಾನೆ ದೊರೆತಿದೆ.
ಉತ್ಪಾದನಾ ವಲಯವನ್ನು ಉತ್ತೇಜಿಸುವ ಹಾಗೂ ಹೊಸದಾಗಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ 1 ಲಕ್ಷ ಕೋಟಿಗೂ ಅಧಿಕ ಬಂಡವಾಳ ಹೂಡುವ ಯೋಜನೆಯನ್ನು ಘೋಷಿಸಿದ್ದಾರೆ.
ಕೊರೊನಾ ಸೋಂಕನ್ನು ತಡೆಯಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಾಕ್‌ಡೌನ್‌ನಿಂದಾಗಿ ಆರ್ಥಿಕತೆಗೆ ಪೆಟ್ಟುಬಿದ್ದಿದೆ. ಈಗ ಅದನ್ನು ಪುನಶ್ಚೇತನಗೊಳಿಸುವ ಅನಿವಾರ್ಯತೆಯೂ ಕೂಡ ಇದೆ. ಸೆಪ್ಟೆಂಬರ್ 2 ರಿಂದ ಪ್ರತಿಯೊಬ್ಬರೂ ಕೆಲಸಕ್ಕೆ ಮರಳಲಿದ್ದಾರೆ.
ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬ್ರಿಟನ್, ಜರ್ಮನಿ, ಬೆಲ್ಜಿಯಂ ಸೇರಿದಂತೆ ಯುರೋಪ್ ರಾಷ್ಟ್ರಗಳು ತಮ್ಮ ಗಡಿಗಳನ್ನು ಮುಚ್ಚಿವೆ.